ಕೆಎಸ್‌ಎಲ್‌ಯು ನೇಮಕಾತಿ; ಹುಬ್ಬಳ್ಳಿಯಲ್ಲಿ ಕೆಲಸ
ಬೆಂಗಳೂರು, ಸೆಪ್ಟೆಂಬರ್ 08: ಕರ್ನಾಟಕ ರಾಜ್ಯ ಕಾನೂನು ವಿಶ್ವವಿದ್ಯಾಲಯ 21 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 20 ಕೊನೆಯ ದಿನವಾಗಿದೆ.
Teaching assistants & guest faculty ಹುದ್ದೆಗಳ ಭರ್ತಿಯಾಗಿ ಕೆಎಸ್‌ಎಲ್‌ಯು ಅರ್ಜಿಗಳನ್ನು ಆಹ್ವಾನಿಸಿದೆ. ಆಯ್ಕೆಯಾದ ಅಭ್ಯರ್ಥಿಗಳು ಹುಬ್ಬಳ್ಳಿಯಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ, ಪಿಎಚ್‌ಡಿ, ಎನ್‌ಇಟಿ, ಎಸ್‌ಎಲ್‌ಟಿ, ಎಸ್‌ಎಲ್‌ಇಟಿಯನ್ನು ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪೂರ್ಣಗೊಳಿಸಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕೆಎಸ್‌ಎಲ್‌ಯು ನೇಮಕಾತಿ ನಿಯಮಗಳ ಪ್ರಕಾರ ವಯೋಮಿತಿ ನಿಗದಿ ಮಾಡಲಾಗಿದೆ. ಅರ್ಜಿ ಸಲ್ಲಿಸುವವರಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.
ಆನ್ ಲೈನ್‌ನಲ್ಲಿ ಮೊಬೈಲ್ ನಂಬರ್ ಮತ್ತು ಇ-ಮೇಲ್ ಐಡಿ ನೀಡಿ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ಅಗತ್ಯ ಮಾಹಿತಿಗಳನ್ನು ಭರ್ತಿ ಮಾಡಿ ಕೆಳಗಿನ ವಿಳಾಸಕ್ಕೆ ಕಳಿಸಬೇಕು.
ವಿಳಾಸ: The Registrar, Karnataka State Law University, Navanagar, Hubballi - 580025.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications