517 ಪೊಲೀಸ್ ಪೇದೆಗಳ ಹುದ್ದೆಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 07 : ಕರ್ನಾಟಕ ರಾಜ್ಯ ಪೊಲೀಸ್ 517 ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿಗಳನ್ನು ಸಲ್ಲಿಸಲು ಆಗಸ್ಟ್ 24, 2018 ಕೊನೆಯ ದಿನವಾಗಿದೆ.
ಪೊಲೀಸ್ ಇಲಾಖೆ 517 ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕು. ವೇತನ ಶ್ರೇಣಿ 21400-42000 ರೂ. ಪ್ರತಿ ತಿಂಗಳು.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ/ಸಿಬಿಎಸ್‌ಇ, ಎಸ್‌ಎಸ್‌ಎಲ್‌ಸಿ/ಐಸಿಎಸ್‌ಇ, ಎಸ್‌ಎಸ್‌ಎಲ್‌ಸಿ/ಎಸ್‌ಎಸ್‌ಸಿ, ಎಸ್‌ಎಸ್‌ಎಲ್‌ಸಿ/ರಾಜ್ಯ ಬೋರ್ಡ್, ಎಸ್‌ಎಸ್‌ಎಲ್‌ಸಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು.

ವಯೋಮಿತಿ ವಿವರ :
* ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 18 ರಿಂದ 25 ವರ್ಷ (24/8/1993 ರಿಂದ 24/8/2008).
* ಎಸ್‌ಸಿ/ಎಸ್‌ಟಿ/ಪ್ರವರ್ಗ-1/2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 18 ರಿಂದ 27 ವರ್ಷ (24/8/1991 ರಿಂದ 24/8/2008).
*ಬುಡಕಟ್ಟು ಜನಾಂಗದ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷಗಳು. (24/8/1988 ರಿಂದ 24/8/2008).
ಅರ್ಜಿ ಶುಲ್ಕದ ವಿವರಗಳು : ಸಾಮಾನ್ಯ/ಒಬಿಸಿ (2ಎ,2ಬಿ,3ಎ/3ಬಿ) ಅಭ್ಯರ್ಥಿಗಳಿಗೆ 250 ರೂ., ಎಸ್‌ಸಿ/ಎಸ್‌ಟಿ/ಪ್ರವರ್ಗ1/ಬುಡಕಟ್ಟು ಅಭ್ಯರ್ಥಿಗಳಿಗೆ 100 ರೂ.ಗಳು. ಅರ್ಜಿ ಶುಲ್ಕವನ್ನು ಅಂಚೆ ಕಚೇರಿಯಲ್ಲಿ ಮಾತ್ರ ಪಾವತಿ ಮಾಡಬಹುದಾಗಿದೆ.
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುತ್ತದೆ.
ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications