ಎಸ್ಎಸ್‌ಎಲ್‌ಸಿ ಆದವರಿಗೆ ಪೊಲೀಸ್ ಇಲಾಖೆಯಲ್ಲಿ ಕೆಲಸವಿದೆ
Recommended Video

ಬೆಂಗಳೂರು, ಜೂನ್ 11 : ಕರ್ನಾಟಕ ಪೊಲೀಸ್ 849ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. 25 ಜೂನ್ 2018 ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನವಾಗಿದೆ.
ವಿಶೇಷ ಮೀಸಲು ಪಡೆ ಕಾನ್ಸ್‌ಟೇಬಲ್ (ಪುರುಷ) ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತ ಅಭ್ಯರ್ಥಿಗಳು ಜೂನ್ 25ರೊಳಗೆ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ವೇತನ 11600 ರಿಂದ 21000 ರೂ.ಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಎಸ್‌ಎಸ್‌ಎಲ್‌ಸಿ/ಸಿಬಿಎಸ್‌ಇ, ಎಸ್‌ಎಸ್‌ಎಲ್‌ಸಿ/ಐಸಿಎಸ್‌ಇ, ಎಸ್‌ಎಸ್‌ಎಲ್‌ಸಿ/ಎಸ್‌ಎಸ್‌ಸಿ, ಎಸ್ಎಸ್‌ಎಲ್‌ಸಿ/ಸ್ಟೇಟ್ ಬೋರ್ಡ್, ಎಸ್‌ಎಸ್‌ಎಲ್‌ಸಿ/ತತ್ಸಮಾನ ವಿದ್ಯಾರ್ಹತೆಯನ್ನು ನಿಗದಿ ಮಾಡಲಾಗಿದೆ.

ವಯೋಮಿತಿ ವಿವರ :
* ಸಾಮಾನ್ಯ ವರ್ಗದ ಅಭ್ಯರ್ಥಿಗಳು 18ರಿಂದ 25 ವರ್ಷಗಳು
* ಎಸ್‌ಸಿ/ಎಸ್‌ಟಿ/ಸಿಎಟಿ 01/2ಎ/2ಬಿ/3ಎ/3ಬಿ/ 18 ರಿಂದ 27 ವರ್ಷಗಳು
* ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷಗಳು (6 ಜೂನ್ 2018ಕ್ಕೆ ಅನ್ವಯವಾಗುವಂತೆ)
ಅರ್ಜಿ ಶುಲ್ಕ
ಅರ್ಜಿ ಸಲ್ಲಿಸುವ ಸಾಮಾನ್ಯ ವರ್ಗ/ಓಬಿಸಿ (2ಎ/2ಬಿ/3ಎ/3ಬಿ) ಅಭ್ಯರ್ಥಿಗಳು 250 ರೂ. ಶುಲ್ಕ ಪಾವತಿ ಮಾಡಬೇಕು. ಎಸ್‌ಸಿ/ಎಸ್‌ಟಿ/ಸಿಎಟಿ 1/ಬುಡಕಟ್ಟು ಅಭ್ಯರ್ಥಿಗಳಿಗೆ 100 ರೂ.ಗಳು.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications