LICಯಲ್ಲಿ ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳ ನೇಮಕಾತಿ
ಬೆಂಗಳೂರು, ಆಗಸ್ಟ್ 30 : ಎಲ್‌ಐಸಿಯ ಅಂಗ ಸಂಸ್ಥೆಯಾದ ಎಲ್ ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ ನಲ್ಲಿ ಖಾಲಿ ಇರುವ ಒಟ್ಟು 264 ಹುದ್ದೆಗಳ ನೇಮಕಾತಿ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.
100 ಅಸಿಸ್ಟೆಂಟ್ ಮತ್ತು 164 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳಿಗೆ ಆನ್ ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದ್ದು, ಆರ್ಹ ಮತ್ತು ಆಸಕ್ತ ಅಭ್ಯರ್ಥಿಗಳು ನಿಗದಿತ ದಿನಾಂಕ 07-09-2017ರೊಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.

1. ಅಸಿಸ್ಟಂಟ್ ಹುದ್ದೆ
* ವೇತನ ಶ್ರೇಣಿ ಅಸಿಸ್ಟೆಂಟ್ ಹುದ್ದೆಗೆ: 13980 ರಿಂದ 32110 ರು.ತಿಂಗಳಿಗೆ.
* ವಿದ್ಯಾರ್ಹತೆ: ಅಸಿಸ್ಟೆಂಟ್ ಹುದ್ದೆಗೆ ಯಾವುದೇ ವಿಷಯದಲ್ಲಿ ಶೇಕಡ 60 ಅಂಕಗಳೊಂದಿಗೆ ಪದವಿ ಪಡೆದವರು ಅರ್ಜಿ ಸಲ್ಲಿಸಬಹುದು.
* ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
2. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆ
* ವೇತಮ ಶ್ರೇಣಿ: 32815 ರಿಂದ 49805 ತಿಂಗಳಿಗೆ.
* ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಶೇಕಡ 60 ಅಂಕಗಳೊಂದಿಗೆ ಯಾವುದೇ ವಿಷಯದಲ್ಲಿ ಎಂಬಿಎ ಪದವಿ ಪೂರ್ಣಗೊಳಿಸಿರಬೇಕು.
* ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ 21 ವರ್ಷ ಮತ್ತು ಗರಿಷ್ಠ 28 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.
* ಆಯ್ಕೆ ವಿಧಾನ: ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಎರಡೂ ಹುದ್ದೆಗಳಿಗೂ ಪ್ರತ್ಯೇಕವಾಗಿ ಆನ್‌ಲೈನ್ ಪರೀಕ್ಷೆ ನಡೆಸಲಾಗುತ್ತದೆ. ಪರೀಕ್ಷೆಯನ್ನು ಇಂಗ್ಲಿಷ್ ಭಾಷೆಯಲ್ಲಿ ಮಾತ್ರ ಬರೆಯಲು ಅವಕಾಶವಿರುತ್ತದೆ.
ಈ ಬಗ್ಗೆ ಇನ್ನು ಹೆಚ್ಚಿನ ಮಾಹಿತಿ ಬೇಕಿದ್ದರೆ ಇಲ್ಲಿ ಕ್ಲಿಕ್ಕಿಸಿ.












Click it and Unblock the Notifications