ಶಿವಮೊಗ್ಗದಲ್ಲಿ ಕೆಲಸ ಖಾಲಿ ಇದೆ; ಫೆ. 23ರ ತನಕ ಅರ್ಜಿ ಹಾಕಿ

ಶಿವಮೊಗ್ಗ, ಫೆಬ್ರವರಿ 02: ಶಿವಮೊಗ್ಗ ಜಿಲ್ಲೆಯಲ್ಲಿ ಗ್ರಂಥಾಲಯ ಮಾಹಿತಿ ಕೇಂದ್ರಗಳ ಮೇಲ್ವಿಚಾರಕ ಹುದ್ದೆಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ, ಅರ್ಹರು ಅರ್ಜಿ ಸಲ್ಲಿಸಲು ಫೆಬ್ರವರಿ 23 ಕೊನೆಯ ದಿನವಾಗಿದೆ.

ಜಿಲ್ಲಾ ವ್ಯಾಪ್ತಿಯ 251 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳಲ್ಲಿ ಪ್ರಸ್ತುತ ಖಾಲಿ ಇರುವ 14 ಗ್ರಾಮ ಪಂಚಾಯಿತಿ ಗ್ರಂಥಾಲಯ ಮತ್ತು ಮಾಹಿತಿ ಕೇಂದ್ರಗಳ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ.

Library Supervisor Post At Shivamogga Apply Till February 23

ಶಿಕಾರಿಪುರ ತಾಲ್ಲೂಕಿನ ಬಳ್ಳಿಗಾವಿ, ಹೋತನಕಟ್ಟೆ, ತಾಳಗುಂದ, ಮಾರವಳ್ಳಿ, ಅಗ್ರಹಾರ ಮುಚುಡಿ, ಸೊರಬ ತಾಲ್ಲೂಕಿನ ಅಂಡಿಗೆ, ಮುಟುಗುಪ್ಪೆ, ಭದ್ರಾವತಿ ತಾಲ್ಲೂಕಿನ ಹನುಮಂತಾಪುರ, ಸನ್ಯಾಸಿಕೋಡಮಗ್ಗೆ, ಹೊಸನಗರ ತಾಲ್ಲೂಕಿನ ರಾಮಚಂದ್ರಾಪುರ, ರಿಪ್ಪನ್‍ಪೇಟೆ, ಶಿವಮೊಗ್ಗ ತಾಲ್ಲೂಕಿನ ತುಪ್ಪೂರು, ತೀರ್ಥಹಳ್ಳಿ ತಾಲ್ಲೂಕಿನ ತೂದೂರು, ಸಾಗರ ತಾಲ್ಲೂಕಿನ ಭೀಮನಕೋಣೆ ಇಲ್ಲಿ ಮೀಸಲಾತಿಯನ್ವಯ ಹುದ್ದೆಗಳು ಖಾಲಿ ಇದ್ದು ಆಸಕ್ತರು ಅರ್ಜಿ ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಫೆಬ್ರವರಿ 23ಕಡೆಯ ದಿನ. ಅರ್ಜಿಗಳನ್ನು ಸಂಬಂಧಿಸಿದ 14 ಗ್ರಾಮ ಪಂಚಾಯಿತಿಗಳಲ್ಲಿ ಮತ್ತು ವೆಬ್‍ಸೈಟ್ https://shimoga.nic.in ನಲ್ಲಿ ಡೌನ್‍ಲೋಡ್ ಮಾಡಿಕೊಂಡು, ಭರ್ತಿ ಮಾಡಿ ಸಲ್ಲಿಸಬೇಕು.

ಅಭ್ಯರ್ಥಿಗಳು ಅರ್ಜಿಯ ಜೊತೆ ದೃಢೀಕರಿಸಿದ ಅಗತ್ಯ ದಾಖಲೆಗಳನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಂಬಂಧಪಟ್ಟ ಗ್ರಾಮ ಪಂಚಾಯಿತಿ ಅಭಿವೃದ್ದಿ ಅಧಿಕಾರಿಗಳಿಗೆ ನೇರವಾಗಿ ಸಲ್ಲಿಸಬಹುದು. ಆಸಕ್ತರು ಹೆಚ್ಚಿನ ಮಾಹಿತಿಗಾಗಿ ಗ್ರಾಮ ಪಂಚಾಯತಿಗಳ ಅಭಿವೃದ್ದಿ ಅಧಿಕಾರಿಗಳನ್ನು ಸಂಪರ್ಕಿಸಬಹುದು.

ಕೊಡಗಿನಲ್ಲಿ ಕೆಲಸ ಖಾಲಿ ಇದೆ; ಕೊಡಗು ಜಿಲ್ಲೆ ಕೃಷಿ ಇಲಾಖೆಯ ಕೃಷಿ ತಂತ್ರಜ್ಞಾನ ನಿರ್ವಹಣಾ ಸಂಸ್ಥೆ (ಎಟಿಎಂಎ) ಯೋಜನೆಯಡಿ ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ 2 ಹುದ್ದೆಗಳಿಗೆ ಒಪ್ಪಂದದ ಆಧಾರದ ಮೇಲೆ 2023-24ನೇ ಸಾಲಿನ ಸೀಮಿತ ಅವಧಿಗೆ ಸಹಾಯಕ ಕೃಷಿ ನಿರ್ದೇಶಕರ ಕಚೇರಿ ಸೋಮವಾರಪೇಟೆ ತಾಲ್ಲೂಕು ಹಾಗೂ ವಿರಾಜಪೇಟೆ ತಾಲ್ಲೂಕುಗಳಲ್ಲಿ ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ ಮಾಡಿಕೊಳ್ಳಲು ಅರ್ಜ ಕರೆಯಲಾಗಿದೆ.

ತಾಲ್ಲೂಕು ತಾಂತ್ರಿಕ ವ್ಯವಸ್ಥಾಪಕರ ಹುದ್ದೆಗೆ ವಿದ್ಯಾರ್ಹತೆ ಎಂ.ಎಸ್ಸಿ(ಕೃಷಿ/ ತೋಟಗಾರಿಕೆ/ ಮೀನುಗಾರಿಗೆ/ ಅರಣ್ಯ/ ರೇಷ್ಮೆ). ಕನಿಷ್ಟ 2 ವರ್ಷ ಕೃಷಿ ವಿಸ್ತರಣಾ ಮತ್ತು ಸಂಬಂಧಿತ ಚಟುವಟಿಕೆಯಲ್ಲಿ ಅನುಭವ ಹಾಗೂ ಎಮ್‍ಎಸ್ ಆಫಿಸ್‍ನಲ್ಲಿ ಪರಿಣಿತಿ ಹೊಂದಿರಬೇಕು. ಗರಿಷ್ಠ 45 ವರ್ಷದೊಳಗಿರಬೇಕು. ಅಭ್ಯರ್ಥಿಗಳಿಗೆ ಮಾಸಿಕ ರೂ.30 ಸಾವಿರ ಗೌರವ ಧನ ನೀಡಲಾಗುತ್ತದೆ.

ಈ ಹುದ್ದೆಗಳಿಗೆ ಅರ್ಹರಿರುವ ಅಭ್ಯರ್ಥಿಗಳು ಫೆಬ್ರವರಿ 15ರೊಳಗೆ ಕಚೇರಿ ವೇಳೆಯಲ್ಲಿ ಜಂಟಿ ಕೃಷಿ ನಿರ್ದೇಶಕರ ಕಚೇರಿ, ಕೊಡಗು ಜಿಲ್ಲೆ, ಮಡಿಕೇರಿ ಇಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಜಂಟಿ ಕೃಷಿ ನಿರ್ದೇಶಕರ ಕಚೇರಿ (ಆತ್ಮ ವಿಭಾಗ) ಕೊಡಗು ಜಿಲ್ಲೆ, ಮಡಿಕೇರಿ ಇವರನ್ನು ಸಂಪರ್ಕಿಸಬಹುದು ಎಂದು ಕೃಷಿ ಇಲಾಖೆಯ ಜಂಟಿ ನಿರ್ದೇಶಕ ಸೋಮಸುಂದರ್ ತಿಳಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+