ಕೆಎಸ್ಆರ್ಟಿಸಿಯಿಂದ ಅನುಕಂಪ ಆಧಾರಿತ ನೇಮಕಾತಿ ಸ್ಥಗಿತ
ಬೆಂಗಳೂರು, ನವೆಂಬರ್ 09 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಕಂಪ ಆಧಾರಿತ ನೇಮಕಾತಿಯನ್ನು ಸ್ಥಗಿತಗೊಳಿಸಿದೆ. ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಉಂಟಾದ ಆರ್ಥಿಕ ನಷ್ಟ ಪರಿಹಾರಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.
ಆರ್ಥಿಕವಾಗಿ ನಷ್ಟದಲ್ಲಿರುವ ಕೆಎಸ್ಆರ್ಟಿಸಿ ಈ ವರ್ಷ ಅನುಕಂಪದ ಆಧಾರಿತ ನೇಮಕಾತಿಯನ್ನು ಸ್ಥಗಿತಗೊಳಿಸಿದೆ. ಅಭ್ಯರ್ಥಿಗಳು ಅನುಕಂಪದ ಆಧಾರದ ಮೇಲೆ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಮುಂದಿನ ದಿನಗಳಲ್ಲಿ ನೇಮಕಾತಿಯನ್ನು ಆರಂಭಿಸಿದಾಗ ಈ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ ಎಂದು ಕೆಎಸ್ಆರ್ಟಿಸಿ ಹೇಳಿದೆ. ಆದರೆ ಈ ವರ್ಷ ಯಾವುದೇ ಅನುಕಂಪದ ಆಧಾರಿತ ಉದ್ಯೋಗವನ್ನು ನೀಡುವುದಿಲ್ಲ.

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಬಸ್ ಸೇವೆಯನ್ನು ಸ್ಥಗಿತಗೊಳಿಸಿದಾಗ ಸಂಸ್ಥೆಗೆ ಅಪಾರವಾದ ನಷ್ಟವಾಗಿದೆ. ಆದ್ದರಿಂದ ಸರ್ಕಾರದ ಸೂಚನೆಯಂತೆ ಎಲ್ಲಾ ಇಲಾಖೆಗಳ ನೇಮಕಾತಿಯೂ ಸ್ಥಗಿತವಾಗಿದೆ. ತೀರಾ ಅನಿವಾರ್ಯ ಇದ್ದ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗುತ್ತದೆ.
ಕೆಎಸ್ಆರ್ಟಿಸಿ17/3/2020ರಂದು ನೀಡಿದ್ದ ಜಾಹೀರಾತಿನ ಅನ್ವಯ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿತ್ತು.
12/6/2018ರಂದು ನೀಡಿದ್ದ ಜಾಹೀರಾತಿನ ಅನ್ವಯ ಭದ್ರತಾ ರಕ್ಷಕ ಹುದ್ದೆಗಳ ನೇಮಕಾತಿ ಸಹ ಸ್ಥಗಿತಗೊಳಿಸಿತ್ತು. 14/2/2020ರಲ್ಲಿ ನೀಡಿದ್ದ ಜಾಹೀರಾತಿನಂತೆ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಸಹ ನಿಲ್ಲಿಸಲಾಗಿತ್ತು.
ಸಾರಿಗೆ ಇಲಾಖೆಯ ಎಲ್ಲಾ ನೇಮಕಾತಿ ಸ್ಥಗಿತಗೊಳಿಸಲಾಗಿದೆ. ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ಆಮಿಷವೊಡ್ಡಿ ವಂಚಿಸುವ ಸಾಧ್ಯತೆ ಇದೆ. ಉದ್ಯೋಗದ ಮಾಹಿತಿಯನ್ನು ಕೆಎಸ್ಆರ್ಟಿಸಿ ವೆಬ್ ಸೈಟ್ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications