• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೆಎಸ್‌ಟಿಡಿಸಿ ನೇಮಕಾತಿ; 76 ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸಿ

|

ಬೆಂಗಳೂರು, ಜನವರಿ 24 : ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ಕರ್ನಾಟಕದ ವಿವಿಧ ಘಟಕಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸ್ತಕರು ಅರ್ಜಿಗಳನ್ನು ಸಲ್ಲಿಸಲು 3/2/2020 ಕೊನೆಯ ದಿನವಾಗಿದೆ.

ಒಟ್ಟು 76 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ಭರ್ತಿ ಮಾಡಲಾಗುತ್ತಿದೆ. ಅರ್ಹ ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ ಸ್ಪೀಡ್/ರಿಜಿಸ್ಟರ್ ಪೋಸ್ಟ್/ಕೋರಿಯರ್ ಅಥವ ನೇರವಾಗಿ ಸಲ್ಲಿಕೆ ಮಾಡಬಹುದಾಗಿದೆ.

ಕರ್ನಾಟಕ ಬ್ಯಾಂಕ್‌ನಲ್ಲಿ ಕೆಲಸ ಖಾಲಿ ಇದೆ; ವೇತನ 87 ಸಾವಿರ

ನಿಗಮ ಯಾವುದೇ ಕಾರಣ ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ. ಆಯ್ಕೆಯಾದ ಅಭ್ಯರ್ಥಿಗಳು ಕೆಎಸ್‌ಟಿಡಿಸಿಯ ಕರ್ನಾಟಕದ ಯಾವುದೇ ಘಟಕದಲ್ಲಿ ಕರ್ತವ್ಯ ನಿರ್ವಹಣೆ ಮಾಡಲು ಸಿದ್ಧರಿರಬೇಕು.

ಅಂಚೆ ಇಲಾಖೆ ನೇಮಕಾತಿ; ಕರ್ನಾಟಕದಲ್ಲಿ 44 ಹುದ್ದೆ ಭರ್ತಿ

ಅಭ್ಯರ್ಥಿಗಳು ದಾಖಲಾತಿಗಳನ್ನು ಒಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್‌ನ ಮೇಲೆ ನಮೂದಿಸಬೇಕು ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ಶಿವಮೊಗ್ಗ; 69 ಗ್ರಾಮ ಲೆಕ್ಕಿಗರ ಹುದ್ದೆಗೆ ಅರ್ಜಿ ಆಹ್ವಾನ

ಯಾವ-ಯಾವ ಹುದ್ದೆಗಳು

ಯಾವ-ಯಾವ ಹುದ್ದೆಗಳು

ವ್ಯವಸ್ಥಾಪಕರು (ಹೋಟೆಲ್) 4, ಸಹಾಯಕ ವ್ಯವಸ್ಥಾಪಕರು (ಹೋಟೆಲ್) 4, ಸ್ವಾಗತಗಾರರು 4, ದ್ವಿತೀಯ ದರ್ಜೆ ಸಹಾಯಕರು/ಬಿಲ್/ಕ್ಲರ್ಕ್/ಕ್ಯಾಷಿಯರ್ 7, ಹೌಸ್ ಕೀಪಿಂಗ್ ಸೂಪರ್ ವೈಸರ್ 4, ಉಗ್ರಾಣಿಕರು 4, ಅಡುಗೆಯವರು 6, ಸಹಾಯಕ ಅಡುಗೆಯವರು 6, ಅಡುಗೆ ಸಹಾಯಕರು 10, ಸಾಮಾನ್ಯ ಉಪಯೋಗಿ ಕೆಲಸಗಾರರು (ರೂಂ ಬಾಯ್/ಮಾಣಿ/ ಸ್ವೀಪರ್/ಕ್ಲೀನರ್/ ಗಾರ್ಡನರ್) 28 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತದೆ.

