KSRTC Recruitment 2024: ತಾಂತ್ರಿಕ ಸಹಾಯಕ ಹುದ್ದೆಗಳ ದಾಖಲಾತಿ ಪರಿಶೀಲನೆ ಅವಧಿ ವಿಸ್ತರಣೆ, ದಿನಾಂಕ, ಸೂಚನೆ

ಬೆಂಗಳೂರು, ಡಿಸೆಂಬರ್ 29: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು (KSRTC) ಇತ್ತಿಚೆಗೆ ತನ್ನಲ್ಲಿ ಖಾಲಿ ಇರುವ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳನ್ನು ಆಹ್ವಾನಿಸಿತ್ತು. ದಾಖಲಾತಿ, ದೇಹದಾರ್ಢ್ಯತೆ ಪರಿಶೀಲನೆಗೆ ದಿನಾಂಕ ನಿಗದಿ ಮಾಡಲಾಗಿತ್ತು. ಆದರೆ ಗೈರಾದವರಿಗೆ ಇದೀಗ ನಿಗಮವು ಮತ್ತೊಂದು ಅವಕಾಶ ನೀಡಿದೆ. ಅರ್ಹರು ಇದರ ಸದುಪಯೋಗ ಮಾಡಿಕೊಳ್ಳಬೇಕಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (KSRTC) 17-03-2018 ರನ್ವಯ ತಾಂತ್ರಿಕ ಸಹಾಯಕ ಹುದ್ದೆಗಳ ನೇರ ನೇಮಕಾತಿಗೆ ಹಾಜರಾಗುವ ಅರ್ಹ ಅಭ್ಯರ್ಥಿಗಳಿಗೆ ಮೂಲ ದಾಖಲಾತಿ ಹಾಗೂ ದೇಹದಾರ್ಢ್ಯತೆ ಪರಿಶೀಲನೇಗೆ ಮೊದಲು ಇದೇ ಡಿಸೆಂಬರ್ 26 ರಿಂದ 28ರವರೆಗೆ ಮೂರು ದಿನ ಅವಕಾಶ ನೀಡಿತ್ತು..

KSRTC Jobs 2024:KSRTC Extends Documents Verification Date of Technical Assistant Post to Jan 3

ಆದರೆ ಕೆಲವು ಅಭ್ಯರ್ಥಿಗಳು ಗೈರುಹಾಜರಾಗಿರುವ ಹಿನ್ನಲೆಯಲ್ಲಿ ಅಂತಿಮ ಅವಕಾಶವಾಗಿ ಗೈರು ಹಾಜರಾದ ಅಭ್ಯರ್ಥಿಗಳಿಗೆ ದಾಖಲೆ ಪರಿಶೀಲನೆ ಮತ್ತು ಹಾಜರಾತಿ ದಿನಾಂಕವನ್ನ ಜನವರಿ 03ರವರೆಗೆ ವಿಸ್ತರಿಸಿ ಅವಕಾಶ ನೀಡಲಾಗಿದೆ.

ದಾಖಲಾತಿ ಪರಿಶೀಲನೆ ವಿಳಾಸ

ಅರ್ಹ ಅಭ್ಯರ್ಥಿಗಳು ಈ ನಿಗದಿತ ದಿನಾಂಕದೊಳಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಕಚೇರಿಯ ಸಭಾಂಗಣ, ಶಾಂತಿನಗರ, ಬೆಂಗಳೂರು ಇಲ್ಲಿ ದಾಖಲಾತಿ/ದೇಹದಾರ್ಢ್ಯತೆ ಪರಿಶೀಲಿಸಲು ನಿರ್ಧರಿಸಲಾಗಿದೆ. ಈ ಕುರಿತು ಗೈರುಹಾಜರಾದ ಅಭ್ಯರ್ಥಿಗಳ ಮೊಬೈಲ್ ಸಂಖ್ಯೆಗೆ ಮೊಬೈಲ್ ಸಂದೇಶ (ಎಸ್‌ಎಂಎಸ್) ಮೂಲಕ ಮಾಹಿತಿ ನೀಡಲಾಗಿದೆ.

ಗೈರಾಗಿ ಮೊಬೈಲ್ ಸಂದೇಶ ಪಡೆದ ಅಭ್ಯರ್ಥಿಗಳು ನಿಗಮದ ಅಧಿಕೃತ ವೆಬ್-ಸೈಟ್ ಆದ ksrtcjobs.com ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಂಡು ಕರೆಪತ್ರದಲ್ಲಿ ನಮೂದಿಸಿರುವ ಎಲ್ಲಾ ಮೂಲ ದಾಖಲಾತಿಗಳೊಂದಿಗೆ ನಿಗಧಿತ ದಿನಾಂಕದಂದು ತಪ್ಪದೇ ಹಾಜರಾಗಲು ಸಾರಿಗೆ ನಿಗಮವು ಸೂಚಿಸಿದೆ.

KSRTC Jobs 2024:KSRTC Extends Documents Verification Date of Technical Assistant Post to Jan 3

ಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಸಹಾಯವಾಣಿ ಸಂಖ್ಯೆ 080 22221321-321, 7760990061, 7760990044 & 7760981930 ಗೆ ಕಚೇರಿ ಕೆಲಸದ ಸಮಯದಲ್ಲಿ ಸಂಪರ್ಕಿಸಲು ಅವಕಾಶ ಇದೆ.

ವಿಶೇಷ ಸೂಚನೆ ನೀಡಿದ ನಿಗಮ

ಅಭ್ಯರ್ಥಿಗಳಿಗೆ ವೈಯಕ್ತಿಕ ಸಂದರ್ಶನ ಹಾಗೂ ಸಂದರ್ಶನಕ್ಕೆ ಅಂಕಗಳು ಇರುವುದಿಲ್ಲ. ನಿಗಧಿತ ವಿದ್ಯಾರ್ಹತೆಯಲ್ಲಿ ಗಳಿಸಿದ ಶೇಕಡವಾರು ಅಂಕ ಹಾಗೂ ಸಾಮಾನ್ಯ ಸಾಮರ್ಥ್ಯ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಆಧರಿಸಿ ಮೆರಿಟ್ / ಮೀಸಲಾತಿ ನಿಯಮಗಳ ಆಧಾರದ ಮೇಲೆ ನೇಮಕಾತಿ ಮಾಡಲಾಗುತ್ತದೆ. ಇನ್ನೂ ಯಾವುದೇ ಶಿಫಾರಸ್ಸು, ಪ್ರಭಾವ ಹಾಗೂ ಅಮಿಷ/ಅವ್ಯವಹಾರಗಳಿಗೆ ಒಳಗಾಗಬಾರದೆಂದು ಈ ಮೂಲಕ ಸ್ಪಷ್ಟಪಡಿಸಿದೆ. ಮುಖ್ಯ ಅಂಶವೆಂದರೆ ನೇಮಕಾತಿಗೆ ಗೈರಾಗಿದ್ದ ಅಭ್ಯರ್ಥಿಗಳಿಗೆ ಇದೇ ಅಂತಿಮ ಅವಕಾಶವಾಗಿದೆ..

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+