ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಆರ್‌ಟಿಸಿ ನೇಮಕಾತಿ; 3745 ಹುದ್ದೆಗೆ ಮೇ 5ರ ತನಕ ಅರ್ಜಿ ಹಾಕಿ

|
Google Oneindia Kannada News

ಬೆಂಗಳೂರು, ಏಪ್ರಿಲ್ 16 : ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್‌ ಘೋಷಣೆ ಮಾಡಲಾಗಿದೆ. ಆದ್ದರಿಂದ, ಕೆಎಸ್ಆರ್‌ಟಿಸಿ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ದಿನಾಂಕವನ್ನು ವಿಸ್ತರಣೆ ಮಾಡಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಖಾಲಿ ಇರುವ ದರ್ಜೆ 3ರ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿ ಕರೆಯಲಾಗಿತ್ತು.

2ನೇ ಹಂತದ ಲಾಕ್ ಡೌನ್; ಕೆಎಸ್ಆರ್‌ಟಿಸಿ ಬುಕ್ಕಿಂಗ್ ರದ್ದು2ನೇ ಹಂತದ ಲಾಕ್ ಡೌನ್; ಕೆಎಸ್ಆರ್‌ಟಿಸಿ ಬುಕ್ಕಿಂಗ್ ರದ್ದು

24/2/2020 ರಿಂದ 20/3/2020ರ ತನಕ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಕೊರೊನಾ ಹರಡದಂತೆ ತಡೆಯಲು ಲಾಕ್ ಡೌನ್ ಘೋಷಣೆ ಮಾಡಿದ ಹಿನ್ನಲೆಯಲ್ಲಿ ಅರ್ಜಿ ಸ್ವೀಕರಿಸಲು ನಿಗದಿಪಡಿಸಿದ್ದ ದಿನಾಂಕವನ್ನು 20/4/2020ರ ತನಕ ವಿಸ್ತರಣೆ ಮಾಡಲಾಗಿತ್ತು.

ಲಾಕ್ ಡೌನ್; ನಷ್ಟದ ಮೊತ್ತ ಅಂದಾಜಿಸಿದ ಕೆಎಸ್ಆರ್‌ಟಿಸಿಲಾಕ್ ಡೌನ್; ನಷ್ಟದ ಮೊತ್ತ ಅಂದಾಜಿಸಿದ ಕೆಎಸ್ಆರ್‌ಟಿಸಿ

KSRTC Recruitment Submit Applications Till May 5

ಪ್ರಸ್ತುತ 19 ದಿನಗಳ 2ನೇ ಹಂತದ ಲಾಕ್ ಡೌನ್ ಘೋಷಣೆ ಮಾಡಲಾಗಿದೆ. ಆದ್ದರಿಂದ, ಅರ್ಜಿಗಳನ್ನು ಸಲ್ಲಿಸಲು ನಿಗದಿಪಡಿಸಿದ ದಿನಾಂಕವನ್ನು 5/5/2020ರ ತನಕ ವಿಸ್ತರಣೆ ಮಾಡಲಾಗಿದೆ. ಅರ್ಜಿ ಶುಲ್ಕವನ್ನು ಪಾವತಿ ಮಾಡಲು 8/5/2020ರ ತನಕ ಅವಕಾಶ ಕಲ್ಪಿಸಲಾಗಿದೆ.

ಕೊರೊನಾದಿಂದ 40 ಕೋಟಿ ಕಾರ್ಮಿಕರು ಮತ್ತಷ್ಟು ಬಡತನದ ಕೂಪಕ್ಕೆ! ಕೊರೊನಾದಿಂದ 40 ಕೋಟಿ ಕಾರ್ಮಿಕರು ಮತ್ತಷ್ಟು ಬಡತನದ ಕೂಪಕ್ಕೆ!

ಅರ್ಜಿಗಳನ್ನು ಸಲ್ಲಿಸಲು ಹೆಚ್ಚಿನ ಮಾಹಿತಿಗಾಗಿ ಕೆಎಸ್ಆರ್‌ಟಿಸಿ ವೆಬ್‌ಸೈಟ್‌ಗೆ ಭೇಟಿ ನೀಡಬಹುದು ಎಂದು ಕೆಎಸ್ಆರ್‌ಟಿಸಿ ಪ್ರಕಟಣೆಯಲ್ಲಿ ತಿಳಿಸಿದೆ.

ಒಟ್ಟು 1200 ಚಾಲಕ ಹುದ್ದೆಗಳು, 2545 ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕಿದೆ.

ಹೆಚ್ಚಿನ ಮಾಹಿತಿಗಾಗಿ ಲಿಂಕ್ ಇಲ್ಲಿದೆ

English summary
Karnataka State Road Transport Corporation (KSRTC) extended date to submit applications for 3745 Driver and Driver cum Conductor post. Candidates can apply online till May 5, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X