ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಆರ್‌ಟಿಸಿ 200 ಹುದ್ದೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?

By Gururaj
|
Google Oneindia Kannada News

ಬೆಂಗಳೂರು, ಜುಲೈ 04 : ಕೆಎಸ್ಆರ್‌ಟಿಸಿ 200 ಭದ್ರತಾ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಜುಲೈ 16, 2018ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವಿಭಾಗ ಮಟ್ಟದ ಮೇಲ್ವಿಚರಕ ಹುದ್ದೆಯಾದ 'ಭದ್ರತಾ ರಕ್ಷಕ' ದರ್ಜೆ -3 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ರಾಜ್ಯದ ವಿವಿಧ ವಿಭಾಗಗಳಲ್ಲಿ ಸೇರಿಸಿ ಒಟ್ಟು 200 ಹುದ್ದೆಗಳು ಖಾಲಿ ಇವೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಬಿಎಸ್ಎಫ್‌ನಲ್ಲಿ 207 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನಬಿಎಸ್ಎಫ್‌ನಲ್ಲಿ 207 ಕಾನ್ಸ್‌ಟೇಬಲ್ ಹುದ್ದೆಗೆ ಅರ್ಜಿ ಆಹ್ವಾನ

ಆನ್‌ಲೈನ್‌ನಲ್ಲಿ ಅರ್ಜಿಗಳನ್ನು ಸಲ್ಲಿಸುವ ಮೊದಲು ಅಭ್ಯರ್ಥಿಗಳು ನೇಮಕಾತಿ ಅಧಿಸೂಚನೆಯನ್ನು ಸ್ಪಷ್ಟವಾಗಿ ಓದಿಕೊಳ್ಳುವಂತೆ ಮನವಿ ಮಾಡಲಾಗಿದೆ. ಎಲ್ಲಾ ಮಾಹಿತಿಗಳನ್ನು ಸಿದ್ಧವಾಗಿಟ್ಟುಕೊಂಡು ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಎಸ್ಆರ್‌ಟಿಸಿ200 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕೆಎಸ್ಆರ್‌ಟಿಸಿ

ಅರ್ಜಿ ಸಲ್ಲಿಸಲು ಒಟ್ಟು 9 ಹಂತಗಳಿವೆ. ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಿದ ಬಳಿಕ ಸಿಗುವ ಚಲನ್ ಪಡೆದುಕೊಂಡು ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಪಾವತಿ ಮಾಡಬೇಕಿದೆ. ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸುವುದು ಹೇಗೆ? ಎಂಬ ಮಾಹಿತಿ ಇಲ್ಲಿದೆ ನೋಡಿ..

ಅರ್ಜಿ ಸಲ್ಲಿಸುವುದು ಹೇಗೆ

ಅರ್ಜಿ ಸಲ್ಲಿಸುವುದು ಹೇಗೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು www.ksrtcjobs.com ವೆಬ್‌ಸೈಟ್‌ಗೆ ಭೇಟಿ ನೀಡಿ ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಮುನ್ನ ನೇಮಕಾತಿ ಅಧಿಸೂಚನೆಯನ್ನು ಒಮ್ಮೆ ಓದಿಕೊಳ್ಳಿ ಎಂದು ನಿಗಮ ಅಭ್ಯರ್ಥಿಗಳಿಗೆ ಮನವಿ ಮಾಡಿದೆ.

ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿಯಂತೆ ಹೆಸರು

ಎಸ್‌ಎಸ್‌ಎಲ್‌ಸಿ ಅಂಕ ಪಟ್ಟಿಯಂತೆ ಹೆಸರು

ಅರ್ಜಿ ಸಲ್ಲಿಕೆ ಮಾಡುವಾಗ ಅಭ್ಯರ್ಥಿಯು ಎಸ್‌ಎಸ್‌ಎಲ್‌ಸಿ ಅಂಕಪಟ್ಟಿಯನ್ನು ನೋಡಿ ಅದರಲ್ಲಿ ಇರುವಂತೆ ಹೆಸರು, ತಂದೆ, ತಾಯಿ ಹೆಸರು, ಜನ್ಮ ದಿನಾಂಕವನ್ನು ದಾಖಲು ಮಾಡಬೇಕು.

ಜಾತಿ, ವಿಳಾಸ, ಮೀಸಲಾತಿ ವಿವರ

ಜಾತಿ, ವಿಳಾಸ, ಮೀಸಲಾತಿ ವಿವರ

ಅರ್ಜಿ ಸಲ್ಲಿಸುವ ಅಭ್ಯರ್ಥಿಯು 3ನೇ ಹಂತದಲ್ಲಿ ಜಾತಿವಾರು ಮಾಹಿತಿ ತುಂಬಬೇಕು. ವಿಳಾಸಗಳನ್ನು ಭರ್ತಿ ಮಾಡಬೇಕು, ಮೀಸಲಾತಿ ವಿವರಗಳನ್ನು ಬರೆಯಬೇಕು.

ಶೈಕ್ಷಣಿಕ ವಿದ್ಯಾರ್ಹತೆ

ಶೈಕ್ಷಣಿಕ ವಿದ್ಯಾರ್ಹತೆ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4ನೇ ಹಂತದಲ್ಲಿ ಶೈಕ್ಷಣಿಕ ವಿದ್ಯಾರ್ಹತೆಯನ್ನು ಭರ್ತಿ ಮಾಡಬೇಕು. ಇಲಾಖಾ ಅಭ್ಯರ್ಥಿಗಳು ಅರ್ಜಿ ಸಲ್ಲಿಸುತ್ತಿದ್ದರೆ ವಿವರಗಳನ್ನು ದಾಖಲಿಸಬೇಕು.

ಪರೀಕ್ಷಾ ಕೇಂದ್ರದ ವಿವರ

ಪರೀಕ್ಷಾ ಕೇಂದ್ರದ ವಿವರ

5ನೇ ಹಂತದಲ್ಲಿ ಅಭ್ಯರ್ಥಿಗಳು ಇಚ್ಛೆಪಟ್ಟ ಪರೀಕ್ಷಾ ಕೇಂದ್ರ ಮುಂತಾದ ವಿವರಗಳನ್ನು ನಮೂದಿಸಬೇಕು. ನಿಗದಿತ ಎತ್ತರ, ದೇಹದ ತೂಕದ ವಿವರಗಳನ್ನು ಭರ್ತಿ ಮಾಡಬೇಕು.

6ನೇ ಹಂತದಲ್ಲಿ ಚಲನ್ ಪಡೆದುಕೊಳ್ಳಿ

6ನೇ ಹಂತದಲ್ಲಿ ಚಲನ್ ಪಡೆದುಕೊಳ್ಳಿ

ಅಭ್ಯರ್ಥಿಗಳು 6ನೇ ಹಂತದಲ್ಲಿ ಅರ್ಜಿಗಳನ್ನು ಭರ್ತಿ ಮಾಡಿ ಚಲನ್ ಪಡೆದುಕೊಳ್ಳಬೇಕು. ಒಟ್ಟು ಮೂರು ಹಂತದ ಪರೀಕ್ಷೆ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಒಂದು ಪರೀಕ್ಷೆಯಲ್ಲಿ ಉತ್ತೀರ್ಣರಾದರೆ ಮಾತ್ರ ಮುಂದಿನ ಹಂತಕ್ಕೆ ಆಯ್ಕೆಯಾಗಬಹುದು.

English summary
Karnataka State Road Transport Corporation (KSRTC) issued notification for recruitment of 200 Security Guard post. The candidates who is looking for job can apply online before 16th July 2018. How to apply here is details.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X