ಚಾಮರಾಜನಗರ; ಶಿಕ್ಷಕ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜುಲೈ 12 : ಚಾಮರಾಜನಗರ ಜಿಲ್ಲೆಯಲ್ಲಿ ಶಿಕ್ಷಕರ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಗಳನ್ನು ಸಲ್ಲಿಸಬಹುದು ಮತ್ತು ನೇರ ಸಂದರ್ಶನಕ್ಕೆ ಹಾಜರಾಗಬಹುದಾಗಿದೆ.

ಚಾಮರಾಜನಗರ ತಾಲೂಕಿನ ಚಂದಕವಾಡಿಯ ಕರ್ನಾಟಕ ಪಬ್ಲಿಕ್ ಶಾಲೆಗೆ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗೆ ಓರ್ವ ಶಿಕ್ಷಕ, ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಕರೆಯಲಾಗಿದೆ.

ಅಭ್ಯರ್ಥಿಗಳು ಪಿ.ಯು.ಸಿ ಯಲ್ಲಿ ಕನಿಷ್ಟ ಶೇಕಡ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎನ್. ಸಿ. ಟಿ. ಇ. ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜುಕೇಷನ್ ಪ್ರೋಗ್ರಾಂ (ಡಿ.ಇ.ಸಿ.ಇಡಿ), ಬಿ.ಇಡಿ (ನರ್ಸರಿ) ಅಥವಾ ಡಿ.ಇಡಿ ತರಬೇತಿ ಹೊಂದಿರಬೇಕು. 45 ವರ್ಷಕ್ಕಿಂತ ಕಡಿಮೆ ವಯಸ್ಸಿನವರಾಗಿರಬೇಕು.

LKG Teacher Recruitment In Chamarajnagar

ಆಸಕ್ತ ಅಭ್ಯರ್ಥಿಗಳು ಜುಲೈ 15 ರೊಳಗೆ ಅರ್ಜಿ ಸಲ್ಲಿಸಬೇಕು. ಜುಲೈ 16ರಂದು ಬೆಳಗ್ಗೆ 11 ಗಂಟೆಗೆ ಸಂದರ್ಶನಕ್ಕೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 96631946901, 90718085522, 9141897919.

ಶಿಕ್ಷಕ ಹುದ್ದೆಗೆ ಅರ್ಜಿ ಹಾಕಿ : 2020-21ನೇ ಸಾಲಿನಲ್ಲಿ ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಹಂಗಳ ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಪೂರ್ವ ಪ್ರಾಥಮಿಕ (ಎಲ್.ಕೆ.ಜಿ) ತರಗತಿಗೆ ಓರ್ವ ಶಿಕ್ಷಕ, ಶಿಕ್ಷಕಿಯನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಪಿ. ಯು. ಸಿ ಯಲ್ಲಿ ಕನಿಷ್ಟ ಶೇಕಡ 50ರಷ್ಟು ಅಂಕಗಳೊಂದಿಗೆ ಉತ್ತೀರ್ಣರಾಗಿರಬೇಕು. ಎನ್. ಸಿ. ಟಿ. ಇ. ಯಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ ಎರಡು ಅಥವಾ ಎರಡು ವರ್ಷಕ್ಕಿಂತ ಹೆಚ್ಚಿನ ಅವಧಿಯ ಡಿಪ್ಲೊಮಾ ಇನ್ ನರ್ಸರಿ ಟೀಚರ್ಸ್ ಎಜುಕೇಷನ್ ಪ್ರೋಗ್ರಾಂ (ಡಿ.ಇ.ಸಿ.ಇಡಿ), ಬಿ.ಇಡಿ (ನರ್ಸರಿ) ಅಥವಾ ಡಿ.ಇಡಿ ತರಬೇತಿ ಹೊಂದಿರಬೇಕು. 45 ವರ್ಷ ಮೀರಿರಬಾರದು.

ಆಸಕ್ತ ಅಭ್ಯರ್ಥಿಗಳು ಜುಲೈ 14 ರೊಳಗೆ ಅರ್ಜಿ ಸಲ್ಲಿಸಬೇಕು. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9972657245, 9972962224, 9945651701.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+