113 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಿದ ಕೊಂಕಣ ರೈಲ್ವೆ

Posted By: Gururaj
Subscribe to Oneindia Kannada

ಬೆಂಗಳೂರು, ಏಪ್ರಿಲ್ 10 : ಕೆಆರ್‌ಸಿಎಲ್‌ 113 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಮೇ 12, 2018 ಕೊನೆಯ ದಿನವಾಗಿದೆ.

ಕೊಂಕಣ ರೈಲ್ವೆ ನಿಗಮ ನಿಯಮಿತ (ಕೆಆರ್‌ಸಿಎಲ್‌) 55 ಸ್ಟೇಷನ್ ಮಾಸ್ಟರ್, 37 ಗೂಡ್ಸ್ ಗಾರ್ಡ್ ಸೇರಿದಂತೆ 113 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.

200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಎನ್‌ಪಿಸಿಐಎಲ್

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಯಾವುದೇ ವಿಷಯದಲ್ಲಿ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 33 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1/7/2018ಕ್ಕೆ ಅನ್ವಯವಾಗುವಂತೆ. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5, ಓಬಿಸಿ 03 ವರ್ಷದ ವಿನಾಯತಿ ಇದೆ.

ಕೊಂಕಣ ರೈಲ್ವೆಯಲ್ಲಿ 65 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

KRCL recruitment 2018 : Apply for 113 Various posts

ಅರ್ಜಿ ಸಲ್ಲಿಸುವ ಅಅಭ್ಯರ್ಥಿಗಳು ಡೆಬಿಟ್, ಕ್ರೆಡಿಟ್ ಕಾರ್ಡ್ ಅಥವ ನೆಟ್ ಬ್ಯಾಕಿಂಗ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಎಸ್‌ಸಿ/ಎಸ್‌ಟಿ/ಮಹಿಳೆ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 250 ರೂ. ಶುಲ್ಕ, ಉಳಿದ ವರ್ಗದ ಅಭ್ಯರ್ಥಿಗಳು 500 ರೂ. ಶುಲ್ಕ ನಿಗದಿ ಮಾಡಲಾಗಿದೆ.

ಪ್ರಮುಖ ಅಂಶಗಳು

* ಕೊಂಕಣ ರೈಲ್ವೆ ನಿಗಮ ನಿಯಮಿತ

* ಒಟ್ಟು ಹುದ್ದೆಗಳು 113

* ಗೋವಾ, ಮಹಾರಾಷ್ಟ್ರ, ಕರ್ನಾಟಕ

* ಕೊನೆಯ ದಿನಾಂಕ ಮೇ 12

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Konkan Railway Corporation Limited (KRCL) issued notification for recruitment of total 113 posts. Job seekers should apply before 12th May 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