Get Updates
Get notified of breaking news, exclusive insights, and must-see stories!

KSRTC Recruitment: ಅಭ್ಯರ್ಥಿಗಳಿಗೆ ಗುಡ್ ನ್ಯೂಸ್! ಚಾಲನಾ ವೃತ್ತಿ ತರಬೇತಿ ದಿನಾಂಕ ಮತ್ತೆ ವಿಸ್ತರಣೆ

ಬೆಂಗಳೂರು, ಮೇ 19: ಕರ್ನಾಟಕ ರಾಜ್ಯ ಸಾರಿಗೆ ಇಲಾಖೆಯು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ (KSRTC) ವ್ಯಾಪ್ತಿಯಲ್ಲಿ ಚಾಲಕ ಕಂ ನಿರ್ವಾಹಕರ ನೇಮಕಾತಿ ನಡೆಸುತ್ತಿದೆ. ಇದರ ಭಾಗವಾಗಿ ಹಾಸನ ತರಬೇತಿ ಕೇಂದ್ರದಲ್ಲಿ ನಡೆಯುತ್ತಿರುವ ಚಾಲಕ-ಕಂ-ನಿರ್ವಾಹಕ ಹುದ್ದೆಗಳ ಚಾಲನಾ ವೃತ್ತಿ ಪರೀಕ್ಷೆ ನಡೆಸಲಾಗುತ್ತದೆ.

14-02-2020 ರಂದು ಹೊರಡಿಸಿದ್ದ ಉಲ್ಲೇಖಿತ ಜಾಹೀರಾತಿನನ್ವಯ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ಅರ್ಜಿ ಸ್ವೀಕರಿಸಲಾಗಿದೆ. ನೇಮಕಾತಿ ಪ್ರಕ್ರಿಯೆ ಮುಂದುವರಿಸಲಾಗಿದ್ದು, ಹಾಸನ ತರಬೇತಿ ಕೇಂದ್ರದಲ್ಲಿ ಚಾಲನಾ ವೃತ್ತಿ ಪರೀಕ್ಷೆ ಪಡೆಯಲು ಆಯ್ಕೆ ಮಾಡಿಕೊಳ್ಳಲಾಗಿದೆ. ಅಭ್ಯರ್ಥಿಗಳಿಗೆ ಚಾಲನಾ ವೃತ್ತಿ ಪರೀಕ್ಷೆಯನ್ನು 16-12-2024 ರಿಂದ ನಡೆಸಿಕೊಂಡು ಬರಲಾಗುತ್ತಿದೆ.

KSRTC Rectuitment Driver and Conductor Driving Examination Date Extended to May 23rd

ಸದರಿ ಚಾಲನಾ ವೃತ್ತಿ ಪರೀಕ್ಷೆಗೆ ಗೈರುಹಾಜರಾದ ಅಭ್ಯರ್ಥಿಗಳಿಗೆ ದಿನಾಂಕ 08-05-2025 ರಿಂದ 20-05-2025 ರವೆರೆಗೆ ಅವಕಾಶ ಕಲ್ಪಿಸಲಾಗಿತ್ತು. ಗೈರುಹಾಜರಾದ ಅಭ್ಯರ್ಥಿಗಳಿಗೆ ಮತ್ತೊಂದು ಅವಕಾಶ ನೀಡಲು ನಿರ್ಧರಿಸಲಾಗಿದೆ. ಚಾಲನಾ ವೃತ್ತಿ ಪರೀಕ್ಷೆಯನ್ನು ಮೇ 20ಕ್ಕೆ ಬದಲಾಗಿ ಮೇ 23 ರವರೆಗೆ ವಿಸ್ತರಿಸಲಾಗಿದೆ. ಈ ಸಂಬಂಧ ಆಕ್ಷೇಪಣೆಗಳಿದ್ದಲ್ಲಿ 22-05-2025 ರ ಸಂಜೆ 5.00 ಗಂಟೆಯೊಳಗೆ ಆಕ್ಷೇಪಣೆಗಳನ್ನು ಸಲ್ಲಿಸುವಂತೆ ಸಾರಿಗೆ ಇಲಾಖೆ ತಿಳಿಸಿದೆ.

ಇನ್ನೂ ಚಾಲನಾ ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಅಧಿಕೃತ ವೆಬ್-ಸೈಟ್ ಆದ ksrtcjobs.karnataka.gov.in ರಲ್ಲಿ ಕರೆಪತ್ರ ಡೌನ್-ಲೋಡ್ ಮಾಡಿಕೊಳ್ಳಬೇಕು. ಅದರೊಂದಿಗೆ ತಿಳಿಸಿರುವ ಅಗತ್ಯ ದಾಖಲಾತಿ ಸಮೇತರಾಗಿ ದಿನಾಂಕ ಮುಂದಿನ 23-05-2025 ರೊಳಗೆ ಹಾಜರಾಗುವಂತೆ ಇಲಾಕೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ.

ಇದೇ ಅಂತಿಮ ಚಾಲನಾ ಪರೀಕ್ಷೆಯಾಗಿದೆ. ಈ ಅಂತಿಮ ಅವಕಾಶವನ್ನು ತಪ್ಪಿಕೊಳ್ಳದಂತೆ ಕೋರಲಾಗಿದೆ. ಇದರ ಹೊರತು ತಡತವಾಗಿ ಬಂದವರಿಗೆ ಪರೀಕ್ಷೆಗೆ ಅನುಮತಿಸುವುದಿಲ್ಲ ಎಂದು ಪ್ರಕಟಣೆಯಲ್ಲಿ ಅಭ್ಯರ್ಥಿಗಳ ಆಯ್ಕೆ ಸಮಿತಿ ನಿರ್ದೇಶಕರು ಮಾಹಿತಿ ನೀಡಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+