ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಖಾದಿ ಮತ್ತು ಗ್ರಾಮೋದ್ಯೋಗದಲ್ಲಿ ನೇಮಕಾತಿಗೆ ಅರ್ಜಿ ಆಹ್ವಾನ

|
Google Oneindia Kannada News

ಬೆಂಗಳೂರು, ಜುಲೈ 14: ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ(KVIC)ಯಲ್ಲಿ 2022ನೇ ಸಾಲಿನ ನೇಮಕಾತಿ ಕುರಿತಂತೆ ಪ್ರಕಟಣೆ ಹೊರಡಿಸಲಾಗಿದೆ. ಅರ್ಹ, ಆಸಕ್ತರು ವೃತ್ತಿಪರ ಹುದ್ದೆಗಳಿಗಾಗಿ ಅರ್ಜಿ ಸಲ್ಲಿಸಬಹುದು, ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಜುಲೈ 30, 2022.

ಸಂಸ್ಥೆ ಹೆಸರು:
ಹುದ್ದೆ ಸಂಖ್ಯೆ: 10
ಹುದ್ದೆ ಸ್ಥಳ: ಕೇರಳ, ಕರ್ನಾಟಕ ಹಾಗೂ ತೆಲಂಗಾಣ
ಹುದ್ದೆ ಹೆಸರು: ಯುವ ವೃತ್ತಿಪರರು
ಸಂಬಳ ನಿರೀಕ್ಷೆ: 25000-30000 ರು ಪ್ರತಿ ತಿಂಗಳು

ವಿದ್ಯಾರ್ಹತೆ: ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಹಾಗೂ ಸ್ನಾತಕೋತ್ತರ ಪದವಿ ಪಡೆದಿರಬೇಕು.

ವಯೋಮಿತಿ: ಗರಿಷ್ಠ 27 ವರ್ಷ. ನಿಯಮಕ್ಕನುಸಾರವಾಗಿ ವಯೋಮಿತಿಯಲ್ಲಿ ವಿನಾಯತಿ ಸಿಗಲಿದೆ. ವಯೋಮಿತಿ ವಿವರ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಈ ಕೆಳಕಂಡ ವಯೋಮತಿ ಹೊಂದಿರಬೇಕು ಹಾಗೂ ಗರಿಷ್ಠ ವಯೋಮಿತಿಯನ್ನು ಮೀರಿರಬಾರದು. ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ಅರ್ಹತೆಯ ಅಭ್ಯರ್ಥಿಗಳಿಗೆ 35, ಪ್ರವರ್ಗ 2(ಎ), 2(ಬಿ), 3(ಎ), 3 (ಬಿ) ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

KVIC Recruitment 2022 – Apply Online for 10 Young Professionals Posts

ಅರ್ಜಿಗಳನ್ನು ಖುದ್ದಾಗಿ ಅಥವ ಅಂಚೆ ಮೂಲಕ ಸಲ್ಲಿಕೆ ಮಾಡಲು ಅವಕಾಶವಿಲ್ಲ. ದಾಖಲೆ ಒದಗಿಸದ, ಪರಿಪೂರ್ಣ ಮಾಹಿತಿ ಇರದ ಅರ್ಜಿಯನ್ನು ತಿರಸ್ಕಾರ ಮಾಡಲಾಗುತ್ತದೆ.

ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸುವ ಮೊದಲು ಕಡ್ಡಾಯವಾಗಿ ಸೂಚನೆಗಳನ್ನು ಓದಿಕೊಳ್ಳಬೇಕು. ಅರ್ಜಿ ಸಲ್ಲಿಸಿದ ಬಳಿಕ ಒಂದು ಪ್ರತಿಯನ್ನು ಡೌನ್‌ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆಗಳು 080-22266852. ಇ-ಮೇಲ್ [email protected].

ಅಭ್ಯರ್ಥಿಗಳಿಗೆ ಸೂಚನೆಗಳು ಅರ್ಜಿ ಹಾಕುವ ಅಭ್ಯರ್ಥಿಗಳು ಚಾಲ್ತಿಯಲ್ಲಿರುವ ಇ-ಮೇಲ್ ಐಡಿ, ಮೊಬೈಲ್ ಸಂಖ್ಯೆಯನ್ನು ಕಡ್ಡಾಯವಾಗಿ ನಮೂದಿಸಬೇಕು. ನೇಮಕಾತಿ ಪ್ರಕ್ರಿಯೆ ಮುಗಿಯುವ ತನಕ ಇದೇ ಮೊಬೈಲ್ ನಂಬರ್, ಇ-ಮೇಲ್ ಐಡಿಯನ್ನು ವ್ಯವಹಾರಗಳಿಗೆ ಬಳಕೆ ಮಾಡಲಾಗುತ್ತದೆ.

ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅಭ್ಯರ್ಥಿಗಳಿಗೆ ಪ್ರತ್ಯೇಕವಾಗಿ ಪ್ರವೇಶ ಪತ್ರಗಳನ್ನು ಕಳಿಸುವುದಿಲ್ಲ. ಖಾದಿ ಮಂಡಳಿ ಜಾಲತಾಣವನ್ನು ಆಗಾಗ ಪರಿಶೀಲಿಸಬೇಕು. ಪ್ರವೇಶ ಪತ್ರ ಪ್ರಕಟವಾದ ಬಳಿಕ ಡೌನ್ ಲೋಡ್ ಮಾಡಿಕೊಂಡು ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುವ ತನಕ ಭದ್ರವಾಗಿ ಇಟ್ಟುಕೊಳ್ಳಬೇಕು.

KVIC Recruitment 2022 – Apply Online for 10 Young Professionals Posts

ಅಭ್ಯರ್ಥಿಗಳಿಗೆ ಷರತ್ತುಗಳು ಅರ್ಜಿ ಸಲ್ಲಿಸುವವರು ಭಾರತೀಯ ನಾಗರೀಕನಾಗಿರಬೇಕು. ಒಬ್ಬ ಜೀವಂತ ಪತ್ನಿಗಿಂತ ಹೆಚ್ಚು ಪತ್ನಿಯರನ್ನು ಹೊಂದಿರುವ ಪುರುಷ, ಈಗಾಗಲೇ ಹೆಂಡತಿ ಇರುವ ವ್ಯಕ್ತಿಯನ್ನು ಮದುವೆಯಾಗಿರುವ ಮಹಿಳಾ ಅಭ್ಯರ್ಥಿಗಳು ನೇಮಕಾತಿಗೆ ಅರ್ಹರಲ್ಲ. ಅಭ್ಯರ್ಥಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಆರೋಗ್ಯವಂತರಾಗಿರಬೇಕು.

ನೇಮಕಾತಿಯು ಕರ್ತವ್ಯಗಳ ದಕ್ಷತೆ ನಿರ್ವಹಣೆಗೆ ಆತಂಕವನ್ನುಂಟು ಮಾಡುವ ಸಂಭವ ಇರುವ ಯಾವುದೇ ದೈಹಿಕ ನ್ಯೂನ್ಯತೆಯಿಂದ ಮುಕ್ತನಾಗಿರಬೇಕು. ಕೇಂದ್ರ ಅಥವ ಕರ್ನಾಟಕ ಅಥವ ಇತರೆ ಯಾವುದೇ ರಾಜ್ಯ ಸರ್ಕಾರದ ಯಾವುದೇ ಸಂಸ್ಥೆ/ ನಿಗಮ/ ಮಂಡಳಿಗಳಿಂದ ನಡೆಸಲಾಗುವ ಪರೀಕ್ಷೆಗಳಿಂದ ಅಥವ ನೇಮಕಾತಿಗಳಿಂದ ಖಾಯಂ ಆಗಿ ಡಿಬಾರ್ ಆದ ವ್ಯಕ್ತಿಗಳು ನೇಮಕಾತಿಗೆ ಅರ್ಹರಲ್ಲ.

ಪ್ರಮುಖ ದಿನಾಂಕ:
ಅರ್ಜಿ ಸಲ್ಲಿಸಲು ಆರಂಭ ದಿನಾಂಕ: 13-07-2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30-07-2022.

Recommended Video

England ವಿರುದ್ಧ ಹೀನಾಯವಾಗಿ ಸೋತ್ಮೇಲೆ ಟೀಂ‌ ಇಂಡಿಯಾಗೇ ಬಿಗ್ ಶಾಕ್ *Cricket | OneIndia Kannada

ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ವೆಬ್ ಸೈಟ್‌ ಮೂಲಕ ಅರ್ಜಿ ಸಲ್ಲಿಕೆ ಮಾಡಬಹುದಾಗಿದೆ. ವೆಬ್ ಸೈಟ್ ಮೂಲಕ 3 ಹಂತದಲ್ಲಿ ಅರ್ಜಿ ಸಲ್ಲಿಕೆ ಮಾಡಬೇಕು. ಮೊದಲ ಹಂತದಲ್ಲಿ ಫ್ರೋಫೈಲ್ ಕ್ರಿಯೇಷನ್/ ಅಪ್‌ಡೇಷನ್, ಎರಡನೇ ಹಂತದಲ್ಲಿ ಅಪ್ಲಿಕೇಶನ್ ಸಬ್‌ಮಿಷನ್, ಮೂರನೇ ಹಂತದಲ್ಲಿ ಪೇಮೆಂಟ್. ಹೆಚ್ಚಿನ ಮಾಹಿತಿಗಾಗಿ ವೆಬ್ ತಾಣಕ್ಕೆ ಭೇಟಿ ನೀಡಿ.

English summary
Khadi & village industries board (KVIC ) invited applications for 10 Young Professionals Posts in Kerala, Karnataka and Telangana, Candidates can apply online till July 30, 2022
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X