KRIDL recruitment; ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 18; ಕರ್ನಾಟಕ ಗ್ರಾಮೀಣ ಮೂಲ ಸೌಕರ್ಯ ಅಭಿವೃದ್ಧಿ ನಿಯಮಿತ ಇಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಕರೆಯಲಾಗಿದೆ. ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಸ್ಮರ್ಧಾತ್ಮಕ ಪರೀಕ್ಷೆಗಳ ಮೂಲಕ ಹುದ್ದೆಗಳನ್ನು ಭರ್ತಿ ಮಾಡಲಿದೆ.

ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್), ಕಿರಿಯ ಅಭಿಯಂತರರು (ಸಿವಿಲ್), ಪ್ರಥಮ ದರ್ಜೆ ಸಹಾಯಕರು ಮತ್ತು ದ್ವಿತೀಯ ದರ್ಜೆ ಸಹಾಯಕರ ಹುದ್ದೆಗಳ ನೇರ ನೇಮಕಾತಿಯನ್ನು ಸ್ಮರ್ಧಾತ್ಮಕ ಪರೀಕ್ಷೆ ಮೂಲಕ ಭರ್ತಿ ಮಾಡಲಾಗುತ್ತಿದೆ.

ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರ ಅನ್ವಯ ಹಾಗೂ ಕೆಆರ್‌ಐಡಿಎಲ್ ವೃಂದ ಮತ್ತು ನೇಮಕಾತಿ ನಿಯಮಗಳ ಅನ್ವಯ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆದಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡಲು 20/4/2022 ಕೊನೆಯ ದಿನವಾಗಿದೆ.

ಸ್ಮರ್ಧಾತ್ಮಕ ಪರೀಕ್ಷೆಯನ್ನು ಬೆಂಗಳೂರು, ಮೈಸೂರು, ದಾವಣಗೆರೆ, ಬೆಳಗಾವಿ, ಕಲಬುರಗಿಯಲ್ಲಿ ನಡೆಸಲಾಗುತ್ತದೆ. ಪರೀಕ್ಷೆಗಳ ದಿನಾಂಕ ಪ್ರಕಟವಾದ ಬಳಿಕ ಪ್ರವೇಶ ಪತ್ರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಳ್ಳಬೇಕು. ಪರೀಕ್ಷೆ ದಿನಾಂಕವನ್ನು ಸಹ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ.

ಹುದ್ದೆಗಳ ವಿವರಗಳು

ಹುದ್ದೆಗಳ ವಿವರಗಳು

ಸಹಾಯಕ ಅಭಿಯಂತರರು ಗ್ರೇಡ್-1 (ಸಿವಿಲ್). ಕಲ್ಯಾಣ ಕರ್ನಾಟಕ 8, ಮಿಕ್ಕುಳಿದ ವೃಂದ 35 ಹುದ್ದೆಗಳು. ವೇತನ ಶ್ರೇಣಿ ರೂ. 43,100-83,9000.

ಕಿರಿಯ ಅಭಿಯಂತರರು (ಸಿವಿಲ್). ಕಲ್ಯಾಣ ಕರ್ನಾಟಕ 3, ಮಿಕ್ಕುಳಿದ ವೃಂದ 15 ಹುದ್ದೆ. ವೇತನ ಶ್ರೇಣಿ ರೂ. 33,450-62,600.

ಪ್ರಥಮ ದರ್ಜೆ ಸಹಾಯಕರು. ಕಲ್ಯಾಣ ಕರ್ನಾಟಕ 2, ಮಿಕ್ಕುಳಿದ ವೃಂದ 3 ಹುದ್ದೆಗಳು. ವೇತನ ಶ್ರೇಣಿ ರೂ. 27,658-52,650.

ದ್ವಿತೀಯ ದರ್ಜೆ ಸಹಾಯಕ. ಕಲ್ಯಾಣ ಕರ್ನಾಟಕ 2, ಮಿಕ್ಕುಳಿದ ವೃಂದ 8 ಹುದ್ದೆಗಳು. ವೇತನ ಶ್ರೇಣಿ ರೂ. 21,400-42,000.

ವಯೋಮಿತಿ, ಅರ್ಜಿ ಶುಲ್ಕದ ವಿವರಗಳು

ವಯೋಮಿತಿ, ಅರ್ಜಿ ಶುಲ್ಕದ ವಿವರಗಳು

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು 18 ವರ್ಷ ತುಂಬಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ಅರ್ಹತೆಗೆ 35 ವರ್ಷ. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 40 ವರ್ಷಗಳು.

