• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕೆಎಸ್‌ಟಿಡಿಸಿ ನೇಮಕಾತಿ 18 ಹುದ್ದೆ; ಬೆಂಗಳೂರಲ್ಲಿ ಕೆಲಸ

|

ಬೆಂಗಳೂರು, ಮಾರ್ಚ್ 09 : ರಾಜ್ಯ ಪ್ರವಾಸೋದ್ಯಮ ಇಲಾಖೆ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಮಾರ್ಚ್ 20ರ ತನಕ ಸಲ್ಲಿಸಬಹುದಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ (ಹೋಟೆಲ್) 1, ಕುಕ್ 1, ಸ್ವಾಗತಕಾರರು 1, ಸ್ಟೋರ್ ಕೀಪರ್ 1, ಸಹಾಯಕ ಅಡುಗೆಯವರು, ರೂಂ ಬಾಯ್ 2 ಸೇರಿದಂತೆ 18 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಗೆಜೆಟೆಡ್ ಪ್ರೊಬೇಷನರ್ ಹುದ್ದೆ; ಅರ್ಜಿ ಸಲ್ಲಿಸುವ ದಿನಾಂಕ ವಿಸ್ತರಣೆ

ಕೆಎಸ್‌ಟಿಡಿಸಿ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳು ವಯೋಮಿತಿಯನ್ನು ಹೊಂದಿರಬೇಕು. ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಶುಲ್ಕವನ್ನು ನಿಗದಿ ಮಾಡಿಲ್ಲ.

ಭಾರತೀಯ ಕರಾವಳಿ ರಕ್ಷಣಾ ಪಡೆಯಲ್ಲಿ 37 ಹುದ್ದೆಗಳಿವೆ

ಆಯ್ಕೆಯಾದ ಅಭ್ಯರ್ಥಿಗಳು ಬೆಂಗಳೂರಿನಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 11 ಸಾವಿರದಿಂದ 24 ಸಾವಿರ ರೂ. ತನಕ ವೇತನ ನಿಗದಿ ಮಾಡಲಾಗಿದೆ.

ಹಾಸನ; 34 ಗ್ರಾಮ ಲೆಕ್ಕಿಗರ ಹುದ್ದೆಗಳಿಗೆ ಅರ್ಜಿ ಹಾಕಿ

ಆಸಕ್ತ ಅಭ್ಯರ್ಥಿಗಳು https://www.kstdc.co/ ವೆಬ್ ಸೈಟ್‌ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಳ್ಳಬೇಕು. ನಿಗದಿತ ನಮೂನೆಯಲ್ಲಿ ಅವುಗಳನ್ನು ಭರ್ತಿ ಮಾಡಿ ಮಾರ್ಚ್ 20ರ ತನಕ ಕೆಳಕಂಡ ವಿಳಾಸಕ್ಕೆ ಸಲ್ಲಿಸಬಹುದಾಗಿದೆ.

ವೆಬ್‌ಸೈಟ್‌ನಲ್ಲಿ ನೋಂದಣಿ ಮಾಡಿಕೊಳ್ಳುವಾಗ ಸರಿಯಾದ ಇ-ಮೇಲ್ ವಿಳಾಸ ಮತ್ತು ಫೋನ್ ನಂಬರ್ ನಮೂದಿಸಬೇಕು ಎಂದು ನೇಮಕಾತಿ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ. ರಿಜಿಸ್ಟರ್ ಪೋಸ್ಟ್, ಸ್ಪೀಡ್ ಪೋಸ್ಟ್ ಮೂಲಕ ಮಾತ್ರ ಅರ್ಜಿಗಳನ್ನು ಕಳಿಸಬೇಕು.

ಅರ್ಜಿಗಳನ್ನು ಸಲ್ಲಿಸಲು ವಿಳಾಸ

Karnataka State Tourism Development Corporation (KSTDC)

Ground Floor, BMTC Yeshwantpur TTMC (Bus Stand),

Yeshwantpur Circle, Bengaluru-560 022

English summary
Karnataka State Tourism Development Corporation (KSTDC) invited applications to fill 18 post. Candidates can send application through post till March 20, 2020.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X