7749 ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಕರೆದ ಎಲ್‌ಐಸಿ
ಬೆಂಗಳೂರು, ಸೆಪ್ಟೆಂಬರ್ 18 : ಭಾರತೀಯ ಜೀವ ವಿಮಾ ನಿಗಮ 7749 ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು 1/10/2019 ಕೊನೆಯ ದಿನವಾಗಿದೆ.
ಎಲ್‌ಐಸಿ ಅಸಿಸ್ಟೆಂಟ್ ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಆಯ್ಕೆಯಾದವರು ದೇಶದ ಯಾವುದೇ ನಗರದಲ್ಲಿ ಕೆಲಸ ಮಾಡಬೇಕಿದೆ. ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಲು ಅವಕಾಶ ನೀಡಲಾಗಿದೆ.
ಭಾರತೀಯ ಜೀವ ವಿಮಾ ನಿಗಮದ ಅಸಿಸ್ಟೆಂಟ್ ಹುದ್ದೆಗೆ ಅರ್ಜಿ ಸಲ್ಲಿಸುವವರು ಬ್ಯಾಚುಲರ್ ಡಿಗ್ರಿಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಸಂಸ್ಥೆಯಿಂದ ಪಡೆದಿರಬೇಕು.

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ರಿಂದ 30 ವರ್ಷದ ವಯೋಮಿತಿಯನ್ನು ನಿಗದಿಪಡಿಸಲಾಗಿದೆ. (1 ಸೆಪ್ಟೆಂಬರ್ 2019ಕ್ಕೆ ಅನ್ವಯವಾಗುವಂತೆ).
ಪ್ರಾಥಮಿಕ ಮತ್ತು ಮುಖ್ಯ ಪರೀಕ್ಷೆಗಳ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. 17/9/2019 ರಿಂದ 1/10/2019ರ ತನಕ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ.
ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ/ಅಂಗವಿಕಲ ಅಭ್ಯರ್ಥಿಗಳಿಗೆ 85 ರೂ., ಉಳಿದ ಅಭ್ಯರ್ಥಿಗಳಿಗೆ 510 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications