• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕರ್ನಾಟಕ ಸಶಸ್ತ್ರ ಮೀಸಲು ಪಡೆ ಎಸ್ಐ, 40 ಹುದ್ದೆಗಳಿಗೆ ಅರ್ಜಿ ಹಾಕಿ

|

ಬೆಂಗಳೂರು, ಜುಲೈ 17: ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ನೇಮಕಾತಿ ಆರಂಭವಾಗಿದ್ದು, ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಒಟ್ಟು 203 ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಇದರಲ್ಲಿ 40 ಹುದ್ದೆಗಳು ಸಶಸ್ತ್ರ ಮೀಸಲು ಪಡೆ ಸಬ್ ಇನ್ಸ್ ಪೆಕ್ಟರ್ ಹುದ್ದೆಗಳಾಗಿದ್ದು, ಅರ್ಹ, ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಸಲ್ಲಿಸಬಹುದು.

ಕರ್ನಾಟಕ ಪೊಲೀಸ್ ಅಧಿಕೃತ ವೆಬ್ ತಾಣದಲ್ಲಿ ನೀಡಲಾಗಿರುವ ಅಧಿಸೂಚನೆ, ಸೂಚನೆ, ಎಫ್‌ಎಕ್ಯೂಗಳನ್ನು ಜಾಗರೂಕತೆಯಿಂದ ಓದಿಕೊಂಡು ಸಂಬಂಧಪಟ್ಟ ಅರ್ಜಿಯನ್ನು ಆನ್ಲೈನ್ ನಲ್ಲಿ ಸಲ್ಲಿಸಬಹುದಾಗಿದೆ.

ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನೇಮಕಾತಿ : 203 ಹುದ್ದೆಗಳಿಗೆ ಅರ್ಜಿ ಹಾಕಿ

ಸಂಸ್ಥೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್

ಹುದ್ದೆ ಹೆಸರು: Armed Reserve Sub Inspector

ಒಟ್ಟು ಹುದ್ದೆ : 40

ಉದ್ಯೋಗ ಸ್ಥಳ : ಕರ್ನಾಟಕ

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05.08.2019

ವಯೋಮಿತಿ ವಿವರ

ವಯೋಮಿತಿ ವಿವರ

* ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಠ 21 ವರ್ಷ ವಯಸ್ಸಾಗಿರಬೇಕು. ಗರಿಷ್ಠ 26 ವರ್ಷವಾಗಿರಬೇಕು.

* ಸಾಮಾನ್ಯ ಅಭ್ಯರ್ಥಿ : 21 ರಿಂದ 26 ವರ್ಷ

* ಎಸ್ ಸಿ/ ಎಸ್ಟಿ/ ಕೆಟಗೆರಿ 01, 2ಎ, 3ಎ ಹಾಗೂ 3ಬಿ : 21 ರಿಂದ 28 ವರ್ಷ

* ಸಶಸ್ತ್ರ ಮೀಸಲು ಪೊಲೀಸ್ ಸಬ್ ಇನ್ಸ್‌ಪೆಕ್ಟರ್ (ಸಿಎಆರ್/ಡಿಎಆರ್) 26 ವರ್ಷ, * ಸೇವಾನಿರತ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ

- ಸಾಮಾನ್ಯ ಅಭ್ಯರ್ಥಿ: 21 ರಿಂದ 35 ವರ್ಷ

* ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಮತ್ತು ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 21 ರಿಂದ 40 ವರ್ಷ.

ವಿದ್ಯಾರ್ಹತೆ, ಅರ್ಜಿ ಶುಲ್ಕ

ವಿದ್ಯಾರ್ಹತೆ, ಅರ್ಜಿ ಶುಲ್ಕ

ಅರ್ಜಿ ಶುಲ್ಕ:

* ಸಾಮಾನ್ಯ ವರ್ಗ, ಪ್ರವರ್ಗ 2 (ಎ), 2 (ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ. ಶುಲ್ಕ,

* ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ - 1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ಶುಲ್ಕ ನಿಗದಿಮಾಡಲಾಗಿದೆ.

ವಿದ್ಯಾರ್ಹತೆ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯುಜಿಸಿಯಿಂದ ಮಾನ್ಯತೆ ಪಡೆದಿರುವ ಅಂಗೀಕೃತ ವಿಶ್ವವಿದ್ಯಾಲಯದಲ್ಲಿ ಪದವಿ ಅಥವ ತತ್ಸಮಾನ ಪದವಿಯನ್ನು ಅರ್ಜಿ ಸಲ್ಲಿಸಲು ನಿಗದಿಪಡಿಸಿರುವ ಕೊನೆಯ ದಿನಾಂಕಕ್ಕೆ ಹೊಂದಿರಬೇಕು.

ನೇಮಕಾತಿ ಪ್ರಕ್ರಿಯೆ ಇನ್ನಿತರ ವಿವರ

ನೇಮಕಾತಿ ಪ್ರಕ್ರಿಯೆ ಇನ್ನಿತರ ವಿವರ

15/7/2019 ರಿಂದ 5/8/2019ರ ಸಂಜೆ 6 ಗಂಟೆಯ ತನಕ ಅರ್ಜಿಗಳನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳಿಗೆ ಅವಕಾಶವನ್ನು ನೀಡಲಾಗಿದೆ. ಅಧಿಕೃತ ಬ್ಯಾಂಕ್ ಖಾತೆ ಅಥವ ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಲು 7/8/2019 ಕೊನೆಯ ದಿನವಾಗಿದೆ

ಸಂಬಳ ನಿರೀಕ್ಷೆ: 37,900 ರು ನಿಂದ 70,850/ ಪ್ರತಿ ತಿಂಗಳು

ನೇಮಕಾತಿ ಪ್ರಕ್ರಿಯೆ ಇನ್ನಿತರ ವಿವರ

ನೇಮಕಾತಿ ಪ್ರಕ್ರಿಯೆ ಇನ್ನಿತರ ವಿವರ

ನೇಮಕಾತಿ ಪ್ರಕ್ರಿಯೆ ಇನ್ನಿತರ ವಿವರ

ಅಭ್ಯರ್ಥಿಯು ವಿಶ್ವವಿದ್ಯಾಲಯದಲ್ಲಿ ಪದವಿ ಅಥವ ತತ್ಸಮಾನ ಪದವಿ ಪ್ರಮಾಣ ಪತ್ರ ಸೇರಿದಂತೆ ವಿವಿಧ ಶೈಕ್ಷಣಿಕ, ಜಾತಿ ಪ್ರಮಾಣ ಪತ್ರ ಪರಿಶೀಲನೆ. ದೈಹಿಕ ಸಾಮರ್ಥ್ಯ ಪರೀಕ್ಷೆ, ಲಿಖಿತ ಪರೀಕ್ಷೆ, ಮೌಖಿಕ ಪರೀಕ್ಷೆ

ಪ್ರಮುಖ ದಿನಾಂಕ:

ಆನ್ಲೈನ್ ನಲ್ಲಿ ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 15.07.2019

ಅರ್ಜಿ ಸಲ್ಲಿಸಲು ಕೊನೆ ದಿನಾಂಕ : 05.08.2019

ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
KSP recruitment 2019 notification has been released on official website for the recruitment of 40 vacancies at Karnataka State Police. The candidate who is looking for Armed Reserve Sub Inspector can apply online application on or before 05-08-2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X