ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ನೇಮಕಾತಿ ಬಗ್ಗೆ ವಾಟ್ಸಪ್ ಸಂದೇಶಗಳು; ಕೆಎಸ್ಆರ್‌ಟಿಸಿ ಸ್ಪಷ್ಟನೆ

|
Google Oneindia Kannada News

ಬೆಂಗಳೂರು, ಜುಲೈ 01 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೇಮಕಾತಿ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹಲವಾರು ಸುದ್ದಿಗಳು ಹರಿದಾಡುತ್ತಿವೆ. ಆದರೆ ನೇಮಕಾತಿ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ ಎಂದು ನಿಗಮ ಸ್ಪಷ್ಟಪಡಿಸಿದೆ.

ಕೆಎಸ್ಆರ್‌ಟಿಸಿ ಸಹಾಯಕ ತಾಂತ್ರಿಕ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳ ನಿಯೋಜನೆಗೆ ಆದೇಶ ಹೊರಡಿಸಿದೆ ಎಂಬ ಸುದ್ದಿಗಳು ಹರಿದಾಡುತ್ತಿವೆ. ಕೊರೊನಾ ವೈರಸ್ ಸೋಂಕಿನ ಭೀತಿ ಹಿನ್ನಲೆಯಲ್ಲಿ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಗೆ ಸಂಬಂಧಿಸಿದ ಎಲ್ಲಾ ಪ್ರಕ್ರಿಯೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಲಾಗಿದೆ.

ಕೆಪಿಎಸ್‌ಸಿ ನೇಮಕಾತಿ; 251 ಹುದ್ದೆಗಳಿಗೆ ಅರ್ಜಿ ಆಹ್ವಾನ ಕೆಪಿಎಸ್‌ಸಿ ನೇಮಕಾತಿ; 251 ಹುದ್ದೆಗಳಿಗೆ ಅರ್ಜಿ ಆಹ್ವಾನ

ನಿಗಮ ಹೊರಡಿಸಿದ್ದ ಜಾಹೀರಾತು ಅನ್ವಯ ಸಹಾಯಕ ಸಂಚಾರ ನಿರೀಕ್ಷಕ ಹುದ್ದೆಗಳ ನೇಮಕಾತಿಯೂ ಪೂರ್ಣಗೊಂಡಿದ್ದು ಆಯ್ಕೆಯಾಗಿರುವ ಅಭ್ಯರ್ಥಿಗಳನ್ನು ಈಗಾಗಲೇ ನಿಗಮದ ವಿವಿಧ ವಿಭಾಗಗಳಲ್ಲಿ ತರಬೇತಿಗೆ ನಿಯೋಜನೆ ಮಾಡಲಾಗಿದೆ ಎಂದು ಸ್ಪಷ್ಟನೆ ನೀಡಲಾಗಿದೆ.

ಅಗ್ನಿಶಾಮಕ ದಳದ 1567 ಹುದ್ದೆಗಳಿಗೆ ಜೂನ್ 22ರಿಂದ ಅರ್ಜಿ ಆಹ್ವಾನಅಗ್ನಿಶಾಮಕ ದಳದ 1567 ಹುದ್ದೆಗಳಿಗೆ ಜೂನ್ 22ರಿಂದ ಅರ್ಜಿ ಆಹ್ವಾನ

KSRTC Stopped Technical Posts Recruitment

ಪ್ರಸ್ತುತ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಯಾವುದೇ ನೇಮಕಾತಿಗಳು ನಡೆಯುತ್ತಿಲ್ಲ. ಇಂತಹ ನಕಲಿ ಆದೇಶಗಳ ಬಗ್ಗೆ ಜನರು ಎಚ್ಚರದಿಂದ ಇರುವಂತೆ ಕೋರಲಾಗಿದೆ. ನಿಗಮದಲ್ಲಿ ಹುದ್ದೆ ಕೊಡಿಸುವುದಾಗಿ ಆಮಿಷವೊಡ್ಡುವ ಜನರ ಬಗ್ಗೆ ಜಾಗೃತರಾಗಿರಬೇಕು ಎಂದು ತಿಳಿಸಲಾಗಿದೆ.

ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ ಬ್ಯಾಂಕ್ ಆಫ್ ಬರೋಡಾ ನೇಮಕಾತಿ; ಕರ್ನಾಟಕದಲ್ಲಿ ಕೆಲಸ

ಯಾರಾದರೂ ಆಮಿಷವೊಡ್ಡಿದರೆ ಮೊಬೈಲ್ ಸಂಖ್ಯೆ 7760990051 ಮತ್ತು 7760990095 ಗೆ ಕರೆ ಮಾಡಿ ಮಾಹಿತಿ ನೀಡಬಹುದಾಗಿದೆ. ನಿಗದಮ ಯಾವುದೇ ನೇಮಕಾತಿಗೆ ಸಂಬಂಧಿಸಿದ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ.

English summary
Technical posts recruitment stopped temporary said Karnataka State Road Transport Corporation (KSRTC).
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X