ಮಂಡ್ಯದಲ್ಲಿ ಕೆಲಸ ಖಾಲಿ ಇದೆ; 30 ರಿಂದ 43 ಸಾವಿರ ರೂ. ವೇತನ
ಮಂಡ್ಯ, ಜನವರಿ 19: ಮಂಡ್ಯ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ, ಮಂಡ್ಯ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಿದೆ. ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 16/2/2024 ಕೊನೆಯ ದಿನವಾಗಿದೆ.
ಮಂಡ್ಯ ಡಿಸಿಸಿ ಬ್ಯಾಂಕ್ ಜ್ಯೂನಿಯರ್ ಅಸಿಸ್ಟೆಂಟ್ 70, ಡ್ರೈವರ್ 2, ಅಟೆಂಡರ್ 21, ಐಟಿ ಚೀಫ್ ಮ್ಯಾನೇಜರ್ 1 ಸೇರಿ 94 ಹುದ್ದೆಗಳನ್ನು ಭರ್ತಿ ಮಾಡುತ್ತಿದೆ. ಅಭ್ಯರ್ಥಿಗಳು ಆನ್‌ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಬೇಕು.

ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗಳಿಗೆ ಪಿಯುಸಿ ವಿದ್ಯಾರ್ಹತೆ ನಿಗದಿ ಮಾಡಲಾಗಿದೆ. ಡ್ರೈವರ್ & ಅಟೆಂಡರ್ ಹುದ್ದೆಗೆ ಎಸ್‌ಎಸ್‌ಎಲ್‌ಸಿ ವಿದ್ಯಾರ್ಹತೆ, ಐಟಿ ಚೀಫ್ ಮ್ಯಾನೇಜರ್ ಹುದ್ದೆಗೆ ಕಂಪ್ಯೂಟರ್ ಸೈನ್ಸ್‌ನಲ್ಲಿ ಎಂಟೆಕ್ ಪದವಿ ಪಡೆದಿರಬೇಕು.
ವೇತನ, ವಯೋಮಿತಿ; ಮಂಡ್ಯ ಜಿಲ್ಲಾ ಸಹಕಾರಿ ಕೇಂದ್ರ ಬ್ಯಾಂಕ್ ನಿಯಮಿತ ನೇಮಕಾತಿ ನಿಯಮಗಳ ಅನ್ವಯ ಅಭ್ಯರ್ಥಿಗಳಿಗೆ ಕನಿಷ್ಠ ವಯೋಮಿತಿ 18 ವರ್ಷಗಳು. 16/2/2024ಕ್ಕೆ 35 ವರ್ಷ ಗರಿಷ್ಠ ವಯೋಮಿತಿ ಮೀರಬಾರದು. ಎಸ್‌ಸಿ/ ಎಸ್‌ಟಿ/ ಪ್ರವರ್ಗ-1 ಅಭ್ಯರ್ಥಿಗಳಿಗೆ 5, ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 3 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.
ಅರ್ಜಿಗಳನ್ನು ಸಲ್ಲಿಕೆ ಮಾಡುವ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ, ಮಾಜಿ ಸೈನಿಕರು 750 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಸಾಮಾನ್ಯ/ ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳು 1500 ರೂ. ಶುಲ್ಕವನ್ನು ಪಾವತಿಸಬೇಕು. ಅರ್ಜಿ ಶುಲ್ಕವನ್ನು ಆನ್‌ಲೈನ್ ಮೂಲಕ ಮಾತ್ರ ಪಾವತಿ ಮಾಡಬೇಕಿದೆ.
ನೇಮಕಾತಿ ಅಧಿಸೂಚನೆಯ ಪ್ರಕಾರ ಜ್ಯೂನಿಯರ್ ಅಸಿಸ್ಟೆಂಟ್ ಹುದ್ದೆಗೆ 30,350-58,250 ರೂ., ಡ್ರೈವರ್ 27,650-52,650 ರೂ., ಅಟೆಂಡರ್ 23,500-47,650 ರೂ. ಮತ್ತು ಐಟಿ ಚೀಫ್ ಮ್ಯಾನೇಜರ್ ಹುದ್ದೆಗೆ 43,100-83,900 ರೂ. ವೇತನ ನಿಗದಿ ಮಾಡಲಾಗಿದೆ.
ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ. ಅರ್ಜಿ ಸಲ್ಲಿಕೆ ಮಾಡಲು ಮತ್ತು ಅರ್ಜಿ ಶುಲ್ಕವನ್ನು ಪಾವತಿ ಮಾಡಲು 16/2/2024 ಕೊನೆಯ ದಿನವಾಗಿದೆ.
ಆಸಕ್ತ, ಅರ್ಹರು mandyadccbank.com ವೆಬ್‌ಸೈಟ್‌ಗೆ ಭೇಟಿ ನೀಡಿ. ನೇಮಕಾತಿ ಸೆಕ್ಷನ್‌ನಲ್ಲಿ ಸರಿಯಾದ ಇ-ಮೇಲ್ ಐಡಿ, ಮೊಬೈಲ್ ನಂಬರ್ ನೋಂದಾಯಿಸಿ, ನೇಮಕಾತಿ ಅಧಿಸೂಚನೆಯನ್ನು ಸರಿಯಾಗಿ ಓದಿಕೊಂಡು ಅಗತ್ಯ ವಿವರಗಳನ್ನು ಭರ್ತಿ ಮಾಡಿ.
ಅರ್ಜಿಗಳನ್ನು ಭರ್ತಿ ಮಾಡಿದ ಬಳಿಕ ಅರ್ಜಿಯ ನಂಬರ್ ಅನ್ನು ಮುಂದಿನ ಪ್ರಕ್ರಿಯೆಗಾಗಿ ಸೇವ್ ಮಾಡಿಟ್ಟುಕೊಳ್ಳಿ ಎಂದು ಅಭ್ಯರ್ಥಿಗಳಿಗೆ ಸೂಚನೆ ನೀಡಲಾಗಿದೆ.
ಹೆಚ್ಚಿನ ಮಾಹಿತಿಗಾಗಿ ವೆಬ್‌ಸೈಟ್‌ಗೆ ಭೇಟಿ ನೀಡಿ ಅಥವ 9108538218 ಸಂಖ್ಯೆಗೆ ಸಂಪರ್ಕಿಸಬಹುದಾಗಿದೆ.












Click it and Unblock the Notifications