ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಿದೆ ಕೆಎಸ್ಆರ್‌ಟಿಸಿ

ಬೆಂಗಳೂರು, ಜನವರಿ 07 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ (ಕೆಎಸ್ಆರ್‌ಟಿಸಿ) ಮೇಲ್ವಿಚಾರಕೇತರ ದರ್ಜೆ -3ರ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಲಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು 2016ರ ಫೆಬ್ರವರಿ 4 ಅಂತಿಮ ದಿನವಾಗಿದೆ.

ಕೆಎಸ್ಆರ್‌ಟಿಸಿ ವಿವಿಧ ಹುದ್ದೆಗಳ ನೇಮಕಾತಿಗಾಗಿ ಜನವರಿ 14ರಂದು ಅಧಿಸೂಚನೆ ಹೊರಡಿಸಲಿದೆ. ಅಂದಿನಿಂದಲೇ ಆನ್‌ಲೈನ್‌ ಮೂಲಕ ಅರ್ಜಿಗಳನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗುತ್ತದೆ. ಅರ್ಜಿ ಶುಲ್ಕ ಸೇರಿದಂತೆ ಇತರ ಮಾಹಿತಿಗಾಗಿ www.ksrtcjobs.com ವೆಬ್‌ಸೈಟ್‌ಗೆ ಭೇಟಿ ನೀಡಬಹುದಾಗಿದೆ. [ಅರ್ಜಿ ಸಲ್ಲಿಸುವುದು ಹೇಗೆ?, ಇಲ್ಲಿದೆ ಮಾಹಿತಿ]

karnataka

ಯಾವ ಹುದ್ದೆಗಳು : ಕುಶಲಕರ್ಮಿ, ತಾಂತ್ರಿಕ ಸಹಾಯಕ, ಸಹಾಯಕ ಉಗ್ರಾಣ ರಕ್ಷಕ, ಸಹಾಯಕ ಲೆಕ್ಕಿಗ, ಸಹಾಯಕ ಸಂಚಾರ ನಿರೀಕ್ಷಕ ಮತ್ತು ಅಂಕಿ ಅಂಶಗಳ ಸಹಾಯಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗುತ್ತದೆ. [ಶೀಘ್ರದಲ್ಲೇ 8 ಸಾವಿರ ಪೊಲೀಸರ ನೇಮಕಾತಿ]

ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶವಿದೆ. ಹುದ್ದೆಗಳ ವರ್ಗೀಕರಣ, ಮೀಸಲಾತಿ, ವಿದ್ಯಾರ್ಹತೆ ಮುಂತಾದ ವಿವರಗಳಿಗಾಗಿ ವೆಬ್‌ಸೈಟ್ ನೋಡಬಹುದಾಗಿದೆ. ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 4 ಕೊನೆಯದಿನ. ಅಂಚೆ ಕಚೇರಿಯಲ್ಲಿ ಅರ್ಜಿಗಳನ್ನು ಸಲ್ಲಿಸಲು ಫೆಬ್ರವರಿ 6 ಕೊನೆಯ ದಿನವಾಗಿದೆ.

jobs

ಕೊಡಗಿನಲ್ಲಿ ಕೆಲಸ ಖಾಲಿ ಇದೆ : ಕೊಡಗು ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ ಖಾಲಿ ಇರುವ 55 ಸ್ಟಾಫ್‌ ನರ್ಸ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 10 ಕೊನೆಯ ದಿನಾಂಕವಾಗಿದೆ. [ವಿವರಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+