ಮಂಡ್ಯ ಕೋರ್ಟ್‌ನಲ್ಲಿ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿ ಆಹ್ವಾನ

ಮಂಡ್ಯ, ಮಾರ್ಚ್ 09: ಮಂಡ್ಯ ಜಿಲ್ಲಾ ನ್ಯಾಯಾಂಗ ಘಟಕದಲ್ಲಿ ಖಾಲಿ ಇರುವ ಬೆರಳಚ್ಚುಗಾರ ಹುದ್ದೆಗಳಿಗೆ ಅರ್ಜಿಗಳನ್ನು ಕರೆಯಲಾಗಿದೆ. ಅರ್ಜಿಗಳನ್ನು ಸಲ್ಲಿಸಲು ಕೊನೆಯ ದಿನಾಂಕ 3/4/2021.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ಮಂಡ್ಯ ಘಟಕದಲ್ಲಿ ಹಿಂಬಾಕಿ ಇರುವ 7 ಮತ್ತು ಹೊಸದಾಗಿ ಅನುಮತಿ ನೀಡಲಾದ 1 ಸೇರಿ ಒಟ್ಟು 8 ಬೆರಳಚ್ಚುಗಾರ ಹುದ್ದೆಗಳನ್ನು ಭರ್ತಿ ಮಾಡಲಾಗುತ್ತಿದೆ. ವೆಬ್‌ಸೈಟ್‌ನಲ್ಲಿ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಸಲ್ಲಿಸಬೇಕು.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್‌. ಎಸ್‌. ಎಲ್‌. ಸಿ. ಅಥವ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು. ಕನ್ನಡ ಮತ್ತು ಆಂಗ್ಲ ಬೆರಳಚ್ಚು ಹಿರಿಯ ಶ್ರೇಣಿ ಪರೀಕ್ಷೆಗಳಲ್ಲಿ ಅಥವ ತತ್ಸಮಾನ ಪರೀಕ್ಷೆಗಳಲ್ಲಿ ಉತ್ತೀರ್ಣಗೊಂಡಿರಬೇಕು.

 Mandya District Court Recruitment Typist Posts

ಅರ್ಜಿಗಳನ್ನು ಸ್ವೀಕರಿಸಲು ನಿಗದಿಪಡಿಸಿದ ಕೊನೆಯ ದಿನಾಂಕದಂದು ಅಭ್ಯರ್ಥಿಯು ಕನಿಷ್ಠ 18 ವರ್ಷ ವಯಸ್ಸನ್ನು ಪೂರೈಸಿರತಕ್ಕದ್ದು. ಸಾಮಾನ್ಯ ವರ್ಗಕ್ಕೆ 35, 2ಎ/ 2ಬಿ/ 3ಎ/ 3ಬಿ ವರ್ಗಕ್ಕೆ 38, ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಅರ್ಜಿ ಶುಲ್ಕಗಳು; ಅರ್ಜಿಗಳನ್ನು ಸಲ್ಲಿಸುವ ಸಾಮಾನ್ಯ ವರ್ಗದ ಅಭ್ಯರ್ಥಿಗಳು 200 ರೂ., ಪ್ರವರ್ಗ 2ಎ/ 2ಬಿ/ 3ಎ/ 3ಬಿ ವರ್ಗಕ್ಕೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ. ಪರಿಶಿಷ್ಟ ಜಾತಿ/ ಪರಿಶಿಷ್ಟ ಪಂಗಡ/ ಪ್ರವರ್ಗ-1 ರ ಅಭ್ಯರ್ಥಿಗೆ ಅರ್ಜಿ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.

ವೆಬ್ ಸೈಟ್ ಮೂಲಕ ಅರ್ಜಿಗಳನ್ನು ಡೌನ್ ಲೋಡ್ ಮಾಡಿಕೊಂಡು ಭರ್ತಿ ಮಾಡಿ ಸಲ್ಲಿಸಬೇಕು. https://districts.ecourts.gov.in/mandya

ಅರ್ಜಿಗಳನ್ನು ಸಲ್ಲಿಸಲು ವಿಳಾಸ; ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು, ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಜಿಲ್ಲೆ, ಮಂಡ್ಯ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+