Zilla Panchayat Recruitment: ಈ ಪದವೀಧರರಿಗೆ ಮಂಡ್ಯದಲ್ಲಿ ಸರ್ಕಾರಿ ಹುದ್ದೆ ಖಾಲಿ ಇವೆ
ಮಂಡ್ಯ, ಅಕ್ಟೋಬರ್ 10: ಮಂಡ್ಯ ಜಿಲ್ಲೆ ವ್ಯಾಪ್ತಿಯಲ್ಲಿನ ಪದವೀಧರರಿಗೆ ಇಲ್ಲೊಂದು ಸಿಹಿ ಸುದ್ದಿ ಇದೆ. ಮಂಡ್ಯ ಜಿಲ್ಲಾ ಪಂಚಾಯತಿ ವತಿಯಿಂದ ಭರ್ಜರಿ ನೇಮಕಾತಿ ನಡೆಯುತ್ತಿದೆ. ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಸರ್ಕಾರಿ ಉದ್ಯೋಗ ಪಡೆಯಲು ಇಚ್ಚಿಸಿರುವ ಅಭ್ಯರ್ಥಿಗಳಿಗೆ ಇದೊಂದು ಸುವರ್ಣ ಅವಕಾಶವಾಗಿದೆ. ಅಕ್ಟೋಬರ್ 20 ಅರ್ಜಿ ಸಲ್ಲಿಕೆಗೆ ಕೊನೆಯ ದಿನವಾಗಿದೆ.
ಮಂಡ್ಯ ಜಿಲ್ಲಾ ಪಂಚಾಯತಿಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್, ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಸೇರಿ ಒಟ್ಟು 19 ಹುದ್ದೆಗಳು ಖಾಲಿ ಇವೆ. ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಈ ಕೂಡಲೇ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬೇಕು. ಇದಕ್ಕು ಮೊದಲು ನೇಮಕಾತಿ, ವೇತನ, ವಿದ್ಯಾರ್ಹತೆ ಮಾಹಿತಿ ಇಲ್ಲಿ ತಿಳಿಯಿರಿ.

ಜಿಪಂ ನೇಮಕಾತಿ ಪೂರ್ಣ ವಿವರ
ನೇಮಕಾತಿ ಸಂಸ್ಥೆ: ಜಿಲ್ಲಾ ಪಂಚಾಯಿತಿ
ಹುದ್ದೆ ಹೆಸರು: ತಾಂತ್ರಿಕ ಸಹಾಯ ಹುದ್ದೆಗಳು
ಒಟ್ಟು ಹುದ್ದೆ: 19
ಪೋಸ್ಟಿಂಗ್: ಮಂಡ್ಯ
ಅರ್ಜಿ ಸಲ್ಲಿಕೆ ಕೊನೆ ದಿನ: ಅಕ್ಟೋಬರ್ 20
ಮಾಸಿಕ ವೇತನ: ನಿಯಮಾನುಸಾರ
ಅರ್ಜಿ ಸಲ್ಲಿಕೆ ವಿಧಾನ: ಆನ್‌ಲೈನ್
ಹುದ್ದೆಗಳ ಇತರ ಮಾಹಿತಿ ನೋಡುವುದಾದರೆ, ಒಟ್ಟು 19 ಹುದ್ದೆಗಳಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಸ್ಟೇಟ್ 1, ಟೆಕ್ನಿಕಲ್ ಅಸಿಸ್ಟೆಂಟ್ ಫಾರೆಸ್ಟ್ರಿ 3, ಟೆಕ್ನಿಕಲ್ ಅಸಿಸ್ಟೆಂಟ್ ಹಾರ್ಟಿಕಲ್ಚರ್ ಮತ್ತು ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ ಹುದ್ದೆ ತಲಾ 4, ಟೆಕ್ನಿಕಲ್ ಅಸಿಸ್ಟೆಂಟ್ ಸಿರಿಕಲ್ಚರ್ 2 ಹಾಗೂ ಟೆಕ್ನಿಕಲ್ ಅಸಿಸ್ಟೆಂಟ್ ಅಗ್ರಿಕಲ್ಚರ್ 5 ಹುದ್ದೆಗಳು ಖಾಲಿ ಇವೆ ಎಂದು ನೇಮಕಾತಿ ಅಧಿಸೂಚನೆ ಮಾಹಿತಿ ನೀಡಿದೆ.
ಶೈಕ್ಷಣಿಕ ಅರ್ಹತೆ ಏನಿರಬೇಕು?
ಟೆಕ್ನಿಕಲ್ ಅಸಿಸ್ಟೆಂಟ್ ಸ್ಟೇಟ್ ಹುದ್ದೆ ಸೇರಿದಂತೆ ಎಲ್ಲ ಹುದ್ದೆಗಳಿಗೆ ಇಲ್ಲಿರುವ ಬಿಐ/ಬಿ.ಟೆಕ್, ಬಿ.ಎಸ್.ಸಿ ಮತ್ತು ಬಿ.ಕಾಂ ಪದವಿ ಆಧಾರದಲ್ಲಿ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಈ ಪದವಿ ಕೋರ್ಸ್‌ಗಳನ್ನು ಅಭ್ಯರ್ಥಿಗಳು ಕಡ್ಡಾಯವಾಗಿ ಮುಗಿಸಿರಬೇಕು.
ವಯಸ್ಸಿನ ಮಿತಿ ವಿವರ
ಈ ವಿವಿಧ ಹುದ್ದೆಗಳಿಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 21 ರಿಂದ 40 ಮತ್ತು 45 ವರ್ಷ ಆಗಿರಬೇಕು ಎಂದು ತಿಳಿಸಲಾಗಿದೆ. ಇನ್ನು ಜಾತಿ ಮೀಸಲಾತಿಗೆ ಅನುಗುಣವಾಗಿ ಅರ್ಹ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗುತ್ತದೆ.
ಅಭ್ಯರ್ಥಿಗಳ ಆಯ್ಕೆ ಹೇಗೆ?
ಅರ್ಹ ಅಭ್ಯರ್ಥಿಗಳಿಗೆ ಸಂಸ್ಥೆಯು ಮೊದಲು ಲಿಖಿತ ಪರೀಕ್ಷೆ ನಡೆಸುತ್ತದೆ. ಅಲ್ಲಿ ಉತ್ತಮ ಅಂಕ ಪಡೆದು ಶಾರ್ಟ್ ಲಿಸ್ಟ್ ಆಗುವವರಿಗೆ ನಂತರ ಸಂದರ್ಶನ ನಡೆಸಿ ಅಂತಿಮವಾಗಿ ಆಯ್ಕೆ ಮಾಡಲಾಗುತ್ತದೆ. ಆಯ್ಕೆ ಆಗುವವರಿಗೆ ಮಾಸಿಕವಾಗಿ ಕನಿಷ್ಠ 22,000 ರೂ.ದಿಂದ 28,000 ರೂಪಾಯಿ ವರೆಗೆ ವೇತನ ನೀಡಿ ಮಂಡ್ಯದಲ್ಲಿ ಪೋಸ್ಟಿಂಗ್ ನೀಡಲಾಗುತ್ತದೆ ಎಂದು ನೇಮಕಾತಿ ಮಾಹಿತಿ ನೀಡಿದೆ.
ಅರ್ಜಿ ಸಲ್ಲಿಕೆ ಹೇಗೆ?
ಅರ್ಹ ಅಭ್ಯರ್ಥಿಗಳು ಕೊನೆಯ ದಿನಾಂಕದವರೆಗೆ ಕಾಯದೇ ಈಗಲೇ ಆನ್‌ಲೈನ್ ಮೂಲಕ (https://sevasindhuservices.karnataka.gov.in/error.do) ಅರ್ಜಿ ಸಲ್ಲಿಸಬೇಕು ಎಂದು ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗೆ ಜಿಲ್ಲಾ ಪಂಚಾಯಿತಿಗೆ ಭೇಟಿ ನೀಡಬೇಕು.












Click it and Unblock the Notifications