ಎಲ್ಐಸಿ ಸಂಸ್ಥೆಯಲ್ಲಿ 590ಕ್ಕೂ ಅಧಿಕ ಹುದ್ದೆಗಳಿವೆ, ಅರ್ಜಿ ಹಾಕಿ
ನವದೆಹಲಿ, ಮಾರ್ಚ್ 04: ಭಾರತೀಯ ಜೀವ ವಿಮಾ ನಿಗಮ(ಎಲ್ಐಸಿ) 2019ನೇ ಸಾಲಿನ ನೇಮಕಾತಿ ಆರಂಭಿಸಿದ್ದು, 590 ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಈ ಕುರಿತಂತೆ ಅಧಿಕೃತ ವೆಬ್ ತಾಣದಲ್ಲಿ ಪ್ರಕಟಣೆ ಹೊರಡಿಸಿದೆ.
ಅರ್ಹ, ಆಸಕ್ತ ಅಭ್ಯರ್ಥಿಗಳು ಅಧಿಸೂಚನೆಯ ಪ್ರಕಾರ ಆನ್‌ಲೈನ್ ಮೂಲಕ ಅಧಿಕೃತ ವೆಬ್‌ಸೈಟ್ ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಕೊನೆ ದಿನಾಂಕ ಮಾರ್ಚ್ 22,2019 ರೊಳಗೆ ಅರ್ಜಿ ಸಲ್ಲಿಸಬಹುದು.
ಸಂಸ್ಥೆ ಹೆಸರು: ಭಾರತೀಯ ಜೀವ ವಿಮಾ ನಿಗಮ
ಹುದ್ದೆ ಹೆಸರು : ಅಸಿಸ್ಟೆಂಟ್ ಅಡ್ಮಿನಿಸ್ಟ್ರೇಟಿವ್ ಅಧಿಕಾರಿ
ಒಟ್ಟು ಹುದ್ದೆ : 590
ಉದ್ಯೋಗ ಸ್ಥಳ : ಭಾರತದೆಲ್ಲೆಡೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 22, 2019.

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ, ಸಿಎ ಮತ್ತು ಸ್ನಾತಕೋತ್ತರ ಪದವಿ
ಸಂಬಳ ನಿರೀಕ್ಷೆ: ತಿಂಗಳಿಗೆ 56,000/-ರೂ
ವಯೋಮಿತಿ: ಮಾರ್ಚ್ 1,2019ರ ಅನ್ವಯ ಕನಿಷ್ಟ 21 ರಿಂದ ಗರಿಷ್ಟ 30 ವರ್ಷ ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಓಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ (ಸಾಮಾನ್ಯ) ಅಭ್ಯರ್ಥಿಗಳಿಗೆ 10 ವರ್ಷ ಮತ್ತು ಅಂಗವಿಕಲ (ಓಬಿಸಿ) ಅಭ್ಯರ್ಥಿಗಳಿಗೆ 13 ವರ್ಷ ವಯೋಮಿತಿ ವಿನಾಯಿತಿ ಸಿಗಲಿದೆ.
ಆಯ್ಕೆ ಪ್ರಕ್ರಿಯೆ: ಅಭ್ಯರ್ಥಿಗಳನ್ನು ಪೂರ್ವಭಾವಿ ಪರೀಕ್ಷೆ, ಮುಖ್ಯ ಪರೀಕ್ಷೆ , ಮೆಡಿಕಲ್ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನದ ಮೂಲಕ ಆಯ್ಕೆ
ಅರ್ಜಿ ಶುಲ್ಕ:
ಎಸ್ ಸಿ/ ಎಸ್ಟಿ/ಮಾಜಿ ಯೋಧ: 100 ರು
ಇತರೆ ಅಭ್ಯರ್ಥಿಗಳಿಗೆ : 600 ರು
ಅರ್ಜಿ ಸಲ್ಲಿಸಲು ಕೊನೆ ದಿನಾಂಕ : ಮಾರ್ಚ್ 22, 2019
ಅರ್ಜಿ ಸಲ್ಲಿಸುವ ವಿಧಾನ ಹಾಗೂ ಇನ್ನಿತರ ಮಾಹಿತಿಗಾಗಿ ಕ್ಲಿಕ್ ಮಾಡಿ












Click it and Unblock the Notifications