ಬೆಳಗಾವಿಯಲ್ಲಿ ಕೆಲಸ ಖಾಲಿ ಇದೆ; ನ.3ರಂದು ನೇರ ಸಂದರ್ಶನ
ಬೆಳಗಾವಿ, ಅಕ್ಟೋಬರ್ 26 : ರಾಣಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ಗ್ರಂಥಾಲಯ ತರಬೇತುದಾರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ನವೆಂಬರ್ 3ರಂದು ನಡೆಯುವ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ಒಟ್ಟು 6 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಈ ಹುದ್ದೆಗಳನ್ನು ತಾತ್ಕಾಲಿಕವಾಗಿ ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳನ್ನು ನೇರ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.
ಆಯ್ಕೆಯಾದ ಅಭ್ಯರ್ಥಿಗಳನ್ನು ರಾಣಿ ಚನ್ನಮ್ಮ ವಿಶ್ವವಿದ್ಯಾಲಯ ಮತ್ತು ಪಿಜಿ ಕೇಂದ್ರಗಳಾದ ವಿಜಯಪುರ, ಬಾಗಲಕೋಟೆ, ಜಮಖಂಡಿಯಲ್ಲಿ ನಿಯೋಜನೆ ಮಾಡಲಾಗುತ್ತದೆ.

ಅಭ್ಯರ್ಥಿಗಳು ಮಾಸ್ಟರ್ ಆಫ್ ಲೈಬ್ರರಿ ಅಂಡ್ ಇನ್ಫಾರ್ಮೇಷನ್ ಸೈನ್ಸ್ ವಿದ್ಯಾರ್ಹತೆ ಪಡೆದಿರಬೇಕು. ಅಭ್ಯರ್ಥಿಗಳಿಗೆ ಕಂಪ್ಯೂಟರ್ ಆಪರೇಟಿಂಗ್ ತಿಳಿದಿರಬೇಕು. ವಾರದಲ್ಲಿ 6 ದಿನ ಕಾರ್ಯ ನಿರ್ವಹಣೆ ಮಾಡಬೇಕು. ಎನ್‌ಇಟಿ/ಕೆಎಸ್‌ಇಟಿ ಪಾಸು ಮಾಡಿದ ಅಭ್ಯರ್ಥಿಗಳಿಗೆ ನೇಮಕಾತಿಯಲ್ಲಿ ಮೊದಲ ಆದ್ಯತೆ ನೀಡಲಾಗುತ್ತದೆ.
ಆಸಕ್ತ ಅಭ್ಯರ್ಥಿಗಳು ನೇರ ಸಂದರ್ಶನಕ್ಕೆ ಬರುವಾಗ ತಮ್ಮ ವಿದ್ಯಾರ್ಹತೆಯ ದಾಖಲೆಯ ಒಂದು ಸೆಟ್ ಝೆರಾಕ್ಸ್ ತರಬೇಕು ಎಂದು ಸೂಚನೆ ನೀಡಲಾಗಿದೆ.
ವಿಳಾಸ : ನೇರ ಸಂದರ್ಶನ ರಿಜಿಸ್ಟ್ರಾರ್ ಆಫೀಸ್, ರಾಣಿ ಚನ್ನಮ್ಮ ವಿಶ್ವವಿದ್ಯಾಲಯ, ಬೆಳಗಾವಿ ಇಲ್ಲಿ ನಡೆಯಲಿದೆ. ಸಮಯ 11.45ರಿಂದ.












Click it and Unblock the Notifications