ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಹಾಕಿ

ಬೆಂಗಳೂರು, ಜನವರಿ 04 : ಮಂಡ್ಯ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 17/1/2019 ಕೊನೆಯ ದಿನವಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ 2 ಶೀಘ್ರಲಿಪಿಗಾರ, 9 ಬೆರಳಚ್ಚುಗಾರ, 3 ಬೆರಳಚ್ಚು-ನಕಲುಗಾರ, 8 ಆದೇಶ ಜಾರಿಕಾರ ಮತ್ತು 16 ಜವಾನರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ.

ಅಧಿಸೂಚನೆಗೆ ಸಂಬಂಧ ಪಟ್ಟ ಮಾಹಿತಿ, ಅರ್ಜಿ ನಮೂನೆಯು ವೆಬ್‌ಸೈಟ್‌ನಲ್ಲಿ ಲಭ್ಯವಿದೆ. ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 17/1/2019ರ ಸಂಜೆ 4 ಗಂಟೆ ಕೊನೆಯ ದಿನವಾಗಿದೆ. ಒಂದು ವೇಳೆ ಅಂದು ಸಾರ್ವತ್ರಿಕ ರಜೆ ಇದ್ದರೆ ಮುಂದಿನ ಕೆಲಸದ ದಿನದ ಕಚೇರಿ ಅವಧಿಯಲ್ಲಿ ಅರ್ಜಿಗಳನ್ನು ಕೊನೆಯದಾಗಿ ಸ್ವೀಕಾರ ಮಾಡಲಾಗುತ್ತದೆ.

ಆಯ್ಕೆಯಾದ ಅಭ್ಯರ್ಥಿಗಳು ಕರ್ನಾಟಕ ಸೇವಾ ನಿಯಮ (ಪರಿವೀಕ್ಷಣೆ ನಿಯಮಗಳು) 1977ರ ಪ್ರಕಾರ 2 ವರ್ಷಗಳ ಕಾಲ ಪರಿವೀಕ್ಷಣಾ ಅವಧಿಯಲ್ಲಿರುತ್ತಾರೆ. ಈ ಅವಧಿಯಲ್ಲಿ ಅಭ್ಯರ್ಥಿಗಳು ಅವರುಗಳ ಹುದ್ದೆಗೆ ನಿಗದಿಪಡಿಸಿರುವ ಇಲಾಖಾ ಪರೀಕ್ಷೆಗಳಲ್ಲಿ ಮತ್ತು ಕರ್ನಾಟಕ ಸರ್ಕಾರದ ನಿಯಮಾನುಸಾರ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು...

ಹೆಚ್ಚಿನ ಮಾಹಿತಿಗಾಗಿ ಇಲ್ಲಿ ಕ್ಲಿಕ್ ಮಾಡಿ

ವಿದ್ಯಾರ್ಹತೆಯ ವಿವರ

ವಿದ್ಯಾರ್ಹತೆಯ ವಿವರ

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ, ಬೆರಳಚ್ಚುಗಾರ, ಬೆರಳಚ್ಚು-ನಕಲುಗಾರ, ಆದೇಶ ಜಾರಿಕಾರ ಮತ್ತು ಜವಾನರ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ 10/12/ಪದವಿ ಅಥವ ತತ್ಸಮಾನ ವಿದ್ಯಾರ್ಹತೆಯನ್ನು ಮಾನ್ಯತೆ ಪಡೆದ ವಿಶ್ವವಿದ್ಯಾಲಯಗಳಿಂದ ಪಡೆದಿರಬೇಕು.

ವೇತನ ಶ್ರೇಣಿ ಎಷ್ಟು?

ವೇತನ ಶ್ರೇಣಿ ಎಷ್ಟು?

ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಸಾಮಾನ್ಯ ವರ್ಗಕ್ಕೆ 35, 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ ಪ್ರವರ್ಗ -1 ರ ಅಭ್ಯರ್ಥಿಗಳಿಗೆ 40 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳಿಗೆ ವೇತನ ಶ್ರೇಣಿ : 17,000-52,650 ರೂ.ಗಳು.

ಅರ್ಜಿ ಶುಲ್ಕದ ವಿವರಗಳು

ಅರ್ಜಿ ಶುಲ್ಕದ ವಿವರಗಳು

* ಶೀಘ್ರಲಿಪಿಗಾರ : ಸಾಮಾನ್ಯ ವರ್ಗ 200 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ 100 ರೂ.
* ಬೆರಳಚ್ಚು ಮತ್ತು ಬೆರಳಚ್ಚು ನಕಲುಗಾರರ ಹುದ್ದೆ : ಸಾಮಾನ್ಯ ವರ್ಗ 200 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ 100 ರೂ.ಗಳು.
* ಆದೇಶ ಜಾರಿಕಾರರ ಹುದ್ದೆ : ಸಾಮಾನ್ಯ ವರ್ಗ 200 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ 100 ರೂ.ಗಳು.
* ಜವಾನರ ಹುದ್ದೆ : ಸಾಮಾನ್ಯ ವರ್ಗ 200 ರೂ., ಪ್ರವರ್ಗ 2ಎ, 2ಬಿ, 3ಎ, 3ಬಿ ಸೇರಿದ ಅಭ್ಯರ್ಥಿಗಳಿಗೆ 100 ರೂ.ಗಳು.

ಪರಿಶಿಷ್ಠ ಜಾತಿ/ಪರಿಶಿಷ್ಠ ಪಂಗಡ/ಪ್ರವರ್ಗ-1 ಹಾಗೂ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ಇರುತ್ತದೆ.

ಅರ್ಜಿ ಸಲ್ಲಿಸಲು ವಿಳಾಸ

ಅರ್ಜಿ ಸಲ್ಲಿಸಲು ವಿಳಾಸ

ಅರ್ಜಿ ನಮೂನೆಯನ್ನು ವೆಬ್‌ಸೈಟ್‌ನಲ್ಲಿ ಪಡೆದುಕೊಂಡು ಭರ್ತಿ ಮಾಡಿದ ಅರ್ಜಿಗಳನ್ನು ಸಲ್ಲಿಸಲು 17/1/2019ರ ಸಂಜೆ 4 ಗಂಟೆ ಕೊನೆಯ ದಿನವಾಗಿದೆ.

ವಿಳಾಸ : ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಮಂಡ್ಯ ಜಿಲ್ಲೆ, ಮಂಡ್ಯ.

ಆಯ್ಕೆ ವಿಧಾನ

ಆಯ್ಕೆ ವಿಧಾನ

* ಅಭ್ಯರ್ಥಿಗಳ ಆಯ್ಕೆಯನ್ನು ಕರ್ನಾಟಕ ಅಧೀನ ನ್ಯಾಯಾಲಯಗಳ (ಲಿಪಿಕ ಮತ್ತು ಇತರೆ ಹುದ್ದೆಗಳು) (ನೇಮಕಾತಿ) (ತಿದ್ದುಪಡಿ) ನಿಯಮಗಳು 2007ರ ಅನ್ವಯ ಆಯ್ಕೆ ಮಾಡಲಾಗುತ್ತದೆ.

* ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಮತ್ತು ಅಭ್ಯರ್ಥಿಯು 15 ನಿಮಿಷಗಳ ಕಾಲ ಕನ್ನಡ ಮತ್ತು ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುತ್ತದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+