Linkedin Layoff: ಮತ್ತೆ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲಿರುವ ಲಿಂಕ್ಡ್‌ಇನ್!
ದೆಹಲಿ ಅಕ್ಟೋಬರ್ 17: ದೇಶದಲ್ಲಿ ಹಲವೆಡೆ ಆರ್ಥಿಕ ನಷ್ಟದ ಕಾರಣ ಹೇಳಿ ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗುತ್ತಿದೆ. ಈ ಪ್ರಕ್ರಿಯೆಯಲ್ಲಿ ಲಿಂಕ್ಡ್‌ಇನ್ ಕೂಡ ಸೇರಿದೆ. ಈ ವರ್ಷದಲ್ಲಿ ಲಿಂಕ್ಡ್‌ಇನ್ ಎರಡನೇ ಬಾರಿಗೆ ಅಧಿಕ ಸಂಖ್ಯೆಯಲ್ಲಿ ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಲು ಸಿದ್ಧವಾಗಿದೆ.
ಪ್ರತಿಷ್ಠಿತ ಲಿಂಕ್ಡ್‌ಇನ್ ಕಂಪನಿಯ ಒಟ್ಟು ಉದ್ಯೋಗಿಗಳ ಶೇಕಡಾ 3ರಷ್ಟು ಉದ್ಯೋಗಿಗಳನ್ನು ವಜಾಗೊಳಿಸಲಾಗುತ್ತದೆ ಎಂದು ಹೇಳಲಾಗುತ್ತಿದೆ. ಇದರಿಂದಾಗಿ ಹೆಚ್ಚಿನ ಸಂಖ್ಯೆಯ ನೌಕರರು ಕೆಲಸ ಕಳೆದುಕೊಳ್ಳಲಿದ್ದಾರೆ. ಲಿಂಕ್ಡ್‌ಇನ್ ಉದ್ಯೋಗಿಗಳನ್ನು ವಜಾಗೊಳಿಸುತ್ತಿರುವುದು ಇದೇ ಮೊದಲಲ್ಲ.

ಇದಕ್ಕೂ ಮೊದಲು ಇದೇ ವರ್ಷದಲ್ಲಿ ಹಲವು ಉದ್ಯೋಗಿಗಳನ್ನು ವಜಾಗೊಳಿಸಿತ್ತು. 2023ರ ಮೊದಲಾರ್ಧದಲ್ಲಿ ತಂತ್ರಜ್ಞಾನ ವಲಯ ಲಿಂಕ್ಡ್‌ಇನ್ 141,516 ಉದ್ಯೋಗಿಗಳನ್ನು ಶಾಶ್ವತವಾಗಿ ಮನೆಗೆ ಕಳುಹಿಸಿತ್ತು.
ಇದೇ ವರ್ಷದಲ್ಲಿ ಲಿಂಕ್ಡ್‌ಇನ್ ಮತ್ತೆ ತನ್ನ ಉದ್ಯೋಗಿಗಳಿಗೆ ಬಿಗ್ ಶಾಕ್ ಕೊಟ್ಟಿದೆ. ಎರಡನೇ ಸುತ್ತಿನ ಉದ್ಯೋಗ ಕಡಿತದಲ್ಲಿ ತನ್ನ ಎಂಜಿನಿಯರಿಂಗ್ ಮತ್ತು ಹಣಕಾಸು ತಂಡಗಳಾದ್ಯಂತ 668 ಉದ್ಯೋಗಿಗಳನ್ನು ವಜಾಗೊಳಿಸುವುದಾಗಿ ಮೈಕ್ರೋಸಾಫ್ಟ್‌ನ ಲಿಂಕ್ಡ್‌ಇನ್ ಹೇಳಿದೆ. ವೃತ್ತಿಪರರ ಸಾಮಾಜಿಕ ಮಾಧ್ಯಮ ನೆಟ್‌ವರ್ಕ್ ಲಿಂಕ್ಡ್‌ಇನ್ ಈ ವಜಾ ಪ್ರಕ್ರಿಯೆಗೆ ಸಿದ್ಧತೆ ನಡೆಸಿದೆ.
