ಕೆಎಸ್ಆರ್‌ಪಿ 597 ಪೊಲೀಸ್ ಕಾನ್ಸ್‌ಟೇಬಲ್ ನೇಮಕಾತಿ ವಿವರ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 08 : ಕರ್ನಾಟಕ ರಾಜ್ಯದ ಪೊಲೀಸ್ ಇಲಾಖೆಯಲ್ಲಿ ವಿಶೇಷ ರಿಸರ್ವ ಪೊಲೀಸ್ ಕಾನ್ಸ್‌ಟೇಬಲ್ (ಪುರುಷ ಮತ್ತು ಮಹಿಳಾ) ಕೆಎಸ್ಆರ್‌ಪಿ ಹುದ್ದೆಗಳ ನೇಮಕಾತಿಗಾಗಿ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಆಗಸ್ಟ್ 31, 2016 ಕೊನೆಯ ದಿನಾಂಕವಾಗಿದೆ.

ವಿಶೇಷ ರಿಸರ್ವ ಪೊಲೀಸ್ ಕಾನ್ಸ್‌ಟೇಬಲ್ (ಕೆ.ಎಸ್.ಆರ್‌.ಪಿ) ಪುರುಷ 545 ಹುದ್ದೆಗಳು, ವಿಶೇಷ ರಿಸರ್ವ ಪೊಲೀಸ್ ಕಾನ್ಸ್‌ಟೇಬಲ್ (ಕೆ.ಎಸ್.ಆರ್‌.ಪಿ) ಮಹಿಳಾ 52 ಹುದ್ದೆಗಳು. ಒಟ್ಟು 597 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.[530 ಕಾನ್ಸ್ ಟೇಬಲ್ ನೇಮಕಾತಿಗೆ ಅರ್ಜಿ ಆಹ್ವಾನ]

KSRP police constable recruitment notification August 2016

ವಯೋಮಿತಿ : ಅರ್ಜಿಯನ್ನು ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಂದರೆ 31/8/2016ಕ್ಕೆ ಅಭ್ಯರ್ಥಿಗೆ ಕನಿಷ್ಠ 18 ವರ್ಷ ವಯಸ್ಸಾಗಿರಬೇಕು. ಪ.ಜಾ/ಪ.ಪಂ ಹಾಗೂ ಇತರೆ ಹಿಂದುಳಿದ ವರ್ಗಗಳಿಗೆ ಸೇರಿದ ಅಭ್ಯರ್ಥಿಗಳಿಗೆ 27 ವರ್ಷ ಗರಿಷ್ಠ ವಯೋಮಿತಿ. ಇತರ ಅಭ್ಯರ್ಥಿಗಳಿಗೆ 25 ವರ್ಷಗಳು. ಕರ್ನಾಟಕ ಅರಣ್ಯ ಪ್ರದೇಶದಲ್ಲಿ ವಾಸಿಸುತ್ತಿರುವ ಬುಡಕಟ್ಟು ಅಭ್ಯರ್ಥಿಗಳಿಗೆ 30 ವರ್ಷಗಳು.[ಅರ್ಜಿ ಸಲ್ಲಿಸಲು ವಿಳಾಸ]

ಅರ್ಜಿ ಶುಲ್ಕ : ಸಾಮಾನ್ಯ ವರ್ಗ/ಪ್ರವರ್ಗ 2 (ಎ), 2 (ಬಿ), 3(ಎ), 3 (ಬಿ)ಗೆ ಸೇರಿದ ಅಭ್ಯರ್ಥಿಗಳಿಗೆ 250 ರೂ., ಪ.ಜಾ/ಪ.ಪಂ/ಪ್ರವರ್ಗ-1ಕ್ಕೆ ಸೇರಿದ ಅಭ್ಯರ್ಥಿಗಳಿಗೆ 100 ರೂ. ನಿಗದಿತ ಅರ್ಜಿ ಶುಲ್ಕವನ್ನು ಸ್ಟೇಟ್ ಬ್ಯಾಂಕ್ ಆಫ್ ಮೈಸೂರು, ಸ್ಟೇಟ್ ಬ್ಯಾಂಕ್ ಆಫ್ ಹೈದರಾಬಾದ್ ಶಾಖೆಗಳಲ್ಲಿ ಚಲನ್ ನೀಡಿ ಪಾವತಿ ಮಾಡಬಹುದು.[ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

education

* ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 31/8/2016 ಸಂಜೆ 6 ಗಂಟೆ

* ಅಧಿಕೃತ ಬ್ಯಾಂಕ್ ಶಾಖೆಗಳಲ್ಲಿ ಶುಲ್ಕ ಪಾವತಿ ಮಾಡಲು ಕೊನೆಯ ದಿನಾಂಕ 2/9/2016

* ಅರ್ಜಿ ಸಲ್ಲಿಸುವಾಗ ಗೊಂದಲಗಳು ಉಂಟಾದರೆ ಕರೆ ಮಾಡಲು ಸಹಾಯವಾಣಿ ಸಂಖ್ಯೆ 080-22943346.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Karnataka police department invited applications for the post of special Karnataka State Reserve Police(KSRP) constable recruitment men and women. August 31, 2016 last date to submit application.
Please Wait while comments are loading...