Get Updates
Get notified of breaking news, exclusive insights, and must-see stories!

ಇದು KSRTC ಕೊಡುಗೆ: ಅಲ್ಪಸಂಖ್ಯಾತ ಯುವಜನರಿಗೆ ಊಟ - ವಸತಿ ಸಹಿತ ಉಚಿತ ಡ್ರೈವಿಂಗ್ ತರಬೇತಿ

ಬೆಂಗಳೂರು: ಉದ್ಯೋಗದ ನಿರೀಕ್ಷೆಯಲ್ಲಿರುವ ಅಲ್ಪಸಂಖ್ಯಾತ ಸಮುದಾಯದ ಯುವಕ-ಯುವತಿಯರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) ಮತ್ತು ಅಲ್ಪಸಂಖ್ಯಾತರ ನಿರ್ದೇಶನಾಲಯ ಭರ್ಜರಿ ಸಿಹಿಸುದ್ದಿ ನೀಡಿದೆ. ನಿರುದ್ಯೋಗಿ ಯುವಜನತೆಗೆ ಸ್ವಯಂ ಉದ್ಯೋಗ ಕಲ್ಪಿಸುವ ಹಾಗೂ ಸಾರಿಗೆ ಕ್ಷೇತ್ರದಲ್ಲಿ ವಿಪುಲವಾಗಿರುವ ಉದ್ಯೋಗಾವಕಾಶಗಳನ್ನು ಸದುಪಯೋಗಪಡಿಸಿಕೊಳ್ಳುವ ನಿಟ್ಟಿನಲ್ಲಿ ಉಚಿತ 'ಲಘು ಮತ್ತು ಭಾರೀ ವಾಹನ ಚಾಲನಾ ತರಬೇತಿ' (Free Driving Training) ಶಿಬಿರವನ್ನು ಆಯೋಜಿಸಲಾಗಿದೆ. ಈ ತರಬೇತಿಯು ಸಂಪೂರ್ಣ ಉಚಿತವಾಗಿದ್ದು, ತರಬೇತಿ ಪಡೆಯುವ ಅಭ್ಯರ್ಥಿಗಳಿಗೆ ಉಚಿತ ವಸತಿ, ಊಟ ಹಾಗೂ ತರಬೇತಿಯ ಬಳಿಕ ಡ್ರೈವಿಂಗ್ ಲೈಸೆನ್ಸ್ (DL) ಸಹ ನೀಡಲಾಗುತ್ತಿದೆ.

ಈಗಾಗಲೇ ಪಿ.ಎಂ.ಅಜಯ್ (PM-AJAY) ಯೋಜನೆಯಡಿ ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯ ಸಹಯೋಗದೊಂದಿಗೆ ಪರಿಶಿಷ್ಟ ಜಾತಿಯ 500 ಫಲಾನುಭವಿಗಳಿಗೆ ಭಾರೀ ವಾಹನ ಚಾಲನಾ ತರಬೇತಿ ನೀಡಿ, ಸಾರಿಗೆ ಇಲಾಖೆಯ ಪರವಾನಗಿ ನೀಡುವ ಕಾರ್ಯವು ಕೆಎಸ್‌ಆರ್‌ಟಿಸಿ ನಿಗಮದ ತರಬೇತಿ ಕೇಂದ್ರಗಳಲ್ಲಿ ಯಶಸ್ವಿಯಾಗಿ ಪ್ರಗತಿಯಲ್ಲಿದೆ. ಫಲಾನುಭವಿಗಳಿಂದ ಈ ಯೋಜನೆಗೆ ಅತ್ಯುತ್ತಮ ಪ್ರತಿಕ್ರಿಯೆ ವ್ಯಕ್ತವಾಗಿರುವ ಹಿನ್ನೆಲೆಯಲ್ಲಿ, ಇದೀಗ ಇದೇ ಮಾದರಿಯಲ್ಲಿ ಅಲ್ಪಸಂಖ್ಯಾತ ನಿರ್ದೇಶನಾಲಯವು ಅಲ್ಪಸಂಖ್ಯಾತ ಸಮುದಾಯದ ಅಭ್ಯರ್ಥಿಗಳಿಗೂ ಉಚಿತ ವಾಹನ ಚಾಲನಾ ತರಬೇತಿಯನ್ನು ಹಮ್ಮಿಕೊಳ್ಳಲು ನಿರ್ಧರಿಸಿದೆ.

KSRTC Free Driving Training

ಯಾರು ಅರ್ಹರು?

ಅಲ್ಪಸಂಖ್ಯಾತ ಸಮುದಾಯಕ್ಕೆ ಸೇರಿದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಹಾಗೂ ಪಾರ್ಸಿ ಜನಾಂಗದ ಯುವಕ-ಯುವತಿಯರು ಈ ಯೋಜನೆಯ ಲಾಭ ಪಡೆಯಬಹುದು. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ವಯೋಮಿತಿ 18 ವರ್ಷ ಮೇಲ್ಪಟ್ಟಿರಬೇಕು ಮತ್ತು 45 ವರ್ಷದೊಳಗಿರಬೇಕು. ಶೈಕ್ಷಣಿಕ ಅರ್ಹತೆಯಾಗಿ ಕನಿಷ್ಠ 10ನೇ ತರಗತಿಯಲ್ಲಿ ಉತ್ತೀರ್ಣರಾಗಿರಬೇಕು. ಈ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಗಳು ಮಾತ್ರ ತರಬೇತಿಗೆ ಆಯ್ಕೆಯಾಗಲು ಅರ್ಹರಾಗಿರುತ್ತಾರೆ.

