ಕೊಂಕಣ ರೈಲ್ವೆಯಲ್ಲಿ ಕೆಲಸ, ಪದವೀಧರರು ಅರ್ಜಿ ಹಾಕಿ
Recommended Video

ಬೆಂಗಳೂರು, ಸೆಪ್ಟೆಂಬರ್ 25 : ಕೆಆರ್‌ಸಿಎಲ್ 28 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 18/10/2018 ಕೊನೆಯ ದಿನವಾಗಿದೆ.
ಕೊಂಕಣ ರೈಲ್ವೆ ಕಾರ್ಪೋರೇಷನ್ ಲಿಮಿಟೆಡ್ (ಕೆಆರ್‌ಸಿಎಲ್) ಸೀನಿಯರ್ ಸೆಕ್ಷನ್ ಇಂಜಿನಿಯರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದವರು ಮಹಾರಾಷ್ಟ್ರ, ಗೋವಾ, ಕರ್ನಾಟಕದಲ್ಲಿ ಕೆಲಸ ಮಾಡಬೇಕು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಪದವಿ (ಎಲೆಕ್ಟ್ರಿಕಲ್, ಪವರ್, ಸಿವಿಎಲ್, ಮೆಕಾನಿಕಲ್, ಆಟೋಮೊಬೈಲ್, ಪ್ರೊಡಕ್ಷನ್ ಇಂಜಿನಿಯರಿಂಗ್) ಅಥವ ಎಂಎಸ್‌ಸಿ (ಎಲೆಕ್ಟ್ರಾನಿಕ್ಸ್) ಅನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 20 ರಿಂದ 35 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 1 ಜನವರಿ 2019ಕ್ಕೆ ಅನ್ವಯವಾಗುವಂತೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 9300 -34800 ಪ್ರತಿ ತಿಂಗಳ ವೇತನ ನಿಗದಿ ಮಾಡಲಾಗಿದೆ.
ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಲ್ಪಸಂಖ್ಯಾತರು/ಆರ್ಥಿಕವಾಗಿ ಹಿಂದುಳಿದವರಿಗೆ 250 ರೂ., ಇತರ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ. ಕಂಪ್ಯೂಟರ್ ಮೂಲಕ ನಡೆಯುವ ಪರೀಕ್ಷೆ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಯಲಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications