ಮಂಡ್ಯ; 54 ಗ್ರಾಮ ಲೆಕ್ಕಿಗ ಹುದ್ದೆಗೆ ಅರ್ಜಿ ಹಾಕಿ

ಬೆಂಗಳೂರು, ಮಾರ್ಚ್ 19 : ಮಂಡ್ಯ ಜಿಲ್ಲಾ ಕಂದಾಯ ಘಟಕದಲ್ಲಿ ಖಾಲಿ ಇರುವ ಗ್ರಾಮ ಲೆಕ್ಕಿಗರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಏಪ್ರಿಲ್ 18, 2020 ಕೊನೆಯ ದಿನವಾಗಿದೆ.

ಒಟ್ಟು 54 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳು ಮಂಡ್ಯದಲ್ಲಿ ಕೆಲಸ ಮಾಡಬೇಕಿದೆ. ಆಯ್ಕೆಯಾದ ಅಭ್ಯರ್ಥಿಗಳಿಗೆ 21,400 ರಿಂದ 42,000 ರೂ. ವೇತನವನ್ನು ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು 12ನೇ ತರಗತಿ ಪರೀಕ್ಷೆಯಲ್ಲಿ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವ ಬೋರ್ಡ್‌ನಿಂದ ಉತ್ತೀರ್ಣರಾಗಿರಬೇಕು. ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

Mandya District Village Accountant Recruitment Apply For 54 post

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ವರ್ಷದ ವಯೋಮಿತಿ ನಿಗದಿ ಮಾಡಲಾಗಿದೆ. ಗರಿಷ್ಠ ವಯೋಮಿತಿ 35 ವರ್ಷಗಳು. 2ಎ/3ಬಿ/3ಎ/3ಬಿ ಅಭ್ಯರ್ಥಿಗಳಿಗೆ 3 ವರ್ಷಗಳು. ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 5 ವರ್ಷ, ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷದ ವಯೋಮಿತಿ ಸಡಿಲಿಕೆ ಇರುತ್ತದೆ.

ಅರ್ಜಿಗಳನ್ನು ಸಲ್ಲಿಸುವ 2ಎ/2ಬಿ/3ಎ/3ಬಿ ಅಭ್ಯರ್ಥಿಗಳಿಗೆ 200 ರೂ., ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ 100 ರೂ. ಶುಲ್ಕವನ್ನು ನಿಗದಿ ಮಾಡಲಾಗಿದೆ.

ಅರ್ಜಿಗಳನ್ನು ಸಲ್ಲಿಸುವ ಅಭ್ಯರ್ಥಿಗಳು ಹೆಚ್ಚಿನ ಮಾಹಿತಿಗಾಗಿ ಕ್ಲಿಕ್ ಮಾಡಿ

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+