ಮಂಡ್ಯದಲ್ಲಿ ಕೆಲಸ ಖಾಲಿ ಇದೆ: 17 ರಿಂದ 28 ಸಾವಿರ ರೂ. ವೇತನ
ಮಂಡ್ಯ, ಮೇ 05: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರ ಕಛೇರಿ ಮಂಡ್ಯ ನೇಮಕಾತಿ ಅಧಿಸೂಚನೆಯೊಂದನ್ನು ಪ್ರಕಟಿಸಿದೆ. 41 ಜವಾನ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಸಕ್ತರು ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಕೆ ಮಾಡಲು 3/6/2024 ಕೊನೆಯ ದಿನವಾಗಿದೆ.
ಆಸಕ್ತ ಮತ್ತು ಅರ್ಹರು ಆನ್‌ಲೈನ್ ಮೂಲಕ ಮಾತ್ರ ಅರ್ಜಿಗಳನ್ನು ಸಲ್ಲಿಸಬೇಕು. ಮಂಡ್ಯ ಜಿಲ್ಲಾ ನ್ಯಾಯಾಲಯ ಕಛೇರಿಯ ವೆಬ್‌ಸೈಟ್ https://mandya.dcourts.gov.in/online-recruitment/ ಲಿಂಕ್ ಮೂಲಕ 3/6/2024ರ ರಾತ್ರಿ 11.59 ರವರೆಗೆ ಮಾತ್ರ ಅರ್ಜಿ ಸಲ್ಲಿಸತಕ್ಕದ್ದು. ಅರ್ಜಿ ಶುಲ್ಕ ಪಾವತಿ ಮಾಡಲು 4/6/2024 ಕೊನೆಯ ದಿನ.

ಪರಿಶಿಷ್ಟ ಜಾತಿ 7, ಸಾಮಾನ್ಯ ಅಭ್ಯರ್ಥಿ 18, ಪರಿಶಿಷ್ಟ ಪಂಗಡ 4, ಪ್ರವರ್ಗ-1 2, ಪ್ರವರ್ಗ 2 (ಎ) 6, ಪ್ರವರ್ಗ 2 (ಬಿ) 2, ಪ್ರವರ್ಗ 3ಎ (1), ಪ್ರವರ್ಗ 3 (ಬಿ) 1 ಸೇರಿದಂತೆ ಒಟ್ಟು 41 ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 17,000-28,950 ರೂ. ವೇತನ ನಿಗದಿ ಮಾಡಲಾಗಿದೆ.
ವಿದ್ಯಾರ್ಹತೆ ವಿವರ: ಅರ್ಜಿಗಳನ್ನು ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌ಎಸ್ಎಲ್‌ಸಿ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕು. ಕನ್ನಡ ಭಾಷೆಯನ್ನು ಓದಲು ಮತ್ತು ಬರೆಯಲು ತಿಳಿದಿರಬೇಕು.
ತತ್ಸಮಾನ ವಿದ್ಯಾರ್ಹತೆ ಎಂದರೆ ಸಿಬಿಎಸ್‌ಸಿ ಮತ್ತು ಐಸಿಎಸ್‌ಇ ಮಂಡಳಿಯು ನಡೆಸುವ ಕ್ಲಾಸ್ 10 ಪರೀಕ್ಷೆ, ಇತರೆ ರಾಜ್ಯ ಸರ್ಕಾರದ ಪರೀಕ್ಷಾ ಮಂಡಳಿಗಳಿಂದ ನಡೆಸುವ ಕ್ಲಾಸ್ 10 ಪರೀಕ್ಷೆ. ಎನ್‌ಐಓಎಸ್ ನಡೆಸುವ ಪ್ರೌಢ ಶಿಕ್ಷಣ ಕೋರ್ಸ್. ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಪ್ರೌಢ ಶಿಕ್ಷಣ ಮಟ್ಟದ ಕೋರ್ಸ್.
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಅರ್ಜಿ ಸಲ್ಲಿಕೆಗೆ ನಿಗದಿ ಮಾಡಿದ ಕೊನೆಯ ದಿನಾಂಕದಂದು ಅಭ್ಯರ್ಥಿ 18 ವರ್ಷಗಳನ್ನು ಪೂರೈಸಿರತಕ್ಕದ್ದು. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ, 2ಎ, 2ಬಿ, 3ಎ, 3ಬಿ ಅಭ್ಯರ್ಥಿಗಳಿಗೆ 38 ವರ್ಷ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಪ್ರವರ್ಗ-1 40 ವರ್ಷಗಳು. ನಿಯಮಾವಳಿಗಳ ಅನ್ವಯ ವಯೋಮಿತಿ ಸಡಿಲಿಕೆ ಇರುತ್ತದೆ.
ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಸ್ಪೇಟ್ ಬ್ಯಾಂಕ್ ಆಫ್ ಇಂಡಿಯಾದ State Bank Collect ಮೂಲಕ on-line payment through net banking/credit card/debit card ಸೌಲಭ್ಯದ ಮೂಲಕ ಪಾವತಿ ಮಾಡಬಹುದಾಗಿದೆ. ಇದನ್ನು ಹೊರತುಪಡಿಸಿ ಯಾವುದೇ ಚಲನ್, ಡಿಮ್ಯಾಂಡ್ ಡ್ರಾಫ್ಟ್, ಪೋಸ್ಟಲ್ ಆರ್ಡರ್, ಮನಿ ಆರ್ಡರ್ ಇವುಗಳನ್ನು ಸ್ವೀಕರಿಸಲಾಗುವುದಿಲ್ಲ. ಶುಲ್ಕ ಪಾವತಿಸದ ಅಭ್ಯರ್ಥಿಗಳ ಅರ್ಜಿಗಳನ್ನು ತಿರಸ್ಕರಿಸಲಾಗುತ್ತದೆ.
ಅಭ್ಯರ್ಥಿಗಳು ON-LINE ಮೂಲಕ ಅರ್ಜಿ ಭರ್ತಿ ಮಾಡುವಾಗ ನ್ಯಾಯಾಲಯದ ಅಧಿಕೃತ ವೆಬ್‌ಸೈಟ್‌ನಲ್ಲಿ ಅರ್ಜಿಯನ್ನು ಸಲ್ಲಿಸಬೇಕು. ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದವರೆಗೂ ವಿಳಂಬ ಮಾಡದ ಮುಂಚಿತವಾಗಿ ಅರ್ಜಿಗಳನ್ನು ಸಲ್ಲಿಸತಕ್ಕದ್ದು, ಒಮ್ಮೆ ಶುಲ್ಕವನ್ನು ಪಾವತಿಸಿದ ನಂತರ ಅದನ್ನು ಯಾವುದೇ ಸಂದರ್ಭದಲ್ಲಿ ಹಿಂದಿರುಗಿಸಲಾಗುವುದಿಲ್ಲ.
ಅಭ್ಯರ್ಥಿಗಳು ಅರ್ಜಿಯನ್ನು ON-LINE ಮೂಲಕ ಸಲ್ಲಿಸುವ ಮೊದಲು ಕೊಟ್ಟಿರುವ ಎಲ್ಲಾ ಸೂಚನೆಗಳನ್ನು ಗಮನವಿಟ್ಟು ಓದಿಕೊಳ್ಳಬೇಕು ಮತ್ತು ತಪ್ಪಾಗದಂತೆ ನೋಡಿಕೊಳ್ಳುವುದು. ಸರಿಯಾದ ಮಾಹಿತಿ ನೀಡದೆ ಇರುವ ಮತ್ತು ಅಪೂರ್ಣ ಮಾಹಿತಿಯುಳ್ಳ ಅರ್ಜಿಗಳನ್ನು ತಿರಸ್ಕರಿಸಲಾಗುವುದು.
ಅರ್ಜಿ ಸಲ್ಲಿಸುವ ಸಮಯದಲ್ಲಿ ನೀಡಿದ ಹುಟ್ಟಿದ ದಿನಾಂಕ, ಶೈಕ್ಷಣಿಕ ವಿದ್ಯಾರ್ಹತೆ, ಮೀಸಲಾತಿ, ವಯೋಮಿತಿ ಸಡಿಲಿಕೆ ಇತ್ಯಾದಿಗಳಿಗೆ ಸಂಬಂಧಿಸಿದಂತೆ ವಿವರಗಳನ್ನು ಮಾತ್ರ ಪರಿಗಣಿಸಲಾಗುವುದು ಇವುಗಳಿಗೆ ಸಂಬಂಧಿಸಿದಂತೆ ಯಾವ ಬದಲಾವಣೆಗಳಿಗೆ ಅವಕಾಶ ಇರುವುದಿಲ್ಲ.












Click it and Unblock the Notifications