235 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಕುವೆಂಪು ವಿಶ್ವವಿದ್ಯಾಲಯ
ಬೆಂಗಳೂರು, ಫೆಬ್ರವರಿ 15 : ಕುವೆಂಪು ವಿಶ್ವವಿದ್ಯಾಲಯ 235 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಅಭ್ಯರ್ಥಿಗಳು 28/2/2019ರೊಳಗೆ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಕುವೆಂಪು ವಿಶ್ವವಿದ್ಯಾಲಯ 235 ಅತಿಥಿ ಉಪನ್ಯಾಸಕ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕದಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಸ್ನಾತಕೋತ್ತರ ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ಸಂಸ್ಥೆಯಿಂದ ಪಡೆದಿರಬೇಕು.

ಅಭ್ಯರ್ಥಿಗಳು ಕುವೆಂಪು ವಿಶ್ವವಿದ್ಯಾಲಯದ 2019ರ ನೇಮಕಾತಿ ಆದೇಶದ ಪ್ರಕಾರ ವಯೋಮಿತಿಯನ್ನು ಹೊಂದಿರಬೇಕು.
ಅಭ್ಯರ್ಥಿಗಳನ್ನು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ಫೆ.13ರಿಂದ ಫೆ. 28ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಕೆ ಹೇಗೆ? : ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ, ಅಗತ್ಯ ದಾಖಲೆಗಳ ಝೆರಾಕ್ಸ್ ಪ್ರತಿಯನ್ನು ಲಗತ್ತಿಸಿ ಅಂಚೆ ಮೂಲಕ ಕಳುಹಿಸಬೇಕು.
ವಿಳಾಸ : Registrar Kuvempu University,
Shankaraghatta - 577 451,
Karnataka.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications