ನೇಮಕಾತಿ ಬಗ್ಗೆ ವಾಟ್ಸಪ್ ಸಂದೇಶಗಳು; ಕೆಎಸ್ಆರ್‌ಟಿಸಿ ಸ್ಪಷ್ಟನೆ
ಬೆಂಗಳೂರು, ಜುಲೈ 01 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೇಮಕಾತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಆದರೆ ನೇಮಕಾತಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ.
ಕೆಎಸ್ಆರ್‌ಟಿಸಿ ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆಗೆ ಆದೇಶ ಹೊರಡಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.
ನಿಗಮ ಹೊರಡಿಸಿದ್ದ ಜಾಹೀರಾತು ಅನ್ವಯ ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗಳ ನೇಮಕಾತಿಯೂ ಪೂರ್ಣಗೊಂಡಿದ್ದು ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ಈಗಾಗಲೇ ನಿಗಮದ ವಿವಿಧ ವಿಭಾಗಗಳಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

ಪ್ರಸ್ತುತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಯಾವುದೇ ನೇಮಕಾತಿಗಳು ನಡೆಯುತ್ತಿಲ್ಲ. ಇಂತಹ ನಕಲಿ ಆದೇಶಗಳ ಬಗ್ಗೆ ಜನರು ಎಚ್ಚರದಿಂದ ಇರುವಂತೆ ಕೋರಲಾಗಿದೆ. ನಿಗಮದಲ್ಲಿ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡುವ ಜನರ ಬಗ್ಗೆ ಜಾಗೃತರಾಗಿರಬೇಕು ಎಂದು ತಿಳಿಸಲಾಗಿದೆ.
ಯಾರಾದರೂ ಆಮಿಷವೊಡ್ಡಿದರೆ ಮೊಬೈಲ್ ಸಂಖ್ಯೆ 7760990051 ಮತ್ತು 7760990095 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ನಿಗದಮ ಯಾವುದೇ ನೇಮಕಾತಿಗೆ ಸಂಬಂಧಿಸಿದ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.











Click it and Unblock the Notifications