ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮಂಡ್ಯ ಜಿಲ್ಲಾ ಕೋರ್ಟಿನಲ್ಲಿ 10ನೇ ತರಗತಿ ಪಾಸಾದವರಿಗೆ ಉದ್ಯೋಗ

By Mahesh
|
Google Oneindia Kannada News

ಮಂಡ್ಯ, ಜೂನ್ 25: ಮಂಡ್ಯ ಜಿಲ್ಲಾ ನ್ಯಾಯಾಲಯದಲ್ಲಿ ಖಾಲಿ ಇರುವ 20 ವಿವಿಧ ಹುದ್ದೆಗಳ ನೇಮಕಾತಿಗಾಗಿ ಕರ್ನಾಟಕ ನ್ಯಾಯಾಂಗವು ಅಧಿಸೂಚನೆ ಹೊರಡಿಸಿದೆ. ಅರ್ಜಿ ಸಲ್ಲಿಸಲು ಜುಲೈ 18 ಕೊನೆ ದಿನಾಂಕವಾಗಿದೆ.

ಜಿಲ್ಲಾ ಮತ್ತು ಸತ್ರ ನ್ಯಾಯಾಲಯ, ಮಂಡ್ಯ ಘಟಕದಲ್ಲಿ ಖಾಲಿಯಿರುವ 08 ಶೀಘ್ರಲಿಪಿಗಾರರ ಹಾಗೂ 12 ಬೆರಳಚ್ಚುಗಾರರರ ಹುದ್ದೆಗಳಿಗೆ ಸಂಬಂಧಪಟ್ಟ ಅರ್ಜಿ ನಮೂನೆಯನ್ನು ಇಕೋರ್ಟ್ಸ್ ವೆಬ್ ಸೈಟ್[http://ecourts.gov.in/mandya] ನಿಂದ ಪಡೆದುಕೊಳ್ಳಬಹುದು.

50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್50 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದ ಐಓಸಿಎಲ್

ಅರ್ಜಿ ಸಲ್ಲಿಸಬೇಕಾದ ವಿಳಾಸ: ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು,
ಜಿಲ್ಲಾ ಮತ್ತು ಸತ್ರ ನ್ಯಾಯಾಲಯ
ಮಂಡ್ಯ ಜಿಲ್ಲೆ, ಮಂಡ್ಯ

Mandya District Court Stenographer & Typist – 20 Posts

1. ಶೀಘ್ರ ಲಿಪಿಗಾರರು: 08
ವೇತನ ಶ್ರೇಣಿ: 27,650 ರಿಂದ 52,650 ರು ತನಕ
ಶೈಕ್ಷಣಿಕ ಅರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

*
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಹಾಗೂ ಶೀಘ್ರಲಿಪಿ ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ.

ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಹಾಗೂ ಅಭ್ಯರ್ಥಿಯು 120 ಪದಗಳ ವೇಗದಂತೆ 5 ನಿಮಿಷಗಳ ಉಕ್ತಲೇಖನವನ್ನು ತೆಗೆದುಕೊಂಡು, 45 ನಿಮಿಷಗಳಲ್ಲಿ ಲಿಪ್ಯಂತರಿಸುವ ಅರ್ಹತಾ ಪರೀಕ್ಷೆಯಲ್ಲಿ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

2. ಬೆರಳಚ್ಚುಗಾರರು: 12
ವೇತನ ಶ್ರೇಣಿ: 21400 ರಿಂದ 42,000 ರು ತನಕ
ಶೈಕ್ಷಣಿಕ ಅರ್ಹತೆ: ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಅಥವಾ ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರಬೇಕು

ಪದವೀಧರರಿಗೆ ಸೌತ್ ಇಂಡಿಯನ್ ಬ್ಯಾಂಕ್‌ನಲ್ಲಿ ಕೆಲಸ ಇದೆ

*
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿಯು ನಡೆಸುವ ಹಿರಿಯ ಶ್ರೇಣಿಯ ಕನ್ನಡ ಮತ್ತು ಆಂಗ್ಲ ಭಾಷೆಗಳ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣ ಅಥವಾ ತತ್ಸಮಾನ ವಿದ್ಯಾರ್ಹತೆ.

* ಅರ್ಹತಾ ಪರೀಕ್ಷೆಗಳಲ್ಲಿ ಗಳಿಸಿರುವ ಒಟ್ಟು ಶೇಕಡಾವಾರು ಅಂಕಗಳು ಹಾಗೂ ಅಭ್ಯರ್ಥಿಯು 15 ನಿಮಿಷಗಳ ಕಾಲ ಕನ್ನಡ ಹಾಗೂ ಆಂಗ್ಲ ಭಾಷೆಗಳಲ್ಲಿ ಉಕ್ತಲೇಖನವನ್ನು ಬೆರಳಚ್ಚು ಮಾಡುವ ಅರ್ಹತಾ ಪರೀಕ್ಷೆಯಲ್ಲಿ ಪಡೆದ ಅಂಕಗಳು ಹಾಗೂ ಸಂದರ್ಶನದಲ್ಲಿ ಗಳಿಸುವ ಅಂಕಗಳ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು

ವಯೋಮಿತಿ:
ವಯೋಮಿತಿ: ಅರ್ಜಿ ಸಲ್ಲಿಸಲು ಕನಿಷ್ಠ ವಯೋಮಿತಿ 18 ವರ್ಷಗಳು. ಸಾಮಾನ್ಯ ವರ್ಗದವರಿಗೆ 35 ವರ್ಷ/ಪ್ರವರ್ಗ 2ಎ/2ಬಿ/3ಎ/3ಬಿ 38 ವರ್ಷ, ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪ್ರವರ್ಗ 1ರ ಅಭ್ಯರ್ಥಿಗಳಿಗೆ 40 ವರ್ಷದ ಗರಿಷ್ಠ ವಯೋಮಿತಿ ನಿಗದಿ ಮಾಡಲಾಗಿದೆ.

ಆಯ್ಕೆ ವಿಧಾನ: ಲಿಖಿತ ಪರೀಕ್ಷೆ ಹಾಗೂ ವೈಯಕ್ತಿಕ ಸಂದರ್ಶನದ ಮೂಲಕ ಮೇಲೆ ತಿಳಿಸಲಾಗಿರುವ ಎಲ್ಲಾ ಹುದ್ದೆಗಳಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ. ಈ ಬಗ್ಗೆ ಕರ್ನಾಟಕ ನ್ಯಾಯಾಂಗ ವೆಬ್ ಸೈಟ್ ನಲ್ಲಿ ಮಾಹಿತಿ ನೀಡಲಾಗುತ್ತದೆ.

English summary
Mandya District Court Karnataka Judiciary has published recruitment notification for the post of Stenographer, Typist. The last date for submission of online applications is July 18, 2018
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X