ಕೆವಿಎಎಫ್‌ಎಸ್‌ಯು ನೇಮಕಾತಿ; ಬೀದರ್‌ನಲ್ಲಿ ಕೆಲಸ

ಬೀದರ್‌ನಲ್ಲಿರುವ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿ ಕರೆದಿದೆ.

ಬೆಂಗಳೂರು, ಮಾರ್ಚ್ 07; ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ 25 ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಅರ್ಜಿ ಸಲ್ಲಿಕೆ ಮಾಡಲು ಮಾರ್ಚ್ 26 ಕೊನೆಯ ದಿನವಾಗಿದೆ. ವಿದ್ಯಾರ್ಹತೆ, ಅನುಭವ, ದಾಖಲೆ ಪರಿಶೀಲನೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

ಪ್ರೊಫೆಸರ್ 5, ಅಸಿಸ್ಟೆಂಟ್‌ ಪ್ರೊಫೆಸರ್ 15 ಮತ್ತು ಅಸೋಸಿಯೇಟ್ ಪ್ರೊಫೆಸರ್ 5 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳು ಬೀದರ್‌ನಲ್ಲಿ ಕೆಲಸ ಮಾಡಬೇಕಿದೆ ಎಂದು ನೇಮಕಾತಿ ಆದೇಶದಲ್ಲಿ ತಿಳಿಸಲಾಗಿದೆ. ಪ್ರೊಫೆಸರ್, ಅಸೋಸಿಯೇಟ್ ಪ್ರೊಫೆಸರ್ ಹುದ್ದೆಗೆ ಕೆವಿಎಎಫ್‌ಎಸ್‌ಯು ನೇಮಕಾತಿ ನಿಯಮಗಳ ಅನ್ವಯ ವಯೋಮಿತಿ ನಿಗದಿ ಮಾಡಲಾಗಿದೆ. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ 35 ವರ್ಷಗಳ ವಯೋಮಿತಿ ನಿಗದಿಗೊಳಿಸಲಾಗಿದೆ. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್‌ಸಿ/ ಎಸ್‌ಟಿ/ಪ್ರವರ್ಗ-1ರ ಅಭ್ಯರ್ಥಿಗಳಿಗೆ 5 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

KVAFSU Recruitment 2023 Apply For Various Post At Bidar

ಅರ್ಜಿಗಳನ್ನು ಪ್ರೊಫೆಸರ್ ಹುದ್ದೆಗೆ, ಅಸೋಸಿಯೇಟ್ ಸಲ್ಲಿಕೆ ಮಾಡುವವರು ವೆಟರ್ನರಿ ಸೈನ್ಸ್/ ವೆಟರ್ನರಿ ಸೈನ್ಸ್‌ & ಪಶುಸಂಗೋಪನೆ ವಿಷಯದಲ್ಲಿ ಸ್ನಾತಕೋತ್ತರ ಪದವಿ, ಪಿಎಚ್‌ಡಿ ಪದವಿ ಪಡೆದಿರಬೇಕು. ಅಸಿಸ್ಟೆಂಟ್ ಪ್ರೊಫೆಸರ್ ಹುದ್ದೆಗೆ ಅರ್ಜಿ ಸಲ್ಲಿಕೆ ಮಾಡುವವರು ವೆಟರ್ನರಿ ಸೈನ್ಸ್/ ವೆಟರ್ನರಿ ಸೈನ್ಸ್ & ಪಶುಸಂಗೋಪನೆಯಲ್ಲಿ ಸ್ನಾತಕೋತ್ತರ ಪದವಿ, ಎಂಫಿಲ್, ಪಿಎಚ್‌ಡಿ ಪದವಿ ಪಡೆದಿರಬೇಕು.

ಆಯ್ಕೆಯಾದ ಅಭ್ಯರ್ಥಿಗಳಿಗೆ 57,700-218200 ವೇತನ ನಿಗದಿ ಮಾಡಲಾಗಿದೆ. ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಪ್ರವರ್ಗ-1ರ ಅಭ್ಯರ್ಥಿಗಳು 500 ರೂ. ಮತ್ತು ಸಾಮಾನ್ಯ, 2ಎ/ 2ಬಿ/ 3ಎ & 3ಬಿ ಅಭ್ಯರ್ಥಿಗಳಿಗೆ 1000 ರೂ. ಅರ್ಜಿ ಶುಲ್ಕ ನಿಗದಿ ಮಾಡಲಾಗಿದೆ. ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಪಾವತಿ ಮಾಡಬೇಕಿದೆ.

KVAFSU Recruitment 2023 Apply For Various Post At Bidar

ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡುವ ಮೊದಲ ಚಾಲ್ತಿಯಲ್ಲಿರುವ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆಯನ್ನು ನಮೂದು ಮಾಡಿ ಲಾಗಿನ್ ಆಗಿ. ಅರ್ಜಿ ಸಲ್ಲಿಸುವಾಗ ತಾಂತ್ರಿಕ ತೊಂದರೆಗಳು ಎದುರಾದರೆ [email protected] ವಿಳಾಸಕ್ಕೆ ಇ-ಮೇಲ್ ಮಾಡಿ ಅಥವ 9916054043 ಸಂಖ್ಯೆಗೆ ಕರೆ ಮಾಡಿ.

ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ ಮೇಲೆ ಮೂರು ಸೆಟ್‌ನಲ್ಲಿ ಅರ್ಜಿಯ ಪ್ರತಿ, ಅಗತ್ಯ ದಾಖಲೆಗಳನ್ನು ದಾಖಲೆಗಳ ಪರಿಶೀಲನೆ ಸಂದರ್ಭದಲ್ಲಿ ಸಲ್ಲಿಸಬೇಕು. ಮೂಲ ದಾಖಲೆಗಳ ಪರಿಶೀಲನೆ Office of the Registrar, (Recruitment & Assessment Cell), Nandi Nagar, KVAFSU, Bidar - 585226 ಇಲ್ಲಿ ನಡೆಯಲಿದೆ.

ಆಸಕ್ತರು ಹೆಚ್ಚಿನ ಮಾಹಿತಿಗಾಗಿ kvafsu.edu.in ವೆಬ್‌ಸೈಟ್‌ಗೆ ಭೇಟಿ ನೀಡಿ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+