ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

KSP Recruitment 2022: 3484 ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿವೆ

|
Google Oneindia Kannada News

ಬೆಂಗಳೂರು, ಸೆಪ್ಟೆಂಬರ್ 13: ಕರ್ನಾಟಕ ರಾಜ್ಯ ಪೊಲೀಸ್ ಇಲಾಖೆ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಿದೆ. ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗೆ ಅರ್ಹರಾದ ಆಸಕ್ತ ಅಭ್ಯರ್ಥಿಗಳು ತಮ್ಮ ಅರ್ಜಿಯನ್ನು ಅಕ್ಟೋಬರ್ 31, 2022ರೊಳಗೆ ಸಲ್ಲಿಸಬಹುದು.

ಸಂಸ್ಥೆ ಹೆಸರು: ಕರ್ನಾಟಕ ರಾಜ್ಯ ಪೊಲೀಸ್( KSP)
ಹುದ್ದೆ ಹೆಸರು: ಪೊಲೀಸ್ ಕಾನ್ಸ್ ಟೇಬಲ್ (CAR/ DAR)
ಒಟ್ಟು ಹುದ್ದೆ: 3484
ಉದ್ಯೋಗ ಸ್ಥಳ: ಕರ್ನಾಟಕ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: ಅಕ್ಟೋಬರ್ 31, 2022
ಸಂಬಳ ವಿವರ: 23,500 ರು ನಿಂದ 47,650 ರು ಪ್ರತಿ ತಿಂಗಳಿಗೆ

KKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳುKKRTC Recruitment 2022 : ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ನೇಮಕಾತಿ, ವಿವರಗಳು

ಹುದ್ದೆಗಳ ವಿವರ
ಹುದ್ದೆ ಹೆಸರು- ಒಟ್ಟು ಹುದ್ದೆ
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR)- ಕರ್ನಾಟಕ: 3064
ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (CAR/ DAR) -ಕಲ್ಯಾಣ ಕರ್ನಾಟಕ: 420

ವಿದ್ಯಾರ್ಹತೆ, ವಯೋಮಿತಿ, ಅರ್ಜಿ ಶುಲ್ಕ, ಶುಲ್ಕ ಪಾವತಿ ವಿಧಾನ, ಅರ್ಜಿ ಸಲ್ಲಿಸುವ ವಿಧಾನ ಇನ್ನಿತರ ವಿವರಗಳಿಗೆ ಮುಂದೆ ಓದಿ..

ವಿದ್ಯಾರ್ಹತೆ

ವಿದ್ಯಾರ್ಹತೆ

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿದ್ಯಾಸಂಸ್ಥೆಯಿಂದ 10ನೇ ತರಗತಿ ಪಾಸಾಗಿರಬೇಕು ಅಥವಾ ತತ್ಸಮಾನ ವಿದ್ಯಾರ್ಹತೆ

ಸಶಸ್ತ್ರ ಪೊಲೀಸ್ ಕಾನ್ಸ್ ಟೇಬಲ್ (ಪುರುಷ) ಹುದ್ದೆಗಳ ಆಯ್ಕೆಯ ಸಲುವಾಗಿ ಕಂಡಿಕೆ 1ರಲ್ಲಿ ನಮೂದಿಸಿರುವ ವೃಂದ ಮತ್ತು ನೇಮಕಾತಿ(ತಿದ್ದುಪಡಿ) ನಿಯಮ 2019ರ ಅನ್ವಯ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ/10ನೇ ತರಗತಿ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು( ಅರ್ಜಿ ಸಲ್ಲಿಸಲು ನಿಗದಿಪಡಿಸುವ ದಿನಾಂಕ ಅಕ್ಟೋಬರ್ 31,2022ಕ್ಕೆ ಅನ್ವಯವಾಗುವಂತೆ)

SBI Recruitment 2022: 5008ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ

ತತ್ಸಮಾನ ವಿದ್ಯಾರ್ಹತೆ ವಿವರ:
ಸಿಬಿಎಸ್ ಇ ಮತ್ತು ಐಸಿ ಎಸ್ ಇ ಮಂಡಳಿಯ ಕ್ಲಾಸ್ 10 ಪರೀಕ್ಷೆ ಪಾಸ್,
ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿ ಕ್ಲಾಸ್ 10 ಪರೀಕ್ಷೆ ಪಾಸ್,
ನ್ಯಾಷನಲ್ ಇನ್ಸ್ಟಿ ಟ್ಯೂಟ್ ಆಫ್ ಓಪನ್ ಸ್ಕೂಲಿಂಗ್ ವತಿಯಿಂದ ಪ್ರೌಢ ಶಿಕ್ಷಣ ಕೋರ್ಸ್/ ಎಚ್ ಎಸ್ ಸಿ,

ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಕೆಓಎಸ್ ಪರೀಕ್ಷೆ ಪಾಸ್

ವಯೋಮಿತಿ

ವಯೋಮಿತಿ

ವಯೋಮಿತಿ
ಕನಿಷ್ಠ: 18 ವರ್ಷ
ಗರಿಷ್ಠ: 25 ವರ್ಷ
ಕೆಟಗೆರಿ 2ಎ/2ಬಿ/3ಎ ಹಾಗೂ 3ಬಿ ಅಭ್ಯರ್ಥಿಗಳಿಗೆ: 3 ವರ್ಷ ಹಾಗೂ ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷಗಳ ತನಕ ವಿನಾಯಿತಿ.

ಅರ್ಜಿಯನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 31.10.2022ಕ್ಕೆ ಪುರುಷ ಮತ್ತು ತೃತೀಯ ಲಿಂಗದ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು ಹಾಗೂ ಈ ಕೆಳಕಂಡ ವಯಸ್ಸಿನ ಮಿತಿ ಮೀರೀರಬಾರದು.

ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಹಾಗೂ ಇತರೆ ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷ
ಇತರೆ ಅಭ್ಯರ್ಥಿಗಳಿಗೆ 25 ವರ್ಷ
ಕರ್ನಾಟಕ ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು

ಮಾಜಿ ಯೋಧರಾಗಿದ್ದರೆ ಸೇವಾವಧಿ ಜೊತೆಗೆ ಹೆಚ್ಚುವರಿ 03 ವರ್ಷಗಳ ರಿಯಾಯಿತಿ ಸಿಗಲಿದೆ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ಅಧಿಸೂಚನೆಯಲ್ಲಿ ಪಡೆದುಕೊಳ್ಳಬಹುದು.

ಕೆಪಿಎಸ್‌ಸಿ ನೇಮಕಾತಿ; ಸಹಾಯಕ ಕಾರ್ಯಪಾಲಕ ಇಂಜಿನಿಯರ್ 18 ಹುದ್ದೆಗಳು
ಅರ್ಜಿಶುಲ್ಕ

ಅರ್ಜಿಶುಲ್ಕ

ಅರ್ಜಿಶುಲ್ಕ:
ಪೊಲೀಸ್ ಕಾನ್ಸ್‌ಟೇಬಲ್ ಹುದ್ದೆಗಳಿಗೆ ಸಾಮಾನ್ಯ, ಪ್ರವರ್ಗ 2(ಎ), 2 (ಬಿ), 3(ಎ), 3(ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 400 ರೂ.ಗಳು. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ ರೂ. 200 ರೂ.ಗಳು.

ಸಾಮಾನ್ಯ ಅಭ್ಯರ್ಥಿ, ಪ್ರವರ್ಗ 2ಎ, 2ಬಿ, 3ಬಿ: 400 ರು

ನಿಗದಿತ ಅರ್ಜಿ ಶುಲ್ಕವನ್ನು ಆನ್ ಲೈನ್ ಮುಖಾಂತರ ಪಾವತಿಸಬಹುದು ಹಾಗೂ ಚಲನ್ ಡೌನ್ ಲೋಡ್ ಮಾಡಿಕೊಂಡು ಕೆನರಾ ಬ್ಯಾಂಕ್ ಮತ್ತು ಸ್ಥಳೀಯ ಅಂಚೆ ಕಚೇರಿಗಳಲ್ಲಿ ಪಾವತಿಸಬಹುದು. ಆನ್ ಲೈನ್ ಬ್ಯಾಂಕ್ / ಅಂಚೆ ಕಚೇರಿಯಲ್ಲಿ ಅರ್ಜಿ ಶುಲ್ಕದೊಂದಿಗೆ ಸೇವಾ ಶುಲ್ಕವನ್ನು ಅಭ್ಯರ್ಥಿಗಳೇ ಪಾವತಿಸಬೇಕು. ಬ್ಯಾಂಕ್ ಅಧಿಕೃತ ಶಾಖೆಗಳಲ್ಲಿ ಪಾವತಿಸಿ ನಂತರ ಚಲನ್‌ನ ಪ್ರತಿಯನ್ನು ಅಭ್ಯರ್ಥಿ ಇಟ್ಟುಕೊಂಡಿರಬೇಕು

ನೇಮಕಾತಿ ಪ್ರಕ್ರಿಯೆ

ನೇಮಕಾತಿ ಪ್ರಕ್ರಿಯೆ

ನೇಮಕಾತಿ ಪ್ರಕ್ರಿಯೆ: ಲಿಖಿತ ಪರೀಕ್ಷೆ, ದೈಹಿಕ ಸಾಮರ್ಥ್ಯ ಪರೀಕ್ಷೆ, ವೈದ್ಯಕೀಯ ಪರೀಕ್ಷೆ

ಪರೀಕ್ಷೆಯ ದಿನಾಂಕವನ್ನು ಮುಂದೆ ಜಾಹೀರಾತು ಪಡಿಸಲಾಗುವುದು ಹಾಗೂ ಪೊಲೀಸ್ ಇಲಾಖೆಯ ವೆಬ್ ಸೈಟ್ ಮೂಲಕ https://ksp.karnataka.gov.in or https://ksp-recruitment.in/ ಪ್ರಕಟಿಸಲಾಗುವುದು. ಆದ್ದರಿಂದ ಅಭ್ಯರ್ಥಿಗಳು ಇಲಾಖೆಯ ವೆಬ್ ಸೈಟ್ ಆಗಾಗ ನೋಡುತ್ತಿರಬೇಕಾಗುತ್ತದೆ.
ಪರೀಕ್ಷೆಯನ್ನು ಸಂಬಂಧಪಟ್ಟ ಘಟಕಗಳ ಕೇಂದ್ರಗಳಲ್ಲಿ ಮಾತ್ರ ನಡೆಸಲಾಗುವುದು. ಆಯ್ಕೆ ಸಮಿತಿಯು
ಯಾವುದೇ ಪರೀಕ್ಷಾ ಕೇಂದ್ರವನ್ನು ರದ್ದುಪಡಿಸುವ ಅಥವಾ ಹೊಸದಾಗಿ ಸೇರಿಸುವ ಹಕ್ಕನ್ನು
ಕಾಯ್ದಿರಿಸಿಕೊಂಡಿರುತ್ತದೆ.

ಪರೀಕ್ಷೆ ಕಾಲ್ ಲೆಟರ್ (ಪ್ರವೇಶ ಕರೆ ಪತ್ರ) ಪ್ರತ್ಯೇಕವಾಗಿ ಅಂಚೆ ಮುಖಾಂತರ ನೀಡಲಾಗುವುದಿಲ್ಲ. ಇದನ್ನು ಅಧಿಕೃತ ವೆಬ್ ಸೈಟ್ ಮೂಲಕವೇ ಡೌನ್ ಲೋಡ್ ಮಾಡಿಕೊಳ್ಳತಕ್ಕದ್ದು.

ಪರೀಕ್ಷೆ ಸಂದರ್ಭದಲ್ಲಿ ಗುರುತಿನ ಚೀಟಿ, ಕರೆ ಪತ್ರ, ಆನ್ ಲೈನ್ ಅರ್ಜಿ ಜೆರಾಕ್ಸ್ ಪ್ರತಿ ಕಡ್ಡಾಯವಾಗಿ ತರಬೇಕು.