ಲಿಂಕ್ಡ್‌ಇನ್‌ನ ಈ ವಜಾ ಪ್ರಕ್ರಿಯೆಯು ಅದರ ಒಟ್ಟು 20,000 ಉದ್ಯೋಗಿಗಳಲ್ಲಿ 3% ಕ್ಕಿಂತ ಹೆಚ್ಚು ಪರಿಣಾಮ ಬೀರುತ್ತದೆ. ಕಂಪನಿಯ ಪ್ರಕಾರ ಈ ಉದ್ಯೋಗಿಗಳಲ್ಲಿ ಹೆಚ್ಚಿನವರು ಹಣಕಾಸು ಮತ್ತು ಎಂಜಿನಿಯರಿಂಗ್ ತಂಡಗಳಲ್ಲಿರುವವರಾಗಿರುತ್ತಾರೆ. ಕಂಪನಿಯ ಆರ್ಥಿಕ ಸಮಸ್ಯೆಗಳಿಂದಾಗಿ ಈ ವರ್ಷ ತಾಂತ್ರಿಕ ವಲಯದಲ್ಲಿ ಸಾವಿರಾರು ಮಂದಿ ತಮ್ಮ ಉದ್ಯೋಗ ಕಳೆದುಕೊಂಡಿದ್ದಾರೆ.
ಉದ್ಯೋಗ ಸಂಸ್ಥೆ ಚಾಲೆಂಜರ್ ಗ್ರೇ & ಕ್ರಿಸ್ಮಸ್ ಪ್ರಕಾರ, ತಂತ್ರಜ್ಞಾನ ವಲಯ ಲಿಂಕ್ಡ್‌ಇನ್ 2023ರ ಮೊದಲಾರ್ಧದಲ್ಲಿ 141,516 ಉದ್ಯೋಗಿಗಳನ್ನು ವಜಾಗೊಳಿಸಿದೆ. ಒಂದು ವರ್ಷದ ಹಿಂದೆ 6,000 ಕ್ಕೂ ಹೆಚ್ಚು ಉದ್ಯೋಗಿಗಳಿಗೆ ಗೇಟ್ ಪಾಸ್ ನೀಡಿತ್ತು. ಈ ವಲಯದಲ್ಲಿ ಇನ್ನೂ ಉದ್ಯೋಗಿಗಳನ್ನು ತೆಗೆದುಹಾಕುವ ಪ್ರಕ್ರಿಯೆ ಮುಂದುವರೆಯುತ್ತದೆ ಎಂದು ಹೇಳಲಾಗುತ್ತಿದೆ.
ಲಿಂಕ್ಡ್‌ಇನ್ ಜಾಹೀರಾತು ಮಾರಾಟದ ಮೂಲಕ ಮತ್ತು ಸದಸ್ಯತ್ವಕ್ಕಾಗಿ ವೃತ್ತಿಪರರಿಗೆ ಶುಲ್ಕ ವಿಧಿಸುವ ಮೂಲಕ ಹಣವನ್ನು ಗಳಿಸುತ್ತದೆ. ಲಿಂಕ್ಡ್‌ಇನ್‌ನ ಹೆಚ್ಚಿನ ಆದಾಯವು ಜಾಹೀರಾತುಗಳು ಮತ್ತು ಉದ್ಯೋಗಗಳನ್ನು ಹುಡುಕುವ ಅಭ್ಯರ್ಥಿಗಳಿಂದ ಬರುತ್ತದೆ. 2023 ರ ಆರ್ಥಿಕ ವರ್ಷದ ನಾಲ್ಕನೇ ತ್ರೈಮಾಸಿಕದಲ್ಲಿ ಲಿಂಕ್ಡ್‌ಇನ್‌ನ ಆದಾಯವು ವರ್ಷದಿಂದ ವರ್ಷಕ್ಕೆ 5% ರಷ್ಟು ಹೆಚ್ಚಾಗಿದೆ. ಆದರೆ ಕಳೆದ ತ್ರೈಮಾಸಿಕದಲ್ಲಿ ಈ ಬೆಳವಣಿಗೆಯು 10% ರಷ್ಟು ದಾಖಲಾಗಿದೆ.
ಹೀಗಾಗಿ ಉದ್ಯೋಗಿಗಳನ್ನು ವಜಾಗೊಳಿಸಲು ಕಂಪನಿ ನಿರ್ಧರಿಸಿದೆ. ತನ್ನ ಆರ್ಥಿಕ ಸಮಸ್ಯೆಗಳನ್ನು ಸರಿ ದೂಗಿಸುವ ನಿಟ್ಟಿನಲ್ಲಿ ಕಂಪನಿ ಈ ನಿರ್ಧಾರ ತೆಗೆದುಕೊಂಡಿದೆ.
-
ನೌಕರಿ ಬಿಟ್ಟು ಸ್ವಂತ ಉದ್ಯಮ: ಹುಣಸೆ ಸಿಹಿತಿಂಡಿಗೆ ಪೇಟೆಂಟ್ ಪಡೆದ ಬೈಲಹೊಂಗಲದ ಟೆಕ್ಕಿ; 17 ದೇಶಗಳಿಗೆ ರಫ್ತು -
Karnataka Rain: ಕರ್ನಾಟಕದಲ್ಲಿ ಮಳೆ ಕೊರತೆ ಈ ಬಾರಿ ಈ ಭಾಗಗಳಲ್ಲಿ ಸಂಕಷ್ಟ, ಕುಡಿಯುವ ನೀರಿಗೂ ಹಾಹಾಕಾರ -
Viral Video: ಶಿಕ್ಷಕಿ ಬಿಟ್ಟುಹೋಗುವ ಸುದ್ದಿ ಕೇಳಿ ಕಣ್ಣೀರಿಟ್ಟ ಮಕ್ಕಳ ಮನಮುಟ್ಟುವ ವಿಡಿಯೋ ವೈರಲ್ -
ಶೀಘ್ರದಲ್ಲೇ ದ್ವಿತೀಯ PUC ಫಲಿತಾಂಶ ಪ್ರಕಟ: ರಿಸಲ್ಟ್ ಡೇಟ್, ಚೆಕ್ ಮಾಡುವ ವಿಧಾನ ಸೇರಿ ಸಂಪೂರ್ಣ ಮಾಹಿತಿ ಇಲ್ಲಿದೆ -
April 3 Horoscope: ಇಂದು ಯಾವ ರಾಶಿಗೆ ಲಾಭ, ಯಾರಿಗೆ ನಷ್ಟ? ಸಂಪೂರ್ಣ ವಿವರ -
ಮಾಂಗಲ್ಯ ಧಾರಣೆಗೆ 5 ನಿಮಿಷ ಬಾಕಿ ಇರುವಾಗ ಮದುವೆ ನಿಲ್ಲಿಸಿದ ವಧು! ವರನ ನಡೆಗೆ ನೆಟ್ಟಿಗರು ಫಿದಾ -
Gold Rate: ಮಾರುಕಟ್ಟೆಯಲ್ಲಿ ಚಿನ್ನ-ಬೆಳ್ಳಿ ಬೆಲೆ ತುಸು ಇಳಿಕೆ; ನಿಮ್ಮ ನಗರದಲ್ಲಿ ಇಂದಿನ ನಿಖರ ದರವೆಷ್ಟು ಗೊತ್ತೇ? -
Rashmika Mandanna: ಮದುವೆಯಾಗಿ ಒಂದೇ ತಿಂಗಳಿಗೆ ಈಗ ನಾವು ಮೂವರು ಎಂದ ರಶ್ಮಿಕಾ ಮಂದಣ್ಣ, ನೆಟ್ಟಿಗರು ಏನಂದ್ರು -
B-Khata: ಬಿ-ಖಾತಾ ಪರಿವರ್ತನೆಯಲ್ಲಿ ಹೊಸ ಸಮಸ್ಯೆ: 8 ಲಕ್ಷ ಆಸ್ತಿಗಳಲ್ಲಿ ಕೇವಲ 818ಕ್ಕೆ ಮಾತ್ರ ಎ-ಖಾತಾ -
Karnataka Weather: ಇಂದು ರಾಜ್ಯದ ಹಲವೆಡೆ ಗುಡುಗು ಸಹಿತ ಅಕಾಲಿಕ ಮಳೆ, ಬೆಂಗಳೂರಿನಲ್ಲಿ ಹೇಗಿರಲಿದೆ ವಾತಾವರಣ? -
Bengaluru property: ಬೆಂಗಳೂರಿನಲ್ಲಿ ಕಡಿಮೆ ಬೆಲೆಗೆ ಪ್ರಾಪರ್ಟಿ ಸಿಗುವ 10 ಪ್ರದೇಶಗಳು, ಬಡವರೂ ಭೂಮಿ ಖರೀದಿಸಬಹುದು -
Bengaluru vs Hyderabad: ಬೆಂಗಳೂರು ಹಿಂದಿಕ್ಕಿದ ಹೈದರಾಬಾದ್, ಸಿಲಿಕಾನ್ ಸಿಟಿಗೆ ಹಿನ್ನಡೆಯಾದ 2 ವಿಷಯಗಳು












Click it and Unblock the Notifications