KUBFED recruitment 2024: ಬೆಂಗಳೂರಿನಲ್ಲಿ ಬ್ಯಾಂಕಿಂಗ್ ಹುದ್ದೆ, ಕೈತುಂಬ ವೇತನ, ವಿವರ ತಿಳಿಯಿರಿ

ಬೆಂಗಳೂರು, ಜನವರಿ 15: ಕರ್ನಾಟಕ ಸ್ಟೇಟ್ ಕೋ-ಆಪಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ (KUBFED) ತನ್ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಜನವರಿ 20ರೊಳಗೆ ಅರ್ಜಿ ಆಫ್‌ಲೈನ್ ಮೂಲಕವೇ ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ.

KUBFED ನಲ್ಲಿ ಡೆಪ್ಯುಟಿ ಚೀಫ್ ಎಕ್ಸಿಕ್ಯೂಟಿವ್ ಆಫೀಸರ್ ಹುದ್ದೆಗಳು ಖಾಲಿ ಇವೆ. ಆಸಕ್ತರು ಈ ಕೂಡಲೇ ಅರ್ಜಿ ಸಲ್ಲಿಸಬೇಕು. ಬೆಂಗಳೂರಿನಲ್ಲಿ ಉದ್ಯೋಗ ಹುಡುಕುತ್ತಿರುವ ಅಭ್ಯರ್ಥಿಗಳಿಗೆ ಇದೊಂದು ಉತ್ತಮ ಅವಕಾಶವಾಗಿದೆ. ಅರ್ಜಿ ಸಲ್ಲಿಕೆಗೂ ಮೊದಲು ಹುದ್ದೆಯ ಕುರಿತ ಸಂಪೂರ್ಣ ಮಾಹಿತಿ ಇಲ್ಲಿದೆ.

 KUBFED Recruitment 2024: Interested Candidate Apply for KUBFED empty Posts, Check details

ವಿದ್ಯಾರ್ಹತೆ

ಅರ್ಜಿ ಸಲ್ಲಿಸಲಿರುವ ಅಭ್ಯರ್ಥಿಗಳಿಗೆ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಹಾಗೂ ಮಂಡಳಿಯಿಂದ ಕಡ್ಡಾಯವಾಗಿ ಎಂಬಿಎ, ಎಂಸಿಎ ಪದವಿ ಪೂರ್ಣಗೊಳಿಸಿರಬೇಕು ಎಂದು ಕರ್ನಾಟಕ ಸ್ಟೇಟ್-ಆಪರೇಟಿವ್ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ತಿಳಿಸಿದೆ.

ವಯೋಮಿತಿ ಮಾಹಿತಿ

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳ ಕನಿಷ್ಠ 18 ವರ್ಷ ಹಾಗೂ ಗರಿಷ್ಠ 38 ವರ್ಷ ಮೀರಿರಬಾರದು ಎಂದು ನಿಗದಿ ಮಾಡಲಾಗಿದೆ. ಮೀಸಲಾತಿ ಅನುಸಾರ ಆಯಾ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಸಿಲಿಗದೆ ಎಂದು ಸಂಸ್ಥೆ ತಿಳಿಸಿದೆ. ಅರ್ಜಿ ಸಲ್ಲಿಸುವ ಪ್ರತಿ ಅಭ್ಯರ್ಥಿಗಳಿಗೂ ರೂಪಾಯಿ 2,000 ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಈ ಶುಲ್ಕವನ್ನು ಡಿಮ್ಯಾಂಡ್ ಡ್ರಾಫ್ಟ್ ಮೂಲಕ ಪಾವತಿಸಬೇಕು.

 KUBFED Recruitment 2024: Interested Candidate Apply for KUBFED empty Posts, Check details

ಆಯ್ಕೆ ಮತ್ತು ವೇತನ ಮಾಹಿತಿ

ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ಮೊದಲು ಲಿಖಿತ ಪರೀಕ್ಷೆ ನಡೆಸಿ ನಂತರ ಸಂದರ್ಶನ ಮೂಲಕ ಆಯ್ಕೆ ಮಾಡಲಾಗುತ್ತದೆ. ನಂತರ ಅವರಿಗೆ ಬೆಂಗಳೂರು ನಲ್ಲಿ ಮಾಸಿಕ ₹ 40,900 ನಿಂದ 78,200 ರೂಪಾಯಿ ನೀಡಲಾಗುವುದು ಎಂದು ಬ್ಯಾಂಕ್ ತಿಳಿಸಿದೆ.

ಅರ್ಜಿ ಸಲ್ಲಿಕೆ ಹೇಗೆ?

ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳಿಗೆ ಇಲ್ಲಿರುವ ' ಕರ್ನಾಟಕ ರಾಜ್ಯ ಸಹಕಾರ ಅರ್ಬನ್ ಬ್ಯಾಂಕ್ ಫೆಡರೇಶನ್ ಲಿಮಿಟೆಡ್, ನಂ. 132, ಕೆ.ಎಚ್. ರಸ್ತೆ, ಬೆಂಗಳೂರು-560027' ಈ ವಿಳಾಸಕ್ಕೆ ಸಲ್ಲಿಸಬೇಕು.

ನೆನಪಿಡಬೇಕಾದ ದಿನಾಂಕ

ಅರ್ಜಿ ಸಲ್ಲಿಕೆ ಆರಂಭ - ಜನವರಿ 03

ಅರ್ಜಿ ಸಲ್ಲಿಕೆ ಕೊನೆ ದಿನಾಂಕ - ಜನವರಿ 20

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+