ಎಲ್‍ಐಸಿ ಎಚ್‍ಎಫ್‍ಎಲ್‌ನಲ್ಲಿ 300 ಹುದ್ದೆಗಳಿಗೆ ಅರ್ಜಿ ಆಹ್ವಾನ
ಬೆಂಗಳೂರು, ಆಗಸ್ಟ್ 22 : ಎಲ್‍ಐಸಿ ಎಚ್‍ಎಫ್‍ಎಲ್ 300 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಸೆಪ್ಟೆಂಬರ್ 6, 2018 ಕೊನೆಯ ದಿನವಾಗಿದೆ.
ಎಲ್‍ಐಸಿ ಹೌಸಿಂಗ್ ಫೈನಾನ್ಸ್ ಲಿಮಿಟೆಡ್ (ಎಲ್‍ಐಸಿ ಎಚ್‍ಎಫ್‍ಎಲ್) 150 ಅಸಿಸ್ಟೆಂಟ್, 50 ಅಸೋಸಿಯೇಟ್, 100 ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗಳನ್ನು ವಿವಿಧ ರಾಜ್ಯದಲ್ಲಿ ಭರ್ತಿ ಮಾಡುತ್ತಿದೆ. ಕರ್ನಾಟಕದಲ್ಲಿಯೂ 14 ಹುದ್ದೆಗಳಿವೆ.
ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. ಸಿಎ-ಇಂಟರ್, ಎಂಬಿಎ ಪದವಿ ಪಡೆದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 21 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 28 ವರ್ಷಗಳು. (2018ರ ಜನವರಿ 1ಕ್ಕೆ ಅನ್ವಯವಾಗುವಂತೆ).
ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 500 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. (ಜಿಎಸ್‌ಟಿ ಸೇರಿ). ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.
ವೇತನ ಶ್ರೇಣಿ : ಅಸಿಸ್ಟೆಂಟ್ ಹುದ್ದೆಗೆ 22,257 ರೂ., ಅಸೋಸಿಯೇಟ್ ಹುದ್ದೆಗೆ 33,498 ರೂ., ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ 52,200 ರೂ. ಅರ್ಜಿ ಶುಲ್ಕವನ್ನು ನಿಗದಿ ಮಾಡಲಾಗಿದೆ.
ಅರ್ಜಿಗಳನ್ನು ಸಲ್ಲಿಸಲು, ಅಧಿಸೂಚನೆ ಓದಲು ಇಲ್ಲಿ ಕ್ಲಿಕ್ ಮಾಡಿ
ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ












Click it and Unblock the Notifications