ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದ ಕರ್ನಾಟಕ ಜಲಮಂಡಳಿ

ಬೆಂಗಳೂರು, ಡಿಸೆಂಬರ್ 08 : ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯು ವಿವಿಧ ಬ್ಯಾಕ್ ಲಾಗ್ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ ಜನವರಿ 6, 2016.

ಒಟ್ಟು 53 ಹುದ್ದೆಗಳಿದ್ದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಜನವರಿ 7, 2015 ಅರ್ಜಿ ಶುಲ್ಕಗಳನ್ನು ಪಾವತಿ ಮಾಡಲು ಕೊನೆಯ ದಿನಾಂಕ.[ಚಿಕ್ಕಬಳ್ಳಾಪುರ : ಕಂದಾಯ ಇಲಾಖೆಯಲ್ಲಿ ಕೆಲಸ ಖಾಲಿ ಇದೆ]

jobs

ಸಹಾಯಕ ಅಭಿಯಂತರ (ಸಿವಿಲ್) 2, ಪ್ರಥಮ ದರ್ಜೆ ಸಹಾಯಕ 3, ದ್ವಿತೀಯ ದರ್ಜೆ ಸಹಾಯಕ 19, ಡೇಟಾ ಎಂಟ್ರಿ ಆಪರೇಟರ್ 7, ಪ್ರಥಮ ದರ್ಜೆ ಲೆಕ್ಕ ಸಹಾಯಕ 4, ಕಿರಿಯ ಕಾರ್ಯ ನಿರೀಕ್ಷಕ 5 ಸೇರಿದಂತೆ 53 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಲಾಗಿದೆ. [ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ KPSC]

ವಯೋಮಿತಿ : ಅರ್ಜಿ ಸಲ್ಲಿಸುವ ದಿನಾಂಕದಂದು ಅಭ್ಯರ್ಥಿಗೆ ಕನಿಷ್ಟ 18 ವರ್ಷ ಪೂರ್ಣಗೊಂಡಿರಬೇಕು. ಗರಿಷ್ಟ ವಯೋಮಿತಿ 40 ವರ್ಷಗಳು.

ಅರ್ಜಿ ಶುಲ್ಕ : ಸಹಾಯಕ ಅಭಿಯಂತರ, ಪ್ರಥಮ ದರ್ಜೆ ಸಹಾಯಕ, ಪ್ರಥಮ ದರ್ಜೆ ಲೆಕ್ಕ ಸಹಾಯಕ, ಆಪರೇಟರ್ ಗ್ರೇಡ್ - 1 ರೂ. 300. ದ್ವಿತೀಯ ದರ್ಜೆ ಸಹಾಯಕ, ಕಿರಿಯ ಕಾರ್ಯ ನಿರೀಕ್ಷಕ, ಡೇಟಾ ಎಂಟ್ರಿ ಆಪರೇಟರ್ ಮುಂತಾದ ಹುದ್ದೆಗಳಿಗೆ 200 ರೂ.

http://www.kuwsdb.org/ ವೆಬ್‌ಸೈಟ್‌ಗೆ ಭೇಟಿ ನೀಡಿ ಅರ್ಜಿ ಸಲ್ಲಿಸಿದ ಬಳಿಕ ಲಭ್ಯವಾಗುವ ಚಲನ್ ಡೌನ್‌ ಲೋಡ್ ಮಾಡಿಕೊಂಡು, ಕರ್ನಾಟಕ ರಾಜ್ಯದಲ್ಲಿನ ಯಾವುದೇ ಇ ಪಾವತಿ ಅಂಚೆ ಕಚೇರಿಗಳಲ್ಲಿ ಅರ್ಜಿ ಶುಲ್ಕವನ್ನು ಪಾವತಿ ಮಾಡಬಹುದಾಗಿದೆ. [ಕನ್ನಡದಲ್ಲಿ ನೇಮಕಾತಿ ಆದೇಶ ಓದಿ]

English ನಲ್ಲಿ ಓದಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+