ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್‌ನಲ್ಲಿ ವಿವಿಧ ಹುದ್ದೆಗಳಿವೆ
ಮಂಡ್ಯ, ಏಪ್ರಿಲ್ 23; ಕರ್ನಾಟಕ ವಿಕಾಸ ಗ್ರಾಮೀಣ ಬ್ಯಾಂಕ್ ಗುತ್ತಿಗೆ ಆಧಾರದ ಮೇಲೆ ಆರ್ಥಿಕ ಸಲಹೆಗಾರ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು ಮೇ 16, 2021ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಆರ್ಥಿಕ ಸಲಹೆಗಾರ ಹುದ್ದೆ ತಾತ್ಕಾಲಿಕವಾಗಿದ್ದು, ಮೂರು ವರ್ಷಗಳ ಅವಧಿಯಾಗಿರುತ್ತದೆ. ಅಭ್ಯರ್ಥಿಗಳು ಮಂಡ್ಯ, ಚಾಮರಾಜನಗರ, ತುಮಕೂರು, ಯಾದಗಿರಿ ಜಿಲ್ಲೆಯಲ್ಲಿ ಕೆಲಸ ಮಾಡಬೇಕಿದೆ.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಬ್ಯಾಂಕಿಂಗ್ ಜ್ಞಾನದೊಂದಿಗೆ ಹಣಕಾಸಿನ ಸೇವೆಗಳ ಮತ್ತು ಸಾಮಾಜಿಕ ಭದ್ರತಾ ಯೋಜನೆಗಳ ತಿಳುವಳಿಕೆಯುಳ್ಳ 62 ವರ್ಷದೊಳಗಿನವರು ಅರ್ಜಿ ಹಾಕಬಹುದು.

ಅರ್ಜಿ ಸಲ್ಲಿಸುವವರು ಪದವೀಧರರು ಅಥವ ನಿವೃತ್ತ/ ಸ್ವಯಂ ನಿವೃತ್ತಿ ಪಡೆದ ಬ್ಯಾಂಕ್ ಅಧಿಕಾರಿಗಳು ಅರ್ಜಿ ಸಲ್ಲಿಸಲು ಅರ್ಹರು.
ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.
ಆಯ್ಕೆ ಪ್ರಕ್ರಿಯೆ: ಲಿಖಿತ ಪರೀಕ್ಷೆ ಹಾಗೂ ಸಂದರ್ಶನ.
ಅರ್ಜಿ ಸಲ್ಲಿಸುವವರು ಹೆಚ್ಚಿನ ಮಾಹಿತಿಗಾಗಿ ಬ್ಯಾಂಕ್ ವೆಬ್ ಸೈಟ್‌ಗೆ ಭೇಟಿ ನೀಡಬಹುದಾಗಿದೆ.
ಅಭ್ಯರ್ಥಿಗಳು ಅರ್ಜಿಗಳನ್ನು ಭರ್ತಿ ಮಾಡಿ
Karnataka Gramin Bank, Branch Office: Ballari, Karnataka ವಿಳಾಸಕ್ಕೆ ರಿಜಿಸ್ಟರ್, ಸ್ಪೀಡ್ ಪೋಸ್ಟ್ ಮೂಲಕ ಸಲ್ಲಿಸಬೇಕು.
ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 22-04-2021.
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 15-05-2021
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ: 08392-236428 ಅಥವಾ ವೆಬ್‌ತಾಣದಲ್ಲಿ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications