ಶಿವಮೊಗ್ಗದಲ್ಲಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳಿಗೆ ಅರ್ಜಿ ಆಹ್ವಾನ
ಶಿವಮೊಗ್ಗ, ಮಾರ್ಚ್ 19: ಶಿವಮೊಗ್ಗ ಜಿಲ್ಲೆಯ ವಿವಿಧ ತಾಲ್ಲೂಕುಗಳ ಗ್ರಾಮ ಪಂಚಾಯತಿಗಳ ಗ್ರಂಥಾಲಯಗಳಲ್ಲಿ ಖಾಲಿಯಿರುವ ಮೇಲ್ವಿಚಾರಕರ ಹುದ್ದೆಗೆ ಮಾಸಿಕ ರೂ.7,000/- ಗೌರವ ಸಂಭಾವನೆ ಆಧಾರದ ಮೇಲೆ ನೇಮಕಾತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ.
ತೀರ್ಥಹಳ್ಳಿ ತಾಲ್ಲೂಕು ನೆರಟ್ಟೂರು (3ಬಿ ಅಂಗವಿಕಲ) ಮತ್ತು ಹೆಗ್ಗೋಡು(3ಎ), ಶಿಕಾರಿಪುರ ತಾಲೂಕು ಕಾಗಿನೆಲೆ (ಸಾ.ಅ), ಚಿಕ್ಕಜಂಬೂರು (ಸಾ.ಮ), ಹಾರೋಗೊಪ್ಪ (ಪ.ಜಾ.), ಸಾಗರ ತಾಲ್ಲೂಕು ತುಮರಿ (ಸಾ.ಅ), ಸೊರಬ ತಾಲ್ಲೂಕು ಚಂದ್ರಗುತ್ತಿ (2ಎ) ಹಾಗೂ ಹೊಸನಗರ ತಾಲ್ಲೂಕು ಪುರಪ್ಪೆಮನೆ (2ಎ) ಗ್ರಾಮ ಪಂಚಾಯತ್ ಗ್ರಂಥಾಲಯಗಳಲ್ಲಿ ಖಾಲಿ ಇವೆ.
ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಆಯಾ ಗ್ರಾ.ಪಂ ಸ್ಥಳೀಯ ನಿವಾಸಿಗಳಾಗಿದ್ದು, ಕನಿಷ್ಠ ಎಸ್ಸೆಎಸ್ಸೆಎಲ್ಸಿ ಪಾಸಾಗಿರಬೇಕು ಮತ್ತು ಆಯಾ ಪಂಚಾಯತಿಗಳಿಗೆ ನಿಗದಿಪಡಿಸಿದ ಮೀಸಲಾತಿಗೆ ಸೇರಿದ ಅಭ್ಯರ್ಥಿಗಳಾಗಿರಬೇಕು.

ನಿಗದಿತ ನಮೂನೆ ಅರ್ಜಿಗಳನ್ನು ಆಯಾ ಪಂಚಾಯತಿಯ ಕಾರ್ಯಾಲಯದಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯೊಂದಿಗೆ ಸೂಕ್ತ ದಾಖಲಾತಿಗಳನ್ನು ಲಗತ್ತಿಸಿ ಏಪ್ರಿಲ್-17ರೊಳಗಾಗಿ ಸಲ್ಲಿಸುವಂತೆ ಜಿಲ್ಲಾ ಕೇಂದ್ರ ಗ್ರಂಥಾಲಯದ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.
ಮಾಹಿತಿಗಾಗಿ ಆಯಾ ಪಂಚಾಯತಿ ಕಾರ್ಯಾಲಯ ಅಥವಾ ಉಪ ನಿರ್ದೆಶಕರು, ಜಿಲ್ಲಾ ಕೇಂದ್ರ ಗ್ರಂಥಾಲಯ ಕಚೇರಿ, ದೂ.ಸಂ.: 08182-222905 ನ್ನು ಸಂಪರ್ಕಿಸಬಹುದು.












Click it and Unblock the Notifications