ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೆಎಸ್ಆರ್‌ಟಿಸಿಯಿಂದ ಅನುಕಂಪ ಆಧಾರಿತ ನೇಮಕಾತಿ ಸ್ಥಗಿತ

|
Google Oneindia Kannada News

ಬೆಂಗಳೂರು, ನವೆಂಬರ್ 09 : ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅನುಕಂಪ ಆಧಾರಿತ ನೇಮಕಾತಿಯನ್ನು ಸ್ಥಗಿತಗೊಳಿಸಿದೆ. ಕೋವಿಡ್ ಲಾಕ್ ಡೌನ್ ಸಮಯದಲ್ಲಿ ಉಂಟಾದ ಆರ್ಥಿಕ ನಷ್ಟ ಪರಿಹಾರಕ್ಕೆ ಹಲವು ಕ್ರಮಗಳನ್ನು ಕೈಗೊಳ್ಳುತ್ತಿದೆ.

ಆರ್ಥಿಕವಾಗಿ ನಷ್ಟದಲ್ಲಿರುವ ಕೆಎಸ್‌ಆರ್‌ಟಿಸಿ ಈ ವರ್ಷ ಅನುಕಂಪದ ಆಧಾರಿತ ನೇಮಕಾತಿಯನ್ನು ಸ್ಥಗಿತಗೊಳಿಸಿದೆ. ಅಭ್ಯರ್ಥಿಗಳು ಅನುಕಂಪದ ಆಧಾರದ ಮೇಲೆ ಉದ್ಯೋಗಕ್ಕಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.

ಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತಅಭ್ಯರ್ಥಿಗಳಿಗೆ ಸೂಚನೆ; ಕೆಎಸ್ಆರ್‌ಟಿಸಿಯ ನೇಮಕಾತಿ ತಾತ್ಕಾಲಿಕ ಸ್ಥಗಿತ

ಮುಂದಿನ ದಿನಗಳಲ್ಲಿ ನೇಮಕಾತಿಯನ್ನು ಆರಂಭಿಸಿದಾಗ ಈ ಅರ್ಜಿಗಳನ್ನು ಪರಿಗಣಿಸಲಾಗುತ್ತದೆ ಎಂದು ಕೆಎಸ್ಆರ್‌ಟಿಸಿ ಹೇಳಿದೆ. ಆದರೆ ಈ ವರ್ಷ ಯಾವುದೇ ಅನುಕಂಪದ ಆಧಾರಿತ ಉದ್ಯೋಗವನ್ನು ನೀಡುವುದಿಲ್ಲ.

ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್ ಬಿಎಂಆರ್‌ಸಿಎಲ್ ನೇಮಕಾತಿ ರದ್ದು; ಪರೀಕ್ಷಾ ಶುಲ್ಕ ವಾಪಸ್

KSRTC Stopped All Recruitment On Compassionate Grounds

ಕೋವಿಡ್ ಲಾಕ್ ಡೌನ್ ಸಂದರ್ಭದಲ್ಲಿ ಬಸ್ ಸೇವೆಯನ್ನು ಸ್ಥಗಿತಗೊಳಿಸಿದಾಗ ಸಂಸ್ಥೆಗೆ ಅಪಾರವಾದ ನಷ್ಟವಾಗಿದೆ. ಆದ್ದರಿಂದ ಸರ್ಕಾರದ ಸೂಚನೆಯಂತೆ ಎಲ್ಲಾ ಇಲಾಖೆಗಳ ನೇಮಕಾತಿಯೂ ಸ್ಥಗಿತವಾಗಿದೆ. ತೀರಾ ಅನಿವಾರ್ಯ ಇದ್ದ ಹುದ್ದೆಗಳನ್ನು ಮಾತ್ರ ಭರ್ತಿ ಮಾಡಲಾಗುತ್ತದೆ.

ಕರ್ನಾಟಕ ಪೊಲೀಸ್ ನೇಮಕಾತಿ; ನ.25ರ ತನಕ ಅರ್ಜಿ ಹಾಕಿ ಕರ್ನಾಟಕ ಪೊಲೀಸ್ ನೇಮಕಾತಿ; ನ.25ರ ತನಕ ಅರ್ಜಿ ಹಾಕಿ

ಕೆಎಸ್ಆರ್‌ಟಿಸಿ17/3/2020ರಂದು ನೀಡಿದ್ದ ಜಾಹೀರಾತಿನ ಅನ್ವಯ ತಾಂತ್ರಿಕ ಸಹಾಯಕ ಹುದ್ದೆಗಳ ನೇಮಕಾತಿಯನ್ನು ಸ್ಥಗಿತಗೊಳಿಸಲಾಗಿದೆ ಎಂದು ಪ್ರಕಟಣೆ ಹೊರಡಿಸಿತ್ತು.

12/6/2018ರಂದು ನೀಡಿದ್ದ ಜಾಹೀರಾತಿನ ಅನ್ವಯ ಭದ್ರತಾ ರಕ್ಷಕ ಹುದ್ದೆಗಳ ನೇಮಕಾತಿ ಸಹ ಸ್ಥಗಿತಗೊಳಿಸಿತ್ತು. 14/2/2020ರಲ್ಲಿ ನೀಡಿದ್ದ ಜಾಹೀರಾತಿನಂತೆ ಚಾಲಕ, ಚಾಲಕ ಕಂ ನಿರ್ವಾಹಕ ಹುದ್ದೆಗಳ ನೇಮಕಾತಿ ಸಹ ನಿಲ್ಲಿಸಲಾಗಿತ್ತು.

Recommended Video

ಈ ಲಸಿಕೆ Americans ರಿಗೆ ಉಪಯೋಗ ಆಗತ್ತಾ? | Oneindia Kannada

ಸಾರಿಗೆ ಇಲಾಖೆಯ ಎಲ್ಲಾ ನೇಮಕಾತಿ ಸ್ಥಗಿತಗೊಳಿಸಲಾಗಿದೆ. ಕೆಲಸ ಕೊಡಿಸುವುದಾಗಿ ಅಭ್ಯರ್ಥಿಗಳಿಗೆ ಮಧ್ಯವರ್ತಿಗಳು ಆಮಿಷವೊಡ್ಡಿ ವಂಚಿಸುವ ಸಾಧ್ಯತೆ ಇದೆ. ಉದ್ಯೋಗದ ಮಾಹಿತಿಯನ್ನು ಕೆಎಸ್ಆರ್‌ಟಿಸಿ ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗುತ್ತದೆ ಎಂದು ಸ್ಪಷ್ಟಪಡಿಸಲಾಗಿದೆ.

English summary
KSRTC stopped all recruitment of compassionate grounds. Candidates can submit application and it will consider in the time of recruitment starts.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X