ನಬಾರ್ಡ್ ನೇಮಕಾತಿ 2022: 177 ಸಹಾಯಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಅರ್ಜಿ ಸಲ್ಲಿಸುವ ವಿಧಾನ

ಅರ್ಜಿ ಸಲ್ಲಿಸುವ ವಿಧಾನ

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 19/09/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 31/10/2022

ಅರ್ಜಿ ಸಲ್ಲಿಸುವ ವಿಧಾನ:

ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಇಲಾಖೆಯ www.recruitment.ksp.gov.in ನಲ್ಲಿ ನೀಡಲಾಗಿರುವ ಸೂಚನೆಯನ್ನು ಓದಿಕೊಂಡು ಯಾವುದೇ ತಪ್ಪು ಮಾಹಿತಿ ನೀಡದೇ ಅರ್ಜಿಯನ್ನು ಭರ್ತಿ ಮಾಡಬೇಕು. ತಪ್ಪು ಮಾಹಿತಿಯನ್ನು ನೀಡಿದರೆ ಕಾನೂನಿಯ ಅನ್ವಯ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಲಾಗಿದೆ.

* ಆನ್ ಲೈನ್ ಮೂಲಕ ಅರ್ಜಿ ಸಲ್ಲಿಸುವಾಗ ನಿಮ್ಮ ಇಮೇಲ್ ಐಡಿ, ಮೊಬೈಲ್ ಸಂಖ್ಯೆ ನೀಡಿ, ಅಗತ್ಯ ದಾಖಲೆ(ವಯಸ್ಸಿನ ದೃಢೀಕರಣ ಪತ್ರ, ಜಾತಿ ಪ್ರಮಾಣ ಪತ್ರ, ಗುರುತಿನ ಚೀಟಿ, ವಿದ್ಯಾರ್ಹತೆ, ಅನುಭವ.. ಇತರೆ ಮಾಹಿತಿ) ಇಟ್ಟುಕೊಳ್ಳಿ.
* KSP Civil Police Constable ಮೇಲೆ ಕ್ಲಿಕ್ ಮಾಡಿ ಅರ್ಜಿ ಭರ್ತಿ ಮಾಡಿ
* ಅಗತ್ಯವಿರುವ ಕಡೆ ಭಾವಚಿತ್ರಮ್ ಸ್ಕ್ಯಾನ್ ಆಗಿರುವ ಪ್ರಮಾಣಪತ್ರಗಳನ್ನು ಲಗತ್ತಿಸಿ
* ಭರ್ತಿಯಾದ ಅರ್ಜಿಯನ್ನು ಸಲ್ಲಿಸಿ, ಸ್ವೀಕೃತಿ ಪತ್ರ/ಸಂಖ್ಯೆಯನ್ನು ಪಡೆದುಕೊಳ್ಳಿ

ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ಸಮಸ್ಯೆ ಎದುರಾದಲ್ಲಿ ಸಹಾಯವಾಣಿ 080-22943346 ಅನ್ನು ̧ಸಂಪರ್ಕಿಸಿ ಅಗತ್ಯ ಮಾಹಿತಿ ಪಡೆದು ಅರ್ಜಿ ಸಲ್ಲಿಸಬಹುದು.
ಆನ್ ಲೈನ್ ಮೂಲಕ ಅರ್ಜಿಯನ್ನು ಭರ್ತಿ ಮಾಡುವ ಸಂದರ್ಭದಲ್ಲಿ ತಾಂತ್ರಿಕ ತೊಂದರೆ ಎದುರಾದಲ್ಲಿ
ಅದನ್ನು ಸ್ಥಗಿತಗೊಳಿಸಿ ಮತ್ತೊಮ್ಮೆ ಅಧಿಕೃತ ವೆಬ್ ಸೈಟ್ ನಲ್ಲಿ ನೀಡಲಾಗಿರುವ ಅರ್ಜಿಯನ್ನು ಭರ್ತಿ ಮಾಡಲು ತಿಳಿಸಲಾಗಿದೆ.

ಹಾಗೂ ಇನ್ನಿತರ ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

English summary
KSP recruitment 2022: A notification has been released on official website for the recruitment of 3484 vacancies at Karnataka State Police (KSP).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X