ಪದವಿ ಪಡೆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸ ಖಾಲಿ ಇದೆ
ಬೆಂಗಳೂರು, ಮೇ 29 : ಕರ್ನಾಟಕ ರಾಜ್ಯ ಪೊಲೀಸ್ 45 ವಿವಿಧ ಹುದ್ದೆಗಳನ್ನು ಭರ್ತಿ ಮಾಡಲು ಆರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 15, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕರ್ನಾಟಕ ರಾಜ್ಯ ಪೊಲೀಸ್ ಎಸ್‌ಐ, ಎಸ್‌ಆರ್‌ಎಸ್‌ಐ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಎಸ್‌ಐ (ಕರ್ನಾಟಕ ರಾಜ್ಯ ಕೈಗಾರಿಕಾ ಭದ್ರತಾ ಪಡೆ) 17 ಹುದ್ದೆಗಳು. ಎಸ್‌ಆರ್‌ಎಸ್ಐ (ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆ) 28 ಹುದ್ದೆಗಳಿವೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿ ಮಾನ್ಯತೆ ನೀಡಿದ ಯಾವುದೇ ವಿಶ್ವವಿದ್ಯಾಲಯದಿಂದ ಪದವಿ ಪಡೆದಿರಬೇಕು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ರಿಂದ 26 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. 15 ಜೂನ್ 2018ಕ್ಕೆ ಅನ್ವಯವಾಗುವಂತೆ.

ಅರ್ಜಿ ಸಲ್ಲಿಸುವ ಸಾಮಾನ್ಯ, ಓಬಿಸಿ (2ಎ,2ಬಿ,3ಎ,3ಬಿ) ವರ್ಗದ ಅಭ್ಯರ್ಥಿಗಳು 250 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳು 100 ರೂ. ಶುಲ್ಕವನ್ನು ಪಾವತಿಸಬೇಕು.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ : 25 ಮೇ 2108.
ಅರ್ಜಿ ಸಲ್ಲಿಕೆ ಕೊನೆ ದಿನಾಂಕ 15 ಜೂನ್ 2018
ಶುಲ್ಕ ಪಾವತಿಸಲು ಕೊನೆ ದಿನಾಂಕ 18 ಜೂನ್ 2018
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications