ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ 10 ಹುದ್ದೆಗಳಿಗೆ ಅರ್ಜಿ ಹಾಕಿ

ಮಂಡ್ಯ, ಮಾರ್ಚ್ 07: ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಖಾಲಿ ಇರುವ ಶೀಘ್ರಲಿಪಿಗಾರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಸಲು 3/4/2021 ಕೊನೆಯ ದಿನವಾಗಿದೆ.

ಒಟ್ಟು 10 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಕರೆಯಲಾಗಿದೆ. ಆಸಕ್ತ ಅಭ್ಯರ್ಥಿಗಳು ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್‌ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಸಬಹುದಾಗಿದೆ. 10 ಹುದ್ದೆಗಳ ಪೈಕಿ ಸಾಮಾನ್ಯ ವರ್ಗ 5, ಪರಿಶಿಷ್ಟ ಜಾತಿ 2, ಪರಿಶಿಷ್ಟ ಪಂಗಡ 1, ಪ್ರವರ್ಗ 2ಎ 1, ಪ್ರವರ್ಗ 3ಎ 1 ಹುದ್ದೆಗಳನ್ನು ಮೀಸಲಿಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸುವ ಎಸ್. ಎಸ್. ಎಲ್‌. ಸಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು. ಕನ್ನಡ ಮತ್ತು ಇಂಗ್ಲೀಷ್ ಬೆರಳಚ್ಚು ಮತ್ತು ಕನ್ನಡ ಮತ್ತು ಇಂಗ್ಲೀಷ್ ಶೀಘ್ರಲಿಪಿಗಳ ಹಿರಿಯ ಶ್ರೇಣಿ ಪರೀಕ್ಷೆಗಳಲ್ಲಿ ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣಗೊಂಡಿರಬೇಕು.

 Mandya District Court Recruitment Stenographer Posts

ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ ಸಾಮಾನ್ಯ ವರ್ಗಕ್ಕೆ 35 ವರ್ಷ. 2ಎ/ 2ಬಿ/ 3ಎ/ 3ಬಿ ವರ್ಗಕ್ಕೆ 38 ವರ್ಷ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 40 ವರ್ಷಗಳು.

ಅರ್ಜಿ ಶುಲ್ಕದ ವಿವರಗಳು; ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ. ಶುಲ್ಕವನ್ನು ಪಾವತಿ ಮಾಡಬೇಕು. ಪ್ರವರ್ಗ 2ಎ/ 2ಬಿ/ 3ಎ/ 3ಬಿ ಅಭ್ಯರ್ಥಿಗಳಿಗೆ 100 ರೂ.ಗಳು. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1/ ಅಂಗವಿಕಲ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಇದೆ.

ಅರ್ಜಿ ಸಲ್ಲಿಸಲು ವಿಳಾಸ; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ, ಮಂಡ್ಯ ಜಿಲ್ಲೆ.

ಹೆಚ್ಚಿನ ಮಾಹಿತಿ, ಅರ್ಜಿಗಾಗಿ ವಿಳಾಸ
https://districts.ecourts.gov.in/mandya

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+