ಈ ಯೋಜನೆಯಡಿ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ನಿರಂತರ ಒಂದು ತಿಂಗಳ ಕಾಲ ವೃತ್ತಿಪರ ಚಾಲನಾ ತರಬೇತಿ ನೀಡಲಾಗುತ್ತದೆ. ಬಡ ಹಾಗೂ ಗ್ರಾಮೀಣ ಭಾಗದ ಅಭ್ಯರ್ಥಿಗಳಿಗೆ ತರಬೇತಿ ಅವಧಿಯಲ್ಲಿ ಯಾವುದೇ ಆರ್ಥಿಕ ಹೊರೆಯಾಗದಿರಲು ನಿಗಮವೇ ಉಚಿತ ವಸತಿ ಮತ್ತು ಊಟದ ವ್ಯವಸ್ಥೆಯನ್ನು ಕಲ್ಪಿಸಲಿದೆ. ಕೇವಲ ತರಬೇತಿ ನೀಡುವುದು ಮಾತ್ರವಲ್ಲದೆ, ತರಬೇತಿ ಯಶಸ್ವಿಯಾಗಿ ಮುಗಿದ ಬಳಿಕ ಸಾರಿಗೆ ಇಲಾಖೆಯ (RTO) ಸಹಯೋಗದೊಂದಿಗೆ ಅಭ್ಯರ್ಥಿಗಳಿಗೆ ಉಚಿತವಾಗಿ ವಾಹನ ಚಾಲನಾ ಪರವಾನಗಿಯನ್ನು ಕೂಡ ವಿತರಿಸಲಾಗುತ್ತದೆ. ಈ ತರಬೇತಿ ತರಗತಿಗಳು ಮುಂಬರುವ ಮಾರ್ಚ್ 23, 2026 ರಿಂದ ಅಧಿಕೃತವಾಗಿ ಪ್ರಾರಂಭವಾಗಲಿವೆ.

ಅರ್ಜಿ ಸಲ್ಲಿಸುವ ವಿಧಾನ

ಆಸಕ್ತ ಮತ್ತು ಅರ್ಹ ಯುವಕ-ಯುವತಿಯರು ತಮ್ಮ ಹತ್ತಿರದ ಕೆಎಸ್‌ಆರ್‌ಟಿಸಿ ತರಬೇತಿ ಕೇಂದ್ರಗಳಿಗೆ ನೇರವಾಗಿ ಭೇಟಿ ನೀಡಿ ನೋಂದಾಯಿಸಿಕೊಳ್ಳಬಹುದು. ಅಥವಾ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ ksrtcjobs.karnataka.gov.in ಗೆ ಭೇಟಿ ನೀಡಿ ಕೂಡ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ.

ಸಂಪರ್ಕಿಸಬೇಕಾದ ದೂರವಾಣಿ ಸಂಖ್ಯೆಗಳು: ಯೋಜನೆಯ ಬಗೆಗಿನ ಹೆಚ್ಚಿನ ಮಾಹಿತಿಗಾಗಿ ಹಾಗೂ ಸ್ಥಳೀಯ ಮಟ್ಟದಲ್ಲಿ ನೋಂದಣಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ತರಬೇತಿ ಕೇಂದ್ರಗಳ ಸಹಾಯವಾಣಿ ಸಂಖ್ಯೆಗಳನ್ನು ಸಂಪರ್ಕಿಸಬಹುದು:

ಮಾಲೂರು: 7760990133 / 7019637406
ಚಿಕ್ಕಮಗಳೂರು: 9902863142 / 7349103222
ಮಳವಳ್ಳಿ: 7760990277 / 7619343405 / 9663266889
ಹಾಸನ: 8904045818 / 9686684655
ಹೊಳೆಲ್ಕೆರೆ: 7019072560 / 9740027655 / 9380403676

"ಅರ್ಹ ಅಭ್ಯರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮುಂದೆ ಬಂದು ಈ ಸೌಲಭ್ಯವನ್ನು ಸದುಪಯೋಗಪಡಿಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು" ಎಂದು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕರಾದ ಅಕ್ರಂ ಪಾಷ (ಭಾ.ಆ.ಸೇ) ಅವರು ಪ್ರಕಟಣೆಯಲ್ಲಿ ಮನವಿ ಮಾಡಿದ್ದಾರೆ. ಸ್ವಯಂ ಉದ್ಯೋಗದ ಕನಸು ಕಾಣುತ್ತಿರುವ ಯುವಜನತೆಗೆ ಇದೊಂದು ಸುವರ್ಣಾವಕಾಶವಾಗಿದ್ದು, ಕೂಡಲೇ ಅರ್ಜಿ ಸಲ್ಲಿಸಿ ಯೋಜನೆಯ ಲಾಭ ಪಡೆಯಬಹುದಾಗಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+