ವಿದ್ಯಾರ್ಹತೆ, ವೇತನದ ವಿವರ

ವಿದ್ಯಾರ್ಹತೆ, ವೇತನದ ವಿವರ

ಎಲ್ಲಾ ಹುದ್ದೆಗಳ ವಿದ್ಯಾರ್ಹತೆ ಮತ್ತು ವೇತನದ ವಿವರಗಳನ್ನು ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ವೆಬ್‌ಸೈಟ್‌ನಲ್ಲಿ ನೀಡಲಾಗಿದೆ. ಅರ್ಜಿಗಳನ್ನು ವೆಬ್‌ಸೈಟ್‌ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ, ಅಂಚೆ, ಕೋರಿಯರ್ ಅಥವ ಖುದ್ದಾಗಿ ಸಲ್ಲಿಸಬಹುದಾಗಿದೆ. ವೆಬ್ ಸೈಟ್‌ ವಿಳಾಸ kstdc.co/notifications/

ಅರ್ಜಿ ಸಲ್ಲಿಸಲು ವಿಳಾಸ

ಅರ್ಜಿ ಸಲ್ಲಿಸಲು ವಿಳಾಸ

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮದ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರು. ಅರ್ಜಿಯನ್ನು ಭರ್ತಿ ಮಾಡಿ ಸಲ್ಲಿಸಲು ವಿಳಾಸ ಕೆಳಗಿನಂತಿದೆ.

ವ್ಯವಸ್ಥಾಪಕರು (ಆಡಳಿತ)

ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿ.,

ಕಾರ್ಯನಿರ್ವಾಹಕ ಕಛೇರಿ,

ನೆಲಮಹಡಿ, ಯಶವಂತಪುರ ಟಿಟಿಎಂಸಿ,

ಬಿ.ಎಂ.ಟಿ.ಸಿ ಬಸ್ ನಿಲ್ದಾಣ,

ಯಶವಂತಪುರ ವೃತ್ತ,

ಬೆಂಗಳೂರು-560 022

ಅಭ್ಯರ್ಥಿಗಳಿಗೆ ಸೂಚನೆ

ಅಭ್ಯರ್ಥಿಗಳಿಗೆ ಸೂಚನೆ

ಅಭ್ಯರ್ಥಿಗಳು ದಾಖಲಾತಿಗಳನ್ನೊಳಗೊಂಡ ಅರ್ಜಿಯನ್ನು ಮುಚ್ಚಿದ ಲಕೋಟೆಯಲ್ಲಿ ಸ್ಪೀಡ್ ಪೋಸ್ಟ್/ರಿಜಿಸ್ಟರ್ ಪೋಸ್ಟ್/ ಕೋರಿಯರ್ ಅಥವಾ ನೇರವಾಗಿ ಬಂದು ಸಲ್ಲಿಸಬಹುದಾಗಿದೆ. ಅಭ್ಯರ್ಥಿಗಳು ತಾವು ಅರ್ಜಿ ಸಲ್ಲಿಸುತ್ತಿರುವ ಹುದ್ದೆಯ ಪದನಾಮವನ್ನು ಲಕೋಟೆ/ಪೋಸ್ಟ್ ಕವರ್‍ ಮೇಲೆ

ನಮೂದಿಸ ತಕ್ಕದ್ದು, ತಪ್ಪಿದಲ್ಲಿ ಅಂತಹ ಅರ್ಜಿಯನ್ನು ಪರಿಗಣಿಸಲಾಗುವುದಿಲ್ಲ.

ದಿನಾಂಕ 3.2.2020ರ ನಂತರದಲ್ಲಿ ಸ್ವೀಕೃತಗೊಂಡ ಅರ್ಜಿಗಳನ್ನು ಯಾವುದೇ ಕಾರಣಕ್ಕೂ ಪರಿಗಣಿಸಲಾಗುವುದಿಲ್ಲ. ನಿಗಮವು ಯಾವುದೇ ಕಾರಣವನ್ನು ನೀಡದೆ ಅರ್ಜಿಯನ್ನು ಸ್ವೀಕರಿಸಲು ಅಥವಾ ತಿರಸ್ಕರಿಸುವ ಸಂಪೂರ್ಣ ಅಧಿಕಾರವನ್ನು ಹೊಂದಿರುತ್ತದೆ. ನಿಗಮವು ನೀಡಿರುವ ನಮೂನೆಯಲ್ಲದೇ, ಇತರೆ ಯಾವುದೇ ನಮೂನೆಯಲ್ಲಿ ಸ್ವವಿವರವನ್ನು ಸಲ್ಲಿಸಿದರೆ ಅರ್ಜಿಯನ್ನು ತಿರಸ್ಕರಿಸಲಾಗುವುದು.

English summary
Karnataka State Tourism Development Corporation (KSTDC) recruitment 2020. Apply for 76 post through post. February 3 last date to submit applications.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more
X