• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಅಗ್ನಿಶಾಮಕ ದಳದ 1567 ಹುದ್ದೆಗಳಿಗೆ ಜೂನ್ 22ರಿಂದ ಅರ್ಜಿ ಆಹ್ವಾನ

|

ಬೆಂಗಳೂರು, ಜೂನ್ 20: ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಇಲಾಖೆಯು ವಿವಿಧ ವೃಂದಗಳ ಅಗ್ನಿಶಾಮಕ ಸಿಬ್ಬಂದಿಯ 1567 ಹುದ್ದೆಗಳಿಗೆ ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

ಅಗ್ನಿಶಾಮಕ ಠಾಣಾಧಿಕಾರಿಗಳ 36 ಹುದ್ದೆಗಳು, ಅಗ್ನಿಶಾಮಕ ಚಾಲಕರ 227 ಹುದ್ದೆಗಳು, ಚಾಲಕ ತಂತ್ರಜ್ಞರ 82 ಹುದ್ದೆಗಳು ಹಾಗೂ ಅಗ್ನಿಶಾಮಕರ 1222 ಹುದ್ದೆಗಳಿಗೆ ಈ ನೇಮಕಾತಿ ಒಳಗೊಂಡಿದೆ.

ಅಗ್ನಿಶಾಮಕ ದಳದಲ್ಲಿ 1567 ಹುದ್ದೆಗಳಿಗೆ ಅರ್ಜಿ ಆಹ್ವಾನ

ಅಂತರ್ಜಾಲ ತಾಣ www.ksp.gov.in ಲಾಗ್‍ಇನ್ ಆಗಿ ಜೂನ್ 22 ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬೇಕು. ಅರ್ಜಿಗಳನ್ನು ಸಲ್ಲಿಸಲು ಜುಲೈ 20 ಕೊನೆಯ ದಿನಾಂಕವಾಗಿದೆ.

ಅಗ್ನಿಶಾಮಕ ಮತ್ತು ತುರ್ತು ಸೇವಾ ಇಲಾಖೆಗೆ ಸೇರ್ಪಡೆಯಾಗಿ ಅಮೂಲ್ಯ ಜೀವಗಳನ್ನು ರಕ್ಷಿಸಲು ಇದೊಂದು ಸದಾವಕಾಶವಾಗಿದೆ ಎಂದು ಕರ್ನಾಟಕ ರಾಜ್ಯ ಅಗ್ನಿಶಾಮಕ ಮತ್ತು ತುರ್ತು ಸೇವೆಗಳ ಮಹಾ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

English summary
KSFES Recruitment 2020: Apply For 1,567 Fireman, Technician, Driver and Other Posts. Application opens from june 22nd.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X