KSET 2023: ಕೊನೆಗೂ ಈ ವರ್ಷದ ಕೆಸೆಟ್ ಪರೀಕ್ಷೆಗೆ ದಿನಾಂಕ ಫಿಕ್ಸ್: ದಿನಾಂಕ, ಅರ್ಜಿ ಸಲ್ಲಿಕೆ ವಿವರ ತಿಳಿಯಿರಿ
ಬೆಂಗಳೂರು, ಸೆಪ್ಟಂಬರ್ 11: ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ 2023 (KSET-2023) ನಡೆಸುವ ಕುರಿತು ಮಹತ್ವ ಮಾಹಿತಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದೆ. ಈವರೆಗೆ ಯಾವಾಗ ಕೆಸೆಟ್ ಪರೀಕ್ಷೆ ನಡೆಸಲಾಗುತ್ತದೆ ಎಂಬುದರ ಬಗ್ಗೆ ಮಾಹಿತಿ ಲಭ್ಯವಾಗಿರಲಿಲ್ಲ. ಇದೀಗ ನೆವೆಂಬರ್ ತಿಂಗಳಲ್ಲಿ ಕೆಸೆಟ್ 2023 ಪರೀಕ್ಷೆ ನಡೆಸುವುದಾಗಿ ಪ್ರಾಧಿಕಾರ ಮಾಹಿತಿ ನೀಡಿದೆ.
KSET 2023 ಪರೀಕ್ಷೆಗಾಗಿ ಅಭ್ಯರ್ಥಿಗಳು ಕಾದು ಕುಳಿತಿದ್ದರು. ಆದರೆ ಪರೀಕ್ಷೆ ಬಗ್ಗೆ ನಿಖರ ಮಾಹಿತಿ ಇರಲಿಲ್ಲ. ಸದ್ಯದ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಹೊರಡಿಸಿರುವ ಅಧಿಸೂಚನೆ ಪ್ರಕಾರ, ಪರೀಕ್ಷಾ ದಿನಾಂಕ ನಿಗದಿ ಮಾಡಿದೆ, ಮುಂದಿನ ನವೆಂಬರ್ 26 ರಂದು ಪರೀಕ್ಷೆಗಳು ನಡೆಯಲಿವೆ ಎಂದು ತಿಳಿಸಿದೆ.

ನವೆಂಬರ್ 26ರಂದು ಕೆಸೆಟ್ ಪರೀಕ್ಷೆ ನಡೆಯಲಿದ್ದು, ಅರ್ಹರು ಆನ್‌ಲೈನ್ ಮೂಲಕ (https://kea.kar.nic.in) ಅರ್ಜಿ ಸಲ್ಲಿಸಬೇಕು ಎಂದು ಪರೀಕ್ಷಾ ಪ್ರಾಧಿಕಾರ ಅಧಿಸೂಚನೆಯಲ್ಲಿ ತಿಳಿಸಿದೆ.
ಅರ್ಜಿ ಸಲ್ಲಿಕೆ ಹೇಗೆ?
ಸ್ನಾತಕೋತ್ತರ ಮುಗಿಸಿರುವ ಅರ್ಹ ಅಭ್ಯರ್ಥಿಗಳು ಪ್ರಾಧಿಕಾರದ ಅಧಿಕೃತ ಜಾಲತಾಣ https://kea.kar.nic.in ಜಾಲತಾಣದ ಮೂಲಕ ಸೂಕ್ತ ದಾಖಲೆ ಸಹಿತ ಅರ್ಜಿ ಸಲ್ಲಿಸಬೇಕು. ಇನ್ನೂ ಅರ್ಜಿ ಶುಲ್ಕವನ್ನು ನಿಗದಿತ ಅಂಚೆ ಕಚೇರಿಯ ಶಾಖೆಗಳಲ್ಲಿ ಪಾವತಿಸಲು ತಿಳಿಸಲಾಗಿದೆ.
ಅರ್ಜಿ ಸಲ್ಲಿಕೆ ಆರಂಭ: ಸೆಪ್ಟಂಬರ್ 11ರಿಂದ ಆರಂಭ
ಅರ್ಜಿ ಸಲ್ಲಿಕೆ ಕೊನೆ ದಿನ: ಸೆಪ್ಟಂಬರ್ 30.
ಇ-ಪೋಸ್ಟ್ ಆಫೀಸ್ ನಲ್ಲಿ ಶುಲ್ಕ ಪಾವತಿಗೆ ಅಕ್ಟೋಬರ್ 03 ಕೊನೆ ದಿನ.
ಕೆಸೆಟ್ ಪರೀಕ್ಷೆ ಶುಲ್ಕದ ಮಾಹಿತಿ
ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ ಬರೆಯಲು ಇಚ್ಚಿಸುವವರು ಅರ್ಜಿ ಸಲ್ಲಿಕೆ ಬಳಿಕ ರೂ.1,000 ಅನ್ನು ಸಾಮಾನ್ಯ ವರ್ಗ, ಪ್ರವರ್ಗ-2A, 2B, 3A, 3B ಅಭ್ಯರ್ಥಿಗಳು ಮತ್ತು ರೂ.700ಅನ್ನು ಪ್ರವರ್ಗ-1, SC, ST, PWD ಪಿಡಬ್ಲೂಡಿ, ಲಿಂಗತ್ವ ಅಲ್ಪಸಂಖ್ಯಾತರು ಪಾವತಿಸಬೇಕು. ಹೆಚ್ಚುವರಿ ಮಾಹಿತಿಗಾಗಿ ಆಸಕ್ತರು KEA ವೆಬ್‌ಸೈಟ್‌ಗೆ ಭೇಟಿ ನೀಡಲು ತಿಳಿಸಲಾಗಿದೆ.












Click it and Unblock the Notifications