ಅರ್ಜಿ ಸಲ್ಲಿಸುವ ಸಾಮಾನ್ಯ ಅರ್ಹತೆಯವರು ಮತ್ತು ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 750 ರೂ. ಮತ್ತು ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 375 ರೂ. ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ.

ಸಾಮಾನ್ಯ ಸೂಚನೆಗಳು

ಸಾಮಾನ್ಯ ಸೂಚನೆಗಳು

ಈಗಾಗಲೇ ಸರ್ಕಾರಿ ಸೇವೆಯಲ್ಲಿರುವ ಅಭ್ಯರ್ಥಿಗಳು, ಮಾಜಿ ಸೈನಿಕರು, ಎನ್‌ಸಿಸಿ ಪರಿವೀಕ್ಷಕರು, ಗ್ರಾಮ ಸಮೂಹ ಪರಿಶೀಲಕರು, ಅಂಗವಿಕಲ ಅಭ್ಯರ್ಥಿಗಳು, ಜೀತ ಕಾರ್ಮಿಕರು ಜನಗಣತಿ ಮತ್ತು ವಿಧವೆ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ನೇಮಕಾತಿ ನಿಯಮಗಳ ಅನ್ವಯ ಸಡಿಲಿಕೆ ಇರುತ್ತದೆ.

ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ. ಶೇ 40ಕ್ಕಿಂತ ಹೆಚ್ಚು ಅಂಗವಿಕಲತೆ ಹೊಂದಿರುವವರು ಮತ್ತು ಅದಕ್ಕೆ ಸಂಬಂಧಿಸಿದಂತೆ ಜಿಲ್ಲಾ ವೈದ್ಯಾಧಿಕಾರಿಗಳಿಂದ ಪ್ರಮಾಣ ಪತ್ರ ಹೊಂದಿರಬೇಕು. ಆದರೆ ರೂ. 250 ಪ್ರಕ್ರಿಯೆ ಶುಲ್ಕವನ್ನು ಅಂಗವಿಕಲ ಅಭ್ಯರ್ಥಿಗಳು ಕಡ್ಡಾಯವಾಗಿ ಪಾವತಿ ಮಾಡಬೇಕು.

ಶುಲ್ಕಗಳನ್ನು ಕಂಪ್ಯೂಟರಿಕೃತ ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿ ಮಾಡಬೇಕು. ಒಂದಕ್ಕಿಂತ ಹೆಚ್ಚು ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವುದಾದರೆ ಒಂದೇ ಅರ್ಜಿ ಸಲ್ಲಿಸಬೇಕು. ಪ್ರತ್ಯೇಕವಾಗಿ ಶುಲ್ಕ ಪಾವತಿ ಮಾಡಬೇಕು.

ಪರೀಕ್ಷೆಗಳ ಮಾಹಿತಿಗಳು

ಪರೀಕ್ಷೆಗಳ ಮಾಹಿತಿಗಳು

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು ಮತ್ತು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ನಡೆಸುವ ಸ್ಮರ್ಧಾತ್ಮಕ ಪರೀಕ್ಷೆಗಳಿಗೆ ಹಾಜರಾಗಬೇಕು. ಋಣಾತ್ಮಕ ಮೌಲ್ಯ ಮಾಪನವಿದ್ದು, ಪ್ರಶ್ನೆಗಳಿಗೆ ಹಂಚಿಕೆ ಮಾಡಲಾದ ಅಂಕಗಳಲ್ಲಿ ಪ್ರತಿ ತಪ್ಪು ಉತ್ತರಗಳಿಗೆ ನಾಲ್ಕನೇ ಒಂದು ಭಾಗದಷ್ಟು ಅಂಕ ಕಡಿತಗೊಳ್ಳಲಿದೆ.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ (ಎಸ್‌ಎಸ್‌ಎಲ್‌ಸಿ ಹಂತದಲ್ಲಿನ ಪ್ರಥಮ ಭಾಷೆ ಕನ್ನಡ ಮಟ್ಟ) ಎಲ್ಲಾ ಅಭ್ಯರ್ಥಿಗಳಿಗೆ ಗರಿಷ್ಠ 150 ಅಂಕಗಳಿಗೆ ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ ನಡೆಸಲಾಗುತ್ತದೆ.

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗೆ ವೆಬ್ ಸೈಟ್ ಗೆ ಭೇಟಿ ನೀಡಬಹುದಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+