ಕೆ. ಎಸ್. ಆರ್. ಪಿ ಕಾನ್ಸ್‌ಟೇಬಲ್ ನೇಮಕಾತಿ; 2672 ಹುದ್ದೆಗಳು
ಬೆಂಗಳೂರು, ಮೇ 06 : ಕರ್ನಾಟಕ ರಾಜ್ಯ ಮೀಸಲು ಪೊಲೀಸ್ ಪಡೆಯಲ್ಲಿ ಕಾನ್ಸ್‌ಟೇಬಲ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ 15/6/2020ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಒಟ್ಟು 2672 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಪೊಲೀಸ್ ಇಲಾಖೆಯಲ್ಲಿ ವೃತ್ತಿ ಜೀವನವನ್ನು ಇಚ್ಛಿಸುವ ಧೈರ್ಯಶಾಲಿ, ಶಿಸ್ತುಬದ್ಧ ಹಾಗೂ ಸೇವಾಯುಕ್ತ ಯುವಕರು ಕೆ. ಎಸ್. ಆರ್. ಪಿ ಸೇವೆಗೆ ಸೇರಬಹುದಾಗಿದೆ.
ಮೇ 5ರಂದು ಈ ಕುರಿತು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಜೂನ್ 15ರ ತನಕ ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.
ಅರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ಗೆ ಭೇಟಿ ನೀಡಿ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಂಡು ಅರ್ಜಿಗಳನ್ನು ಸಲ್ಲಿಸಬೇಕು. ಖುದ್ದಾಗಿ ಅಥವ ಅಂಚೆ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿಲ್ಲ.

ಹುದ್ದೆಗಳ ವಿವರಗಳು
ವಿಶೇಷ ರಿಸರ್ವ್ ಪೊಲೀಸ್ ಕಾನ್ಸ್‌ಟೇಬಲ್ (ಕೆಎಸ್ಆರ್‌ಪಿ) 2420 ಹುದ್ದೆಗಳು. ಬ್ಯಾಂಡ್ಸ್‌ಮನ್ (ಕೆಎಸ್‌ಆರ್‌ಪಿ) 252 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ.

ವಯೋಮಿತಿ, ಅರ್ಹತೆ
ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಕನಿಷ್ಠ 18 ವರ್ಷದ ವಯೋಮಿತಿ ನಿಗದಿಪಡಿಸಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ 25, ಎಸ್‌ಸಿ/ಎಸ್‌ಟಿ/ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 27 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ವಿದ್ಯಾರ್ಹತೆ ವಿವರಗಳು
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಎಸ್‌ಎಸ್‌ಎಲ್‌ಸಿ ಅಥವ 10ನೇ ತರಗತಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆ ಹೊಂದಿರಬೇಕು.

ಅರ್ಜಿ ಶುಲ್ಕದ ವಿವರ
ಅರ್ಜಿಗಳನ್ನು ಸಲ್ಲಿಸಿದ ಸಾಮಾನ್ಯ ವರ್ಗ/ಹಿಂದುಳಿದ ವರ್ಗದ ಅಭ್ಯರ್ಥಿಗಳು 250 ರೂ., ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ-1ರ ಅಭ್ಯರ್ಥಿಗಳಿಗೆ ರೂ. 100ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಅಂಚೆ ಕಚೇರಿಯಲ್ಲಿ ಅಥವ ಅಧಿಸೂಚನೆಯಲ್ಲಿ ಸೂಚಿಸಿದ ಬ್ಯಾಂಕ್‌ನಲ್ಲಿ ಪಾವತಿ ಮಾಡಬೇಕು.












Click it and Unblock the Notifications