164 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಫೆಬ್ರವರಿ 20 : ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 12 ಮಾರ್ಚ್, 2018.
ಒಟ್ಟು 164 ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಪುರುಷ ಮತ್ತು ಮಹಿಳೆ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ. ವೇತನ 20000 ದಿಂದ 36300 ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು ಅಥವ ತತ್ಸಮಾನ ಕೋರ್ಸ್‌ಗಳಲ್ಲಿ ಉತ್ತೀರ್ಣರಾಗಿರಬೇಕು.

ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 21 ರಿಂದ 28, ಎಸ್‌ಸಿ/ಎಸ್‌ಟಿ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 21 ರಿಂದ 30, 2ಎ/2ಬಿ/3ಬಿ ಅಭ್ಯರ್ಥಿಗಳಿಗೂ 21 ರಿಂದ 30 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.
ಪ್ರಮುಖ ಅಂಶಗಳು
* ಒಟ್ಟು ಹುದ್ದೆಗಳು 164
* ಹುದ್ದೆ ಹೆಸರು : ಪೊಲೀಸ್ ಸಬ್ ಇನ್ಸ್‌ಪೆಕ್ಟರ್
* ಅರ್ಜಿ ಸಲ್ಲಿಸಲು ಕೊನೆ ದಿನ 12/3/2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ
ಕೆಪಿಎಸ್‌ಸಿಯಿಂದ ಅರ್ಜಿ ಆಹ್ವಾನ : ಕರ್ನಾಟಕ ಲೋಕಸೇವಾ ಆಯೋಗ 1520 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ.











Click it and Unblock the Notifications