ಎಸ್‌ಎಸ್‌ಎಲ್‌ಸಿ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಇದೆ
ಬೆಂಗಳೂರು, ಜೂನ್ 21 : ಕರ್ನಾಟಕ ಪೊಲೀಸ್ 688 ಸಶಸ್ತ್ರ ಕಾನ್ಸ್ ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಜುಲೈ 5, 2018 ಕೊನೆಯ ದಿನವಾಗಿದೆ.
ಕರ್ನಾಟಕ ಪೊಲೀಸ್ 688 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 11, 600 ರಿಂದ 21,000 ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ-ಸಿಬಿಎಸ್‌ಸಿ, ಎಸ್‌ಎಸ್‌ಎಲ್‌ಸಿ-ಐಸಿಎಸ್‌ಸಿ, ಎಸ್‌ಎಸ್‌ಎಲ್‌ಸಿ-ಎಸ್‌ಎಸ್‌ಸಿ, ಎಸ್‌ಎಸ್‌ಎಲ್‌ಸಿ-ಸ್ಟೇಟ್ ಬೋರ್ಡ್, ಎಸ್‌ಎಸ್‌ಎಲ್‌ಸಿ-ತತ್ಸಮಾನ ಪರೀಕ್ಷೆಯಲ್ಲಿ ಪಾಸಾಗಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಎಸ್‌ಸಿ/ಎಸ್‌ಟಿ/ಪ್ರವರ್ಗ-1/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷಗಳು.
ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷಗಳು. (ಜುಲೈ 5, 2018)ಕ್ಕೆ ಅನ್ವಯವಾಗುವಂತೆ.
ಅರ್ಜಿ ಸಲ್ಲಿಸುವ ಸಾಮಾನ್ಯ/2ಎ/2ಬಿ/3ಎ/3ಬಿ ಅಭ್ಯರ್ಥಿಗಳು 250 ರೂ. ಶುಲ್ಕ ಪಾವತಿಸಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ-1/ಬುಡಕಟ್ಟು ಅಭ್ಯರ್ಥಿಗಳು 100 ರೂ.ಗಳು